ರಜನಿಕಾಂತ್ ವಿಶೇಷ ಪಾತ್ರದಲ್ಲಿ ಕಾಣಿಸಿಕೊಳ್ಳುವ ಲಾಲ್ ಸಲಾಂ ಚಿತ್ರಕ್ಕೆ ಮಾಜಿ ಕ್ರಿಕೆಟಿಗ ಕಪಿಲ್ ದೇವ್‌ ಎಂಟ್ರಿ! » Dynamic Leader
October 11, 2024
ಸಿನಿಮಾ

ರಜನಿಕಾಂತ್ ವಿಶೇಷ ಪಾತ್ರದಲ್ಲಿ ಕಾಣಿಸಿಕೊಳ್ಳುವ ಲಾಲ್ ಸಲಾಂ ಚಿತ್ರಕ್ಕೆ ಮಾಜಿ ಕ್ರಿಕೆಟಿಗ ಕಪಿಲ್ ದೇವ್‌ ಎಂಟ್ರಿ!

ಐಶ್ವರ್ಯಾ ರಜನಿಕಾಂತ್ ಸದ್ಯ ‘ಲಾಲ್ ಸಲಾಂ’ ಚಿತ್ರವನ್ನು ನಿರ್ದೇಶಿಸುತ್ತಿದ್ದಾರೆ. ಇದರಲ್ಲಿ ವಿಷ್ಣು ವಿಶಾಲ್ ಮತ್ತು ವಿಕ್ರಾಂತ್ ಪ್ರಮುಖ ಪಾತ್ರಗಳಲ್ಲಿ ನಟಿಸಿದ್ದಾರೆ. ನಟ ರಜನಿಕಾಂತ್ ವಿಶೇಷ ಪಾತ್ರದಲ್ಲಿ ಕಾಣಿಸಿಕೊಂಡಿದ್ದಾರೆ. ಲೈಕಾ ನಿರ್ಮಾಣದ ಈ ಚಿತ್ರಕ್ಕೆ ಎ.ಆರ್.ರಹಮಾನ್‌ ಸಂಗೀತ ಸಂಯೋಜಿಸಿದ್ದಾರೆ.

ನಟ ರಜನೀಕಾಂತ್ ಹಾಗೂ ಮಾಜಿ ಕ್ರಿಕಟಿಗ ಕಪಿಲ್ ದೇವ್

ಚಿತ್ರದ ಶೂಟಿಂಗ್ ಭರದಿಂದ ಸಾಗುತ್ತಿದೆ. ‘ಲಾಲ್ ಸಲಾಂ’ ಚಿತ್ರದಲ್ಲಿ ಮೊಯ್ದೀನ್ ಭಾಯ್ ಪಾತ್ರವನ್ನು ನಟ ರಜನಿಕಾಂತ್ ಮಾಡಲಿದ್ದಾರೆ ಎಂದು ಚಿತ್ರತಂಡ ಪ್ರಕಟಿಸಿತ್ತು. ಇತ್ತೀಚೆಗಷ್ಟೇ ನಟ ರಜನಿಕಾಂತ್ ಅವರು ‘ಲಾಲ್ ಸಲಾಂ’ ಚಿತ್ರೀಕರಣಕ್ಕಾಗಿ ಮುಂಬೈಗೆ ತೆರಳಿದ್ದರು.

ಈ ಸಂದರ್ಭದಲ್ಲಿ ನಟ ರಜನಿಕಾಂತ್ ಅವರು ‘ಲಾಲ್ ಸಲಾಂ’ ಚಿತ್ರದ ಹೊಸ ಅಪ್‌ಡೇಟ್ ಹಂಚಿಕೊಂಡಿದ್ದಾರೆ. ಅದರಂತೆ ಮಾಜಿ ಕ್ರಿಕೆಟಿಗ ಕಪಿಲ್ ದೇವ್ ಅವರು ಈ ಚಿತ್ರದಲ್ಲಿ ನಟಿಸಿದ್ದಾರೆ ಎಂಬ ವಿಷಯವನ್ನು ರಜನಿಕಾಂತ್ ತಮ್ಮ ಟ್ವಿಟ್ಟರ್ ಖಾತೆಯಲ್ಲಿ ಹಂಚಿಕೊಂಡಿದಾರೆ. “ಮೊದಲ ಬಾರಿಗೆ ವಿಶ್ವಕಪ್ ಗೆಲ್ಲುವ ಮೂಲಕ ಭಾರತವನ್ನು ಹೆಮ್ಮೆಪಡುವಂತೆ ಮಾಡಿದ ಮಹಾನ್, ಗೌರವಾನ್ವಿತ ಮತ್ತು ಅದ್ಭುತ ವ್ಯಕ್ತಿಯಾದ ಕಪಿಲ್ ದೇವ್‌ಜಿ ಅವರೊಂದಿಗೆ ಕೆಲಸ ಮಾಡುವುದು ನನಗೆ ಸಂತೋಷವಾಗಿದೆ” ಎಂದು ಅವರು ಪೋಸ್ಟ್ ಮಾಡಿದ್ದಾರೆ. ಈ ಪೋಸ್ಟ್ ಇದೀಗ ಅಭಿಮಾನಿಗಳಲ್ಲಿ ನಿರೀಕ್ಷೆಯನ್ನು ಮೂಡಿಸಿದೆ.

Related Posts