ಕ್ಷೇತ್ರದ ಅಭಿವೃದ್ಧಿ ನಿಧಿಯಲ್ಲಿ ಮಗನ ಮದುವೆ ಮಾಡಿದ ಬಿಜೆಪಿ ಸಂಸದ!
ಹೈದರಾಬಾದ್: ತಮ್ಮ ಕ್ಷೇತ್ರ ಅಭಿವೃದ್ಧಿ ನಿಧಿಯಿಂದ ಸ್ವಂತ ಮನೆ ಕಟ್ಟಿಕೊಂಡು ಮಗನಿಗೆ ಮದುವೆಯನ್ನೂ ಮಾಡಿದ್ದೇನೆ ಎಂದು ತೆಲಂಗಾಣ ಬಿಜೆಪಿ ಸಂಸದ ಸೋಯಂ ಬಾಪುರಾವ್ ಹೇಳಿರುವ ಮಾತು ವಿವಾದಕ್ಕೆ ಕಾರಣವಾಗಿದೆ.
ಪ್ರತಿಯೊಬ್ಬ ಸಂಸದರಿಗೂ ಕ್ಷೇತ್ರ ಅಭಿವೃದ್ಧಿ ನಿಧಿ ಯೋಜನೆಯಡಿ (MPLADS) ಮಂಜೂರು ಮಾಡುವ ಹಣವನ್ನು, ಅವರ ಕ್ಷೇತ್ರಗಳಲ್ಲಿ ವರ್ಷಕ್ಕೆ ರೂ.5 ಕೋಟಿ ವರೆಗೆ ಖರ್ಚು ಮಾಡಿ, ಅಭಿವೃದ್ಧಿ ಮತ್ತು ಸುಧಾರಣೆ ಕಾರ್ಯಗಳನ್ನು ಕೈಗೊಳ್ಳಬೇಕು. ಇದನ್ನು ಕೇಂದ್ರ ಅಂಕಿಅಂಶ ಮತ್ತು ಯೋಜನೆ ಅನುಷ್ಠಾನ ಇಲಾಖೆ ಮೇಲ್ವಿಚಾರಣೆ ಮಾಡುತ್ತದೆ.
https://twitter.com/KP_Aashish/status/1670710328638988288?s=20
ಈ ಹಿನ್ನಲೆಯಲ್ಲಿ, ತೆಲಂಗಾಣ ರಾಜ್ಯ ಆದಿಲಾಬಾದ್ ಲೋಕಸಭಾ ಕ್ಷೇತ್ರ ಬಿಜೆಪಿ ಸಂಸದ ಸೋಯಂ ಬಾಪುರಾವ್, ಇತ್ತೀಚೆಗೆ ಪಕ್ಷದ ಪದಾಧಿಕಾರಿಗಳ ಸಭೆಯಲ್ಲಿ ಮಾತನಾಡಿರುವ ವಿಡಿಯೋ ಈಗ ವೈರಲ್ ಆಗಿದೆ. ಅದರಲ್ಲಿ “ಇತ್ತೀಚೆಗೆ ನನ್ನ ಕ್ಷೇತ್ರದ ಅಭಿವೃದ್ಧಿಗೆ 2.5 ಕೋಟಿ ಹಣವನ್ನು ಕೇಂದ್ರ ಸರ್ಕಾರ ಮಂಜೂರು ಮಾಡಿತ್ತು, ಈ ಹಣದಲ್ಲಿ ಸ್ವಂತವಾಗಿ ಮನೆ ಕಟ್ಟಿದ್ದೇನೆ; ಮಗನ ಮದುವೆಗೆ ಖರ್ಚು ಮಾಡಿದ್ದೇನೆ” ಎಂದು ಹೇಳಿದ್ದಾರೆ. ಈ ವಿಡಿಯೋ ಈಗ ವೈರಲ್ ಆಗಿದೆ.