ಗೋಹತ್ಯೆ ನಿಷೇಧ ಕಾಯ್ದೆ ರದ್ದುಗೊಳಿಸುವ ಬಗ್ಗೆ ಸೂಕ್ತ ನಿರ್ಧಾರ! ಪಶುಸಂಗೋಪನೆ ಸಚಿವ ಕೆ.ವೆಂಕಟೇಶ್ » Dynamic Leader
December 13, 2024
ರಾಜಕೀಯ

ಗೋಹತ್ಯೆ ನಿಷೇಧ ಕಾಯ್ದೆ ರದ್ದುಗೊಳಿಸುವ ಬಗ್ಗೆ ಸೂಕ್ತ ನಿರ್ಧಾರ! ಪಶುಸಂಗೋಪನೆ ಸಚಿವ ಕೆ.ವೆಂಕಟೇಶ್

ಮೈಸೂರು: “ನನ್ನ ಮನೆಯಲ್ಲೂ ಮೂರ್ನಾಲ್ಕು ಹಸುಗಳಿವೆ. ಈ ಪೈಕಿ ಒಂದು ಹಸು ಸತ್ತಾಗ ಗುಂಡಿ ತೋಡಿ ಹೂಳಲು ತುಂಬಾ ಕಷ್ಟ ಪಡಬೇಕಾಯಿತು. 25 ಮಂದಿ ಬಂದರೂ ಸತ್ತ ಹಸುವಿನ ಮೃತದೇಹ ಎತ್ತಲು ಸಾಧ್ಯವಾಗಲಿಲ್ಲ. ಕೊನೆಗೆ ಜೆಸಿಬಿ ತರಿಸಿ ಮೃತ ಹಸುವನ್ನು ಎತ್ತಿಸಿ ಗುಂಡಿತೋಡಿ ಹೂಳಬೇಕಾಯಿತು. ಹೀಗಾಗಿ ಗೋಹತ್ಯೆ ನಿಷೇಧ ಕಾಯ್ದೆ ರದ್ದುಗೊಳಿಸುವ ಬಗ್ಗೆ ಚರ್ಚೆ ಮಾಡಿ ಸೂಕ್ತ ಕ್ರಮ ಕೈಗೊಳ್ಳುತ್ತೇವೆ. ರೈತರಿಗೆ ಅನುಕೂಲ ಆಗುವ ರೀತಿಯಲ್ಲಿ ಸೂಕ್ತ ತೀರ್ಮಾನ ಮಾಡುತ್ತೇವೆ” ಎಂದು ಪಶುಸಂಗೋಪನೆ ಸಚಿವ ಕೆ.ವೆಂಕಟೇಶ್ ಸ್ಪಷ್ಟಪಡಿಸಿದ್ದಾರೆ.

“ರಾಜ್ಯಕ್ಕೆ ಅಮುಲ್ ಬಂದಿಲ್ಲ. ಅಮುಲ್ ನಿಂದ ನಂದಿನಿಗೆ ತೊಂದರೆ ಆಗಿಲ್ಲ. ಮುಂದಿನ ದಿನಗಳಲ್ಲಿ ಅಮುಲ್ ಬಂದಾಗ ನೋಡೋಣ. ನಂದಿನಿ ಉತ್ಪನ್ನಗಳ ಉತ್ತೇಜನಕ್ಕೆ ಕ್ರಮ ಕೈಗೊಳ್ಳುತ್ತೇವೆ. ಹಸು ದತ್ತು ಯೋಜನೆ ಏನಾಗಿದೆ ಎಂದು ಪರಿಶೀಲಿಸುತ್ತೇವೆ. ಗೋ ಶಾಲೆಗಳ ನಿರ್ವಹಣೆ ಮಾಡಲು ಹಣದ ಕೊರತೆಯಿಲ್ಲ. ಆದರೆ ನಿರ್ವಹಣೆ ಸರಿಯಾಗಿ ಆಗಿಲ್ಲ. ಮುಂದೆ ಎಲ್ಲವನ್ನೂ ಸರಿಪಡಿಸುತ್ತೇವೆ” ಎಂದು ಸಚಿವರು ಭರವಸೆ ನೀಡಿದ್ದಾರೆ.

Related Posts