ಅಂತರ್ ರಾಜ್ಯ ಗಾಂಜಾ ಮಾರಾಟಗಾರನ ಬಂಧನ; 20 ಕೆಜಿ ಗಾಂಜಾ ವಶ! » Dynamic Leader
September 21, 2024
ಕ್ರೈಂ ರಿಪೋರ್ಟ್ಸ್

ಅಂತರ್ ರಾಜ್ಯ ಗಾಂಜಾ ಮಾರಾಟಗಾರನ ಬಂಧನ; 20 ಕೆಜಿ ಗಾಂಜಾ ವಶ!

ಬೆಂಗಳೂರು ನಗರದ ಪಶ್ಚಿಮ ವಿಭಾಗದ ಕಾಟನ್‌ಪೇಟೆ ಪೊಲೀಸ್ ಠಾಣೆಯ ಪೊಲೀಸರು ಆಂಧ್ರಪ್ರದೇಶ ರಾಜ್ಯದಿಂದ ರೈಲಿನಲ್ಲಿ ತಂದು ಗಾಂಜಾ ಮಾರಾಟ ಮಾದುತ್ತಿದ್ದ ಆರೋಪಿಯನ್ನು ಬಂಧಿಸಿ, ಸುಮಾರು 10 ಲಕ್ಷ ರೂ. ಬೆಲೆಬಾಳುವ 20 ಕೆಜಿ ಗಾಂಜಾವನ್ನು ವಶಪಡಿಸಿಕೊಂಡಿರುತ್ತಾರೆ.

ಕಾಟನ್‌ಪೇಟೆ ಪೊಲೀಸ್ ಠಾಣೆಯಲ್ಲಿ ದಾಖಲಾಗಿದ್ದ ಎನ್‌ಡಿಪಿಎಸ್ ಕಾಯ್ದೆ ಪ್ರಕರಣದಲ್ಲಿ ದಸ್ತಗಿರಿ ಮಾಡಿಸಿದ ಆರೋಪಿಯು, ಆಂಧ್ರ ಪ್ರದೇಶ ಮೂಲದ ಅಪರಿಚಿತ ವ್ಯಕ್ತಿಯೊಬ್ಬ ಆಂಧ್ರಪ್ರದೇಶದಿಂದ ರೈಲಿನಲ್ಲಿ ಆಗ್ಗಾಗ್ಗೆ ಗಾಂಜಾ ತಂದು ಮಾರಾಟ ಮಾಡುತ್ತಿರುವ ಬಗ್ಗೆ ಮಹಿತಿ ನೀಡಿರುತ್ತಾನೆ.

ಸದರಿ ಮಾಹಿತಿಯನ್ನು ಆಧರಿಸಿ, ಗುಮಾನಿ ಆಸಾಮಿಗಳ ಚಲನವಲನಗಳ ಮೇಲೆ ನಿಗಾವಹಿಸಿ, ಆತನು ಗಾಂಜಾವನ್ನು ಮಾರಾಟ ಮಾಡುವ ಸಲುವಾಗಿ ಜೂನ್ 24 ರಂದು ಆಂಧ್ರ ಪ್ರದೇಶದಿಂದ ಬೆಂಗಳೂರಿಗೆ ಗಾಂಜಾವನ್ನು ರೈಲಿನಲ್ಲಿ ತೆಗೆದುಕೊಂಡು ಬರುತ್ತಿರುವ ಮಾಹಿತಿ ಸಂಗ್ರಹಿಸಿ, ರೈಲ್ವೇ ನಿಲ್ದಾಣದ ಸುತ್ತಮುತ್ತ ನಿಗಾವಹಿಸಿದ್ದು, ನಂತರ ಖಚಿತ ಮಾಹಿತಿ ಮೇರೆಗೆ, ಸದರಿ ಆಸಾಮಿಯು ಮಾರಾಟ ಮಾಡುವ ಸಲುವಾಗಿ ಗಾಂಜಾವನ್ನು ಬೇರೆಡೆಗೆ ಸಾಗಿಸಲು ರೈಲ್ವೇ ಬ್ಯಾಕ್ ಗೇಟ್ ರಸ್ತೆಯಲ್ಲಿ ನಿಂತಿರುವಾಗ ಆಸಾಮಿಯನ್ನು ವಶಕ್ಕೆ ಪಡೆಯಲಾಗಿದೆ.

ಆರೋಪಿ ಆಸಾಮಿಯನ್ನು ವಿಚಾರಣೆ ಮಾಡಲಾಗಿ ತಾನು, ಅರಕು ವ್ಯಾಲಿ ತಾಲ್ಲೂಕು, ವಿಶಾಖ ಪಟ್ಟಣಂ, ಆಂಧ್ರಪ್ರದೇಶ ರಾಜ್ಯ ಎಂದು ತಿಳಿಸಿದ್ದು, ತನ್ನೊಂದಿಗೆ ಗಾಂಜಾವನ್ನು ಮಾರಾಟ ಮಾಡಲು ತಂದಿರುವುದಾಗಿ ಒಪ್ಪಿಕೊಂಡ ಮೇರೆಗೆ, ಆರೋಪಿಯ ವಶದಲ್ಲಿದ್ದ ಸುಮಾರು 10 ಲಕ್ಷ ರೂ ಮೌಲ್ಯದ 20 ಕೆಜಿ ಮಾದಕ ವಸ್ತು ಗಾಂಜಾವನ್ನು ಅಮಾನತ್ತು ಪಡಿಸಿಕೊಂಡು, ಆರೋಪಿಯ ವಿರುದ್ಧ ಎನ್‌ಡಿಪಿಎಸ್ ಕಾಯ್ದೆ ರೀತ್ಯಾ ಪ್ರಕರಣ ದಾಖಲಿಸಲಾಗಿದೆ.

ಈ ಪ್ರಕರಣದ ಆರೋಪಿ ಮತ್ತು ಮಾಲು ಪತ್ತೆ ಕಾರ್ಯಚರಣೆಗೆ ಲಕ್ಷ್ಮಣ ಬಿ ನಿಂಬರಗಿ ಐಪಿಎಸ್, ಉಪ ಪೊಲೀಸ್ ಆಯುಕ್ತರು ಪಶ್ಚಿಮ ವಿಭಾಗ ರವರ ನೇತೃತ್ವದಲ್ಲಿ, ಕೆ.ಸಿ.ಗಿರಿ, ಸಹಾಯಕ ಪೊಲೀಸ್ ಆಯುಕ್ತರು ಚಿಕ್ಕಪೇಟೆ ಉಪ ವಿಭಾಗ ರವರ ಮಾರ್ಗದರ್ಶನದಲ್ಲಿ ಬಾಲರಾಜ್ ಜಿ, ಪೊಲೀಸ್ ಇನ್ಸ್​ಪೆಕ್ಟರ್, ಕಾಟನ್‌ಪೇಟೆ ಪೊಲೀಸ್ ಠಾಣೆ ಹಾಗೂ ಸಿಬ್ಬಂದಿಯವರನ್ನೊಳಗೊಂಡ ತಂಡ ರಚಿಸಿದ್ದು, ಸದರಿ ತಂಡವು ಉತ್ತಮ ಕಾರ್ಯನಿರ್ವಹಿಸಿ ಪ್ರಕರಣವನ್ನು ಬೇದಿಸುವಲ್ಲಿ ಯಶಸ್ವಿಯಾಗಿರುತ್ತಾರೆ.   

Related Posts