ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿಯ ನಡೆಯನ್ನು ಮೆಚ್ಚಿದ ಮಾಜಿ ಪ್ರಧಾನಿ ಹೆಚ್.ಡಿ.ದೇವೇಗೌಡರು! » Dynamic Leader
December 13, 2024
ದೇಶ ಬೆಂಗಳೂರು ರಾಜಕೀಯ ರಾಜ್ಯ

ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿಯ ನಡೆಯನ್ನು ಮೆಚ್ಚಿದ ಮಾಜಿ ಪ್ರಧಾನಿ ಹೆಚ್.ಡಿ.ದೇವೇಗೌಡರು!

ಬೆಂಗಳೂರು: ದ್ವೇಷ ಮತ್ತು ಹಿಂಸಾಚಾರದ ವಿರುದ್ಧ ಹೋರಾಡುತ್ತಾ ಕನ್ಯಾಕುಮಾರಿಯಿಂದ ಕಾಶ್ಮೀರದವರೆಗೆ 3500 ಕಿ.ಮೀ. ನಡೆದು ಜನರಲ್ಲಿ ಸೌಹಾರ್ದತೆಯ ಸಂದೇಶವನ್ನು ಹರಡಿಸಿರುವ ರಾಹುಲ್ ಗಾಂಧಿಯವರ ನಡೆಗೆ ಮಾಜಿ ಪ್ರಧಾನಿ ಹಾಗೂ ಜೆಡಿಎಸ್ ಪಕ್ಷದ ರಾಷ್ಟ್ರೀಯ ಅಧ್ಯಕ್ಷ ಹೆಚ್.ಡಿ.ದೇವೇಗೌಡರು ಮೆಚ್ಚುಗೆಯನ್ನು ವ್ಯಕ್ತಪಡಿಸಿದ್ದಾರೆ.  

2023, ಜನವರಿ 10 ರಂದು ಕಾಂಗ್ರೆಸ್ ಪಕ್ಷದ ರಾಷ್ಟ್ರೀಯ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆಯವರು ಮಾಜಿ ಪ್ರಧಾನಿ ಹೆಚ್.ಡಿ.ದೇವೇಗೌಡರಿಗೆ ಪತ್ರ ಬರೆದು, ಜನವರಿ 30 ರಂದು ಶ್ರೀನಗರದಲ್ಲಿ ನಡೆಯಲಿರುವ ಭಾರತ್ ಜೋಡೋ ಯಾತ್ರೆಯ ಸಮಾರೋಪ ಸಮಾರಂಭದಲ್ಲಿ ಪಾಲ್ಗೊಳ್ಳುವಂತೆ ಆಹ್ವಾನ ನೀಡಿದ್ದರು. ಮಲ್ಲಿಕಾರ್ಜುನ ಖರ್ಗೆಯವರ ಆಹ್ವಾನ ಪತ್ರಕ್ಕೆ ಇಂದು ಪ್ರತಿಯುತ್ತರ ನೀಡಿದ ದೇವೇಗೌಡರು, ‘ಭಾರತ್ ಜೋಡೋ ಯಾತ್ರೆಯ ಸಮಾರೋಪ ಸಮಾರಂಭಕ್ಕೆ ನನ್ನನ್ನು ಆಹ್ವಾನಿಸಿರುವುದಕ್ಕೆ ಧನ್ಯವಾದಗಳು, ರಾಷ್ಟ್ರಪಿತ ಹುತಾತ್ಮರಾದ ದಿನದಂದು ಶ್ರೀನಗರದಲ್ಲಿ ಕಾರ್ಯಕ್ರಮವನ್ನು ಆಯೋಜಿಸುವುದು ತುಂಬಾ ಸೂಕ್ತವಾಗಿದೆ.

ನಾನು ಕಾರ್ಯಕ್ರಮಕ್ಕೆ ಖುದ್ದಾಗಿ ಹಾಜರಾಗಲು ಸಾಧ್ಯವಾಗದಿದ್ದರೂ ನನ್ನ ಶುಭಾಶಯಗಳು ರಾಹುಲ್ ಗಾಂಧಿಯವರಿಗಿದೆ. ಅವರು ದ್ವೇಷ ಮತ್ತು ಹಿಂಸಾಚಾರದ ವಿರುದ್ಧ ಹೋರಾಡುತ್ತಿದ್ದಾರೆ ಮತ್ತು ಕನ್ಯಾಕುಮಾರಿಯಿಂದ ಕಾಶ್ಮೀರದವರೆಗೆ 3500 ಕಿ.ಮೀ. ನಡೆದು ಜನರಲ್ಲಿ ಸೌಹಾರ್ದತೆಯ ಸಂದೇಶವನ್ನು ಹರಡಿಸಿದ್ದಾರೆ. ದಯವಿಟ್ಟು ಅವರಿಗೆ ನನ್ನ ಆಳವಾದ ಮೆಚ್ಚುಗೆಯನ್ನು ಸೂಚಿಸಿ’ ಎಂದು ಮಲ್ಲಿಕಾರ್ಜುನ ಖರ್ಗೆಯವರಿಗೆ ಇಂದು ಬರೆದ ಪತ್ರದಲ್ಲಿ ಮಾಜಿ ಪ್ರಧಾನಿ ಹೆಚ್.ಡಿ.ದೇವೇಗೌಡರು ತಿಳಿಸಿದ್ದಾರೆ. 

Related Posts