ಕನ್ನಡದ ಪ್ರತಿಷ್ಠಿತ ಆನಂದ್ ಆಡಿಯೋ ಸಂಸ್ಥೆಗೆ ದೊರಕಿದೆ "ಡೈಮಂಡ್ ಬಟನ್‌" » Dynamic Leader
December 3, 2024
ಸಿನಿಮಾ

ಕನ್ನಡದ ಪ್ರತಿಷ್ಠಿತ ಆನಂದ್ ಆಡಿಯೋ ಸಂಸ್ಥೆಗೆ ದೊರಕಿದೆ “ಡೈಮಂಡ್ ಬಟನ್‌”

ವರದಿ: ಅರುಣ್ ಜಿ.,

ಕಳೆದ 24 ವರ್ಷಗಳಿಂದ ಶ್ರೋತೃಗಳಿಗೆ ಕನ್ನಡ ಚಿತ್ರಗಳ ಸುಮಧುರ ಹಾಡುಗಳನ್ನು ತಲುಪಿಸುತ್ತ ಬಂದಿರುವ ಪ್ರತಿಷ್ಠಿತ ಆನಂದ್ ಆಡಿಯೋ ಸಂಸ್ಥೆಗೆ ಮುಂದಿನ ವರ್ಷ ರಜತ ವರ್ಷದ ಸಂಭ್ರಮ. 

ಈಗ ಆನಂದ್ ಆಡಿಯೋ ಯಶಸ್ಸಿನ ಕಿರೀಟಕ್ಕೆ ಮತ್ತೊಂದು ಗರಿ. ಆನಂದ್ ಆಡಿಯೋ ಯೂಟ್ಯೂಬ್ ಚಾನಲನ್ನು ಒಂದು ಕೋಟಿ ಜನರು ಸಬ್ ಸ್ಕ್ರೈಬ್ ಮಾಡಿಕೊಂಡಿದ್ದಾರೆ. ಹಾಗಾಗಿ ಯೂಟ್ಯೂಬ್ ಸಂಸ್ಥೆಯಿಂದ ಆನಂದ್ ಆಡಿಯೋ ಸಂಸ್ಥೆಗೆ ಡೈಮಂಡ್ ಬಟನ್ ಸಿಕ್ಕಿದೆ. 

ಮೇ 24, ಆನಂದ್ ಆಡಿಯೋ ಮಾಲೀಕರಾದ ಮೋಹನ್ ಚಾಬ್ರಿಯಾ ಅವರ ಹುಟ್ಟುಹಬ್ಬ. ಅದೇ ದಿನ ಡೈಮಂಡ್ ಬಟನ್ ದೊರಕಿರುವುದು ಖುಷಿಯ ವಿಚಾರ.  ಇದಕ್ಕೆ ಕಾರಣರಾದ ಕನ್ನಡ ಚಿತ್ರರಂಗದ ನಿರ್ಮಾಪಕರಿಗೆ, ನಿರ್ದೇಶಕರಿಗೆ, ಸಂಗೀತ ನಿರ್ದೇಶಕರಿಗೆ, ಗಾಯಕರಿಗೆ ಹಾಗೂ ಕನ್ನಡ ಕಲಾಭಿಮಾನಿಗಳಿಗೆ ಆನಂದ್ ಆಡಿಯೋ ಸಂಸ್ಥೆಯ ಶ್ಯಾಮ್ ಚಾಬ್ರಿಯಾ ಮತ್ತು ಆನಂದ್ ಚಾಬ್ರಿಯಾ ಧನ್ಯವಾದಗಳನ್ನು ತಿಳಿಸಿದ್ದಾರೆ

Related Posts