ಉತ್ತರ ಕೊರಿಯಾ ಅಧ್ಯಕ್ಷ ಕಿಮ್ ಜಾಂಗ್ ಉನ್ ಹಾಗೂ ವ್ಲಾಡಿಮಿರ್‌ ಪುಟಿನ್‌ ಭೇಟಿ: ಶಸ್ತ್ರಾಸ್ತ್ರ ಶೃಂಗಸಭೆಯಲ್ಲಿ ಭಾಗವಹಿಸುವಿಕೆ! » Dynamic Leader
October 3, 2024
ವಿದೇಶ

ಉತ್ತರ ಕೊರಿಯಾ ಅಧ್ಯಕ್ಷ ಕಿಮ್ ಜಾಂಗ್ ಉನ್ ಹಾಗೂ ವ್ಲಾಡಿಮಿರ್‌ ಪುಟಿನ್‌ ಭೇಟಿ: ಶಸ್ತ್ರಾಸ್ತ್ರ ಶೃಂಗಸಭೆಯಲ್ಲಿ ಭಾಗವಹಿಸುವಿಕೆ!

ಮಾಸ್ಕೋ: ಉತ್ತರ ಕೊರಿಯಾ ಅಧ್ಯಕ್ಷ ಕಿಮ್ ಜಾಂಗ್ ಉನ್ ರಷ್ಯಾದಲ್ಲಿ ಪುಟಿನ್ ಅವರನ್ನು ಭೇಟಿಯಾದರು. ಎರಡೂ ರಾಷ್ಟ್ರಗಳ ಮುಖ್ಯಸ್ಥರು ಶಸ್ತ್ರಾಸ್ತ್ರ ಶೃಂಗಸಭೆಯಲ್ಲಿ ಭಾಗವಹಿಸಿದ್ದಾರೆ.

ರೈಲಿನಲ್ಲಿ ಪ್ರಯಾಣ:
ಉತ್ತರ ಕೊರಿಯಾ ಮತ್ತು ರಷ್ಯಾ ನಡುವೆ 1,180 ಕಿ.ಮೀ ದೂರವಿದೆ. ಆದರೆ, ಉತ್ತರ ಕೊರಿಯಾದ ಅಧ್ಯಕ್ಷರು ವಿಮಾನದಲ್ಲಿ ಹೋಗುವ ಬದಲು ರೈಲಿನಲ್ಲಿ ಹೊರಟರು. ಶರವೇಗದಲ್ಲಿ ಸೇನಾ ಬಲವನ್ನು ವೃದ್ಧಿಸಿಕೊಳ್ಳುತ್ತಿರುವ ಕಿಮ್ ಜಾಂಗ್ ಉನ್ ವಿಮಾನದಲ್ಲಿ ಪ್ರಯಾಣಿಸದಿರಲು ಅವರ ಪರಂಪರೆಯೇ ಕಾರಣ ಎನ್ನಲಾಗಿದೆ.

ಇದನ್ನೂ ಓದಿ: ಸನಾತನದ ವಿರುದ್ಧ ಮಾತನಾಡುವವರ ನಾಲಿಗೆಯನ್ನು ಕಿತ್ತೊಗೆಯಬೇಕು! ಕೇಂದ್ರ ಸಚಿವ ಗಜೇಂದ್ರ ಸಿಂಗ್ ಶೇಖಾವತ್

ಶಸ್ತ್ರಾಸ್ತ್ರ ಶೃಂಗಸಭೆ:
ಉತ್ತರ ಕೊರಿಯಾ ಅಧ್ಯಕ್ಷ ಕಿಮ್ ಜಾಂಗ್ ಉನ್ ಇಂದು (ಸೆಪ್ಟೆಂಬರ್ 12) ರಷ್ಯಾಕ್ಕೆ ಆಗಮಿಸಿದ್ದಾರೆ. ಅವರ ಪ್ರಯಾಣ ಅಮೆರಿಕ ಸೇರಿದಂತೆ ಹಲವು ಅಂತಾರಾಷ್ಟ್ರೀಯ ದೇಶಗಳ ಗಮನ ಸೆಳೆದಿದೆ. ಈ ಹಿನ್ನಲೆಯಲ್ಲಿ ಉತ್ತರ ಕೊರಿಯಾ ಅಧ್ಯಕ್ಷ ಕಿಮ್ ಜಾಂಗ್ ಉನ್ ರಷ್ಯಾದ ಪುಟಿನ್ ಅವರನ್ನು ಭೇಟಿ ಮಾಡಿದ್ದಾರೆ. ಎರಡೂ ರಾಷ್ಟ್ರಗಳ ಮುಖ್ಯಸ್ಥರು ಶಸ್ತ್ರಾಸ್ತ್ರ ಶೃಂಗಸಭೆಯಲ್ಲಿ ಭಾಗವಹಿಸಿದ್ದಾರೆ.

ಉಕ್ರೇನ್‌ನ ಯುದ್ಧವನ್ನು ಎದುರಿಸಲು ಪುಟಿನ್ ಉತ್ತರ ಕೊರಿಯಾದಿಂದ ಶಸ್ತ್ರಾಸ್ತ್ರಗಳನ್ನು ಕೋರಿದರು ಎಂದು ವರದಿಯಾಗಿದೆ. ಇದೀಗ ಅದನ್ನು ಸಾಕಾರಗೊಳಿಸುವ ನಿಟ್ಟಿನಲ್ಲಿ ಉಭಯ ರಾಷ್ಟ್ರಗಳ ಅಧ್ಯಕ್ಷರ ಭೇಟಿ ನಡೆದಿದೆ. ಉತ್ತರ ಕೊರಿಯಾದೊಂದಿಗಿನ ಸಹಕಾರವನ್ನು ಎಲ್ಲಾ ಕ್ಷೇತ್ರಗಳಲ್ಲಿ ಸುಧಾರಿಸಬೇಕು ಎಂದು ಅಧ್ಯಕ್ಷ ವ್ಲಾಡಿಮಿರ್‌ ಪುಟಿನ್ ಹೇಳಿದ್ದಾರೆ.

ಇದನ್ನೂ ಓದಿ: ಸಂಸತ್ತಿನ ವಿಶೇಷ ಅಧಿವೇಶನಕ್ಕೆ ಸಿಬ್ಬಂದಿ ಹಾಗೂ ಅಧಿಕಾರಿಗಳಿಗೆ ಕಮಲದ ಹೂವುಗಳಿಂದ ಕೂಡಿದ ಹೊಸ ಸಮವಸ್ತ್ರ!

ರಷ್ಯಾದ ವ್ಯಾಗ್ನರ್ ಪಡೆಗೆ ಶಸ್ತ್ರಾಸ್ತ್ರಗಳನ್ನು ಪೂರೈಸುತ್ತಿರುವ ಉತ್ತರ ಕೊರಿಯಾವನ್ನು ಅಮೆರಿಕಾ  ತೀವ್ರವಾಗಿ ಖಂಡಿಸಿತ್ತು ಎಂಬುದು ಗಮನಾರ್ಹ.

Related Posts