ಕೇರಳದ ಮಾಜಿ ಮುಖ್ಯಮಂತ್ರಿ‌ ಉಮ್ಮನ್ ಚಾಂಡಿ ಅವರ ನಿಧನಕ್ಕೆ ಮುಖ್ಯಮಂತ್ರಿ ಸಂತಾಪ! » Dynamic Leader
July 23, 2024
ದೇಶ

ಕೇರಳದ ಮಾಜಿ ಮುಖ್ಯಮಂತ್ರಿ‌ ಉಮ್ಮನ್ ಚಾಂಡಿ ಅವರ ನಿಧನಕ್ಕೆ ಮುಖ್ಯಮಂತ್ರಿ ಸಂತಾಪ!

ಬೆಂಗಳೂರು: ಕೇರಳದ ಮಾಜಿ ಮುಖ್ಯಮಂತ್ರಿ ಹಾಗೂ ಹಿರಿಯ ಕಾಂಗ್ರೆಸ್ ನಾಯಕರಲ್ಲಿ ಒಬ್ಬರಾಗಿದ್ದ ಉಮ್ಮನ್ ಚಾಂಡಿ (ವಯಸ್ಸು 79) ಇಂದು ಮುಂಜಾನೆ 4.25ಕ್ಕೆ ಬೆಂಗಳೂರಿನಲ್ಲಿ ಅನಾರೋಗ್ಯದಿಂದ ನಿಧನರಾಗಿದ್ದಾರೆ.

ಉಮ್ಮನ್ ಚಾಂಡಿ ಕೇರಳ ರಾಜ್ಯದಲ್ಲಿ ಕಾಂಗ್ರೆಸ್‌ನ ಮುಖವಾಗಿದ್ದರು. ವಿದ್ಯಾರ್ಥಿ ದಿನಗಳಿಂದಲೂ ರಾಜಕೀಯದಲ್ಲಿ ಸಕ್ರಿಯವಾಗಿ ತೊಡಗಿಸಿಕೊಂಡಿದ್ದರು. 1970ರಲ್ಲಿ ರಾಜ್ಯ ಯುವ ಕಾಂಗ್ರೆಸ್ ಅಧ್ಯಕ್ಷರಾದರು. 1971 ರಿಂದ 2021 ರವರೆಗೆ 12 ಬಾರಿ ಕೇರಳ ವಿಧಾನಸಭೆಯ ಶಾಸಕರಾಗಿ ಆಯ್ಕೆಯಾಗಿದ್ದರು. ಪುದುಪಳ್ಳಿ ವಿಧಾನಸಭಾ ಕ್ಷೇತ್ರವನ್ನು ತಮ್ಮ ಭದ್ರಕೋಟೆಯನ್ನಾಗಿ ಉಳಿಸಿಕೊಂಡಿದ್ದರು.

ಉಮ್ಮನ್ ಚಾಂಡಿ ನಿಧನಕ್ಕೆ ಮುಖ್ಯಮಂತ್ರಿ ಸಿದ್ದರಾಮಯ್ಯ ಸಂತಾಪ ಸೂಚಿಸಿದ್ದಾರೆ. “ಹಿರಿಯ ರಾಜಕೀಯ ಮುತ್ಸದ್ದಿ, ಕೇರಳದ ಮಾಜಿ ಮುಖ್ಯಮಂತ್ರಿ‌ ಉಮ್ಮನ್ ಚಾಂಡಿ ಅವರ ನಿಧನ ಅತೀವ ದುಃಖವುಂಟುಮಾಡಿದೆ. ಚಾಂಡಿಯವರ ನಿಧನದಿಂದ ಸಂವಿಧಾನ, ಪ್ರಜಾಪ್ರಭುತ್ವ, ದುರ್ಬಲ ಜನರ ಪರವಾದ ಗಟ್ಟಿಧ್ವನಿಯೊಂದು ಇಲ್ಲವಾಗಿದೆ. ಮೃತರ ಆತ್ಮಕ್ಕೆ ಚಿರಶಾಂತಿ ಕೋರುತ್ತೇನೆ. ಚಾಂಡಿಯವರ ಅಗಲಿಕೆಯ ದುಃಖ ಭರಿಸುವ ಶಕ್ತಿಯನ್ನು ಅವರ ಕುಟುಂಬವರ್ಗ ಮತ್ತು ಅಭಿಮಾನಿಗಳಿಗೆ ದೇವರು ನೀಡಲೆಂದು ಪ್ರಾರ್ಥಿಸುತ್ತೇನೆ” ಎಂದು ಹೇಳಿದ್ದಾರೆ.

Related Posts