ಮಮತಾ ಬ್ಯಾನರ್ಜಿಯನ್ನು ಭೇಟಿ ಮಾಡಿದ ಹೆಚ್.ಡಿ.ಕುಮಾರಸ್ವಾಮಿ! » Dynamic Leader
December 4, 2024
ರಾಜಕೀಯ

ಮಮತಾ ಬ್ಯಾನರ್ಜಿಯನ್ನು ಭೇಟಿ ಮಾಡಿದ ಹೆಚ್.ಡಿ.ಕುಮಾರಸ್ವಾಮಿ!

ಕೋಲ್ಕತ್ತಾ: ಪಶ್ಚಿಮ ಬಂಗಾಳಕ್ಕೆ ಭೇಟಿ ನೀಡಿದ ಕರ್ನಾಟಕ ರಾಜ್ಯ ಜಾತ್ಯತೀತ ಜನತಾ ದಳದ ನಾಯಕ ಹಾಗೂ ಮಾಜಿ ಮುಖ್ಯಮಂತ್ರಿ ಹೆಚ್.ಡಿ.ಕುಮಾರಸ್ವಾಮಿ ಅವರು ಇಂದು ಪಕ್ಷಿಮ ಬಂಗಾಳ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಅವರನ್ನು ಭೇಟಿಯಾದರು.

ಒಡಿಶಾಗೆ ಭೇಟಿ ನೀಡಿದ ಪಶ್ಚಿಮ ಬಂಗಾಳ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ, ಒಡಿಶಾ ಬಿಜು ಜನತಾದಳ ನಾಯಕ ಹಾಗೂ ಮುಖ್ಯಮಂತ್ರಿ ನವೀನ್ ಪಟ್ನಾಯಕ್ ಅವರನ್ನು ಭೇಟಿಯಾದರು. ಬೇಟಿಯ ಸಂದರ್ಭದಲ್ಲಿ 2024ರ ಲೋಕಸಭೆ ಚುನಾವಣೆ ಮೈತ್ರಿ ಕುರಿತು ಮಾತುಕತೆ ನಡೆಸಿದ್ದರು ಎನ್ನಲಾಗಿದೆ.

ಈ ಹಿನ್ನಲೆಯಲ್ಲಿ ಕರ್ನಾಟಕದ ಮಾಜಿ ಮುಖ್ಯಮಂತ್ರಿ ಹೆಚ್.ಡಿ.ಕುಮಾರಸ್ವಾಮಿ ಪಶ್ಚಿಮ ಬಂಗಾಳಕ್ಕೆ ತೆರಳಿ, ಕೋಲ್ಕತ್ತಾದಲ್ಲಿ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಅವರನ್ನು ಭೇಟಿಯಾಗಿರುವುದು ರಾಜಕೀಯ ವಲಯದಲ್ಲಿ ಬಿಸಿಬಿಸಿ ಚರ್ಚೆಗೆ ಕಾರಣವಾಗಿದೆ. ಇಬ್ಬರೂ ರಾಷ್ಟ್ರೀಯ ರಾಜಕೀಯದ ಬಗ್ಗೆ ಮತ್ತು ವಿಶೇಷವಾಗಿ 2024ರ ಲೋಕಸಭಾ ಚುನಾವಣೆಯ ಬಗ್ಗೆ ಮಾತನಾಡಿದ್ದಾರೆ ಎಂದು ವರದಿಯಾಗಿದೆ.

ಹೆಚ್.ಡಿ.ಕುಮಾರಸ್ವಾಮಿ ನಂತರ ಮಾಧ್ಯಮದವರನ್ನು ಭೇಟಿ ಮಾಡಿದರು. ರಾಹುಲ್ ಗಾಂಧಿ ಅನರ್ಹತೆ ಬಗ್ಗೆ ಕೇಳಿದಾಗ, ‘ಇದು ಕೇಂದ್ರ ಸರ್ಕಾರದ ಕೆಲಸ ಎಂಬುದು ದೇಶಕ್ಕೆ ಗೊತ್ತಿದೆ. ರಾಹುಲ್ ಅನರ್ಹತೆಗೆ ಬಗ್ಗೆ ಆಶ್ಚರ್ಯಪಡುವಂಥದ್ದೇನೂ ಇಲ್ಲ’ ಎಂದರು.
HD Kumaraswamy to meet Mamata Banerjee in Kolkata this evening

Related Posts