ಭಾರತೀಯ ಪೌರತ್ವ ನೀಡಲು ಜಿಲ್ಲಾಧಿಕಾರಿಗಳಿಗೆ ಅಧಿಕಾರ! » Dynamic Leader
December 13, 2024
ದೇಶ

ಭಾರತೀಯ ಪೌರತ್ವ ನೀಡಲು ಜಿಲ್ಲಾಧಿಕಾರಿಗಳಿಗೆ ಅಧಿಕಾರ!

ನವದೆಹಲಿ: ಪಾಕಿಸ್ತಾನ, ಅಫ್ಘಾನಿಸ್ತಾನ, ಬಾಂಗ್ಲಾದೇಶದಲ್ಲಿ ನೆಲೆಸಿರುವ ಮುಸ್ಲಿಮೇತರ ಅಲ್ಪಸಂಖ್ಯಾತರಿಗೆ ಭಾರತೀಯ ಪೌರತ್ವವನ್ನು ನೀಡಲು ಒಂಬತ್ತು ರಾಜ್ಯಗಳ 31 ಜಿಲ್ಲಾಧಿಕಾರಿಗಳಿಗೆ ಅಧಿಕಾರವನ್ನು ನೀಡಲಾಗಿದೆ ಎಂದು ಕೇಂದ್ರ ಸರ್ಕಾರ ತಿಳಿಸಿದೆ.

ಲೋಕಸಭೆಯ ಪ್ರಶ್ನೋತ್ತರ ವೇಳೆಯಲ್ಲಿ ಉತ್ತರಿಸಿದ ಕೇಂದ್ರ ಗೃಹ ಖಾತೆ ರಾಜ್ಯ ಸಚಿವ ನಿತ್ಯಾನಂದ ರಾಯ್, ‘ಪಾಕಿಸ್ತಾನ, ಅಫ್ಘಾನಿಸ್ತಾನ, ಬಾಂಗ್ಲಾದೇಶದಂತಹ ದೇಶಗಳಲ್ಲಿ ವಾಸಿಸುವ ಹಿಂದೂಗಳು, ಸಿಖ್ಖರು, ಬೌದ್ಧರು, ಜೈನರು, ಪಾರ್ಸಿಗಳು ಮತ್ತು ಕ್ರಿಶ್ಚಿಯನ್ನರಿಗೆ, ಪೌರತ್ವ ತಿದ್ದುಪಡಿ ಕಾಯ್ದೆಯನ್ನು ಹೊರತುಪಡಿಸಿ, ಪೌರತ್ವ ಕಾಯಿದೆ 1955ರ ಅಡಿಯಲ್ಲಿ ಭಾರತೀಯ ಪೌರತ್ವವನ್ನು ನೀಡಲಾಗುತ್ತಿದೆ.

ಪೌರತ್ವಕ್ಕಾಗಿ ಬಂದಿರುವ ಅರ್ಜಿಗಳ ಮೇಲೆ ಶೀಗ್ರದಲ್ಲಿ ಕ್ರಮ ಕೈಗೊಂಡು ಕೂಡಲೇ ಪೌರತ್ವ ನೀಡಲು, ಒಂಬತ್ತು ರಾಜ್ಯಗಳ 31 ಜಿಲ್ಲಾಧಿಕಾರಿಗಳಿಗೆ ಅಧಿಕಾರವನ್ನು ನೀಡಲಾಗಿದೆ.

ಅದರಂತೆ ಛತ್ತೀಸ್ ಗಢ, ಗುಜರಾತ್, ಮಧ್ಯಪ್ರದೇಶ, ಮಹಾರಾಷ್ಟ್ರ, ರಾಜಸ್ಥಾನ, ಉತ್ತರ ಪ್ರದೇಶ, ಹರಿಯಾಣ, ಪಂಜಾಬ್ ಹಾಗೂ ನವದೆಹಲಿಯ 31 ಕಲೆಕ್ಟರ್‌ಗಳಿಗೆ ಪೌರತ್ವ ನೀಡುವ ಸಂಬಂಧ ನಿರ್ಧಾರಗಳನ್ನು ಕೈಗೊಳ್ಳಲು ಅಧಿಕಾರ ನೀಡಲಾಗಿದೆ’ ಎಂದು ಹೇಳಿದರು.

Related Posts