ಮ್ಯಾಟ್ನಿ ನಿರ್ಮಾಪಕರ ಮತ್ತೊಂದು ಚಿತ್ರ "ಎಲ್ಲಾ ನಿನಗಾಗಿ" » Dynamic Leader
December 4, 2024
ಸಿನಿಮಾ

ಮ್ಯಾಟ್ನಿ ನಿರ್ಮಾಪಕರ ಮತ್ತೊಂದು ಚಿತ್ರ “ಎಲ್ಲಾ ನಿನಗಾಗಿ”

ವರದಿ: ಅರುಣ್ ಜಿ.,

ವಿದ್ಯಾ ಶ್ರೀಮುರಳಿ ಅರ್ಪಿಸುತ್ತಿರುವ ಈ ಚಿತ್ರದ ಶೀರ್ಷಿಕೆ ಬಿಡುಗಡೆ ಮಾಡಿ ಶುಭಕೋರಿದ ನಟ ಶ್ರೀಮುರಳಿ.

ವಿದ್ಯಾ ಶ್ರೀಮುರಳಿ ಅರ್ಪಿಸುವ, F3 ಪ್ರೊಡಕ್ಷನ್ಸ್ ಲಾಂಛನದಲ್ಲಿ ನಿರ್ಮಾಣವಾಗಿರುವ ಹಾಗೂ ನೀನಾಸಂ ಸತೀಶ್ ನಾಯಕರಾಗಿ ನಟಿಸಿರುವ “ಮ್ಯಾಟ್ನಿ” ಚಿತ್ರ ಜೂನ್‌ನಲ್ಲಿ ಬಿಡುಗಡೆಯಾಗಲಿದೆ‌. ಈಗ ಅದೇ ಸಂಸ್ಥೆಯ ಲಾಂಛನದಲ್ಲಿ “ಎಲ್ಲಾ ನಿನಗಾಗಿ” ಎಂಬ ನೂತನ ಚಿತ್ರ ಆರಂಭವಾಗಿದೆ‌. ವಿದ್ಯಾ ಶ್ರೀಮುರಳಿ ಅವರೆ ಈ ಚಿತ್ರವನ್ನೂ ಅರ್ಪಿಸುತ್ತಿದ್ದಾರೆ‌. ರಾಹುಲ್ ಆರ್ಕಾಟ್ ಹಾಗೂ ಧನ್ಯ ರಾಮಕುಮಾರ್ ಈ ಚಿತ್ರದ ನಾಯಕ – ನಾಯಕಿಯಾಗಿ ಅಭಿನಯಿಸುತ್ತಿದ್ದಾರೆ. ಕಾಶಿ ನಿರ್ದೇಶಿಸುತ್ತಿದ್ದಾರೆ. ಇತ್ತೀಚೆಗೆ ಈ ನೂತನ ಚಿತ್ರದ‌ ಸ್ಕ್ರಿಪ್ಟ್ ಪೂಜೆ ಹಾಗೂ ಶೀರ್ಷಿಕೆ ಅನಾವರಣ ಮಹಾಲಕ್ಷ್ಮಿ ಲೇಔಟ್‌ನ ಪಂಚಮುಖಿ ದೇವಸ್ಥಾನದಲ್ಲಿ ನೆರವೇರಿತು. ಖ್ಯಾತ ನಟ ಶ್ರೀಮುರಳಿ ಮುಖ್ಯ ಅತಿಥಿಗಳಾಗಿ ಆಗಮಿಸಿ ಚಿತ್ರತಂಡಕ್ಕೆ ಶುಭ ಕೋರಿದರು. ವಿಭಿನ್ನ ಕಥಾಹಂದರ ಹೊಂದಿರುವ ಈ ಚಿತ್ರಕ್ಕೆ “ಎಲ್ಲಾ ನಿನಗಾಗಿ” ಎಂದು ಹೆಸರಿಡಲಾಗಿದೆ. ಮೇ ಎರಡನೇ ವಾರದಲ್ಲಿ ಚಿತ್ರೀಕರಣ ಆರಂಭವಾಗಲಿದೆ.

Related Posts