ಸಾಮಾನ್ಯ ಪ್ರವೇಶ ಪರೀಕ್ಷಾ ಕೇಂದ್ರಗಳ (CET) ಸುತ್ತಮುತ್ತ 200 ಮೀಟರ್ ವರೆಗೆ ನಿಷೇಧ! ಬೆಂಗಳೂರು ನಗರ ಪೊಲೀಸ್ » Dynamic Leader
December 4, 2024
ಬೆಂಗಳೂರು

ಸಾಮಾನ್ಯ ಪ್ರವೇಶ ಪರೀಕ್ಷಾ ಕೇಂದ್ರಗಳ (CET) ಸುತ್ತಮುತ್ತ 200 ಮೀಟರ್ ವರೆಗೆ ನಿಷೇಧ! ಬೆಂಗಳೂರು ನಗರ ಪೊಲೀಸ್

ಕರ್ನಾಟಕ ಪರೀಕ್ಷಾ ಪ್ರಾಧೀಕಾರದ ವತಿಯಿಂದ ವೃತ್ತಿಪರ ಕೋರ್ಸ್ ಗಳ ಪ್ರವೇಶಕ್ಕಾಗಿ ಸಾಮಾನ್ಯ ಪ್ರವೇಶ ಪರೀಕ್ಷೆಯು (CET) ದಿನಾಂಕ: 20-05-2023 ಮತ್ತು 21-05-2023 ರಂದು ನಡೆಯಲಿದ್ದು, ಪರೀಕ್ಷೆಗಳನ್ನು ಸುಗಮವಾಗಿ ಹಾಗೂ ಸುವ್ಯವಸ್ಥಿತವಾಗಿ ನಡೆಸುವ ಸಲುವಾಗಿ ಪರೀಕ್ಷಾ ಕೇಂದ್ರಗಳ ಸುತ್ತಮುತ್ತಲಿನ 200 ಮೀಟರ್ ಪ್ರದೇಷವನ್ನು ನಿಷೇಧಿತ ಸ್ಥಳವೆಂದು ಘೋಷಿಸಲಾಗಿದೆ. ಮತ್ತು ಪರೀಕ್ಷಾ ಕೇಂದ್ರಗಳ ಸುತ್ತಮುತ್ತ ಇರುವ ಜೆರಾಕ್ಸ್ ಕೇಂದ್ರಗಳನ್ನು ಮುಚ್ಚುವಂತೆ ಸೂಚಿಸಲಾಗಿದೆ.

“ಸಾಮಾನ್ಯ ಪ್ರವೇಶ ಪರೀಕ್ಷೆಯನ್ನು (CET) ಸುಸೂತ್ರವಾಗಿ ಹಾಗೂ ದೋಷರಹಿತವಾಗಿ ನಡೆಸುವ ದೃಷ್ಟಿಯಿಂದ, ಹಾಗೂ ಜಿಲ್ಲಾಧಿಕಾರಿಗಳು, ಬೆಂಗಳೂರು ನಗರ ಜಿಲ್ಲೆ ಇವರ ಸೂಚನೆಯ ಮೇರೆಗೆ ದಂಡ ಪ್ರಕ್ರಿಯಾ ಸಂಹಿತೆಯ ಕಲಂ 144ನೇ ಪ್ರರಕರಣದ ಅನ್ವಯ ಪ್ರದತ್ತರವಾದ ಅಧಿಕಾರವನ್ನು ಚಲಾಯಿಸಿ, ದಿನಾಂಕ: 20-05-2023 ರಂದು ಬೆಳಿಗ್ಗೆ 9-00 ಗಂಟೆಯಿಂದ ಮಧ್ಯಾಹ್ನ 3-50 ಗಂಟೆಯವರೆಗೆ ಮತ್ತು ದಿನಾಂಕ: 21-05-2023 ಬೆಳಿಗ್ಗೆ 9-00 ಗಂಟೆಯಿಂದ ಮಧ್ಯಾಹ್ನ 3-50 ಗಂಟೆಯವರೆಗೆ ಬೆಂಗಳೂರು ನಗರ ಪೊಲೀಸ್ ಕಮೀಷನರೇಟ್ ವ್ಯಾಪ್ತಿಯಲ್ಲಿರುವ ವೃತ್ತಿಪರ ಕೋರ್ಸ್ ಗಳ ಪ್ರವೇಶ ಪರೀಕ್ಷಾ ಕೇಂದ್ರಗಳ 200 ಮೀಟರ್ ಸುತ್ತಲಿನ ಪ್ರದೇಶವನ್ನು ನಿಷೇಧಿತ ಪ್ರದೇಶವೆಂದು ಘೋಷಿಸಿ ಹಾಗೂ ಸದರಿ ಪರೀಕ್ಷಾ ಕೇಂದ್ರಗಳ ಸುತ್ತಲಿನ ಎಲ್ಲಾ ಜೆರಾಕ್ಸ್ ಅಂಗಡಿಗಳನ್ನು ಮುಚ್ಚುವಂತೆ ಘೋಷಿಸಿ ಪ್ರತಿಬಂಧಕಾಜ್ಞೆಯನ್ನು ವಿಧಿಸಿ ಆದೇಶ ಹೊರಡಿಸಲಾಗಿದೆ” ಎಂದು ವಿಷೇಶ ಪೊಲೀಸ್ ಆಯುಕ್ತರು, ಸಂಚಾರ ಮತ್ತು ಪೊಲೀಸ್ ಆಯುಕ್ತರು (ಪ್ರಭಾರ) ಹಾಗೂ ಅಪರ ಜಿಲ್ಲಾ ದಂಡಾಧಿಕಾರಿಗಳಾದ ಡಾ.ಎಂ.ಎ.ಸಲೀಂ ಅವರು ಪತ್ರಿಕಾ ಪ್ರಕಟಣೆಯನ್ನು ಹೊರಡಿಸಿದ್ದಾರೆ.

     

Related Posts