ಸುಳ್ಳು ಸುದ್ದಿ, ವದಂತಿಗಳ ಮೂಲಕ ಸಮಾಜದ ಶಾಂತಿ ಕದಡುವವರ ವಿರುದ್ಧ ಸ್ವಯಂಪ್ರೇರಿತ ಎಫ್.ಐ.ಆರ್ ದಾಖಲಿಸಿ! » Dynamic Leader
December 13, 2024
ರಾಜ್ಯ

ಸುಳ್ಳು ಸುದ್ದಿ, ವದಂತಿಗಳ ಮೂಲಕ ಸಮಾಜದ ಶಾಂತಿ ಕದಡುವವರ ವಿರುದ್ಧ ಸ್ವಯಂಪ್ರೇರಿತ ಎಫ್.ಐ.ಆರ್ ದಾಖಲಿಸಿ!

ಬೆಂಗಳೂರು: ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ರಾಜ್ಯ ಪೊಲೀಸ್ ಮಹಾ ನಿರ್ದೇಶಕರ ಕಚೇರಿಯಲ್ಲಿ ನಡೆದ ಹಿರಿಯ ಪೊಲೀಸ್ ಅಧಿಕಾರಿಗಳ ವಾರ್ಷಿಕ ಸಮಾವೇಶದಲ್ಲಿ ಇಂದು ಪಾಲ್ಗೊಂಡು ಮಾತನಾಡಿದರು.

ಆಯಾ ಠಾಣಾ ವ್ಯಾಪ್ತಿಗಳಲ್ಲಿ ಅಕ್ರಮ ಚಟುವಟಿಕೆಗಳು, ಕಾನೂನು ಬಾಹಿರ ಸಂಘಟಿತ ಅಪರಾಧಗಳು ನಡೆಯುತ್ತಿದ್ದರೆ ಡಿಸಿಪಿ, ಎಸ್.ಪಿ ಮಟ್ಟದ ಅಧಿಕಾರಿಗಳನ್ನೂ ಹೊಣೆ ಮಾಡಿ ಸರ್ಕಾರ ಕ್ರಮ ಕೈಗೊಳ್ಳಲಿದೆ. ನಮ್ಮ ಸರ್ಕಾರ ಕೇವಲ‌ ಕೆಳ ಹಂತದ ಅಧಿಕಾರಿಗಳು, ಸಿಬ್ಬಂದಿ ವಿರುದ್ಧ ಕ್ರಮ ಕೈಗೊಂಡು ಕೈತೊಳೆದುಕೊಳ್ಳುವುದಿಲ್ಲ, ಹಿರಿಯ ಅಧಿಕಾರಿಗಳ ಮೇಲೂ ಕ್ರಮ ಕೈಗೊಳ್ಳುತ್ತೇವೆ ಎಂದು ಎಚ್ಚರಿಕೆ ನೀಡಿದರು.

ಸುಳ್ಳು ಸುದ್ದಿ, ವದಂತಿಗಳ ಮೂಲಕ ಸಮಾಜದ ಶಾಂತಿ ಕದಡುವವರ ವಿರುದ್ಧ ಸ್ವಯಂಪ್ರೇರಿತ ಎಫ್.ಐ.ಆರ್ ದಾಖಲಿಸಿಕೊಂಡು ಕ್ರಮ ಕೈಗೊಳ್ಳಬೇಕು. ಸೂಕ್ಷ್ಮ ಪ್ರಕರಣಗಳಲ್ಲಿ ದೂರು ಕೊಡುವವರು ಬರಲಿ ಎಂದು ಕಾಯುತ್ತಾ ಕೂರಬಾರದು ಎಂದು ಪೊಲೀಸ್ ಅಧಿಕಾರಿಗಳಿಗೆ ಕಿವಿಮಾತು ಹೇಳಿದರು.

ಸಿಸಿಬಿಯನ್ನು ಇನ್ನಷ್ಟು ಸದೃಢಗೊಳಿಸಲು 230 ಸಿಬ್ಬಂದಿಯನ್ನು ಹೊಸದಾಗಿ ನೇಮಿಸಿಕೊಳ್ಳಲು ಒಪ್ಪಿಗೆ ನೀಡಲಾಗಿದೆ. ಸಿಬ್ಬಂದಿಗೆ ಅಗತ್ಯವಿದ್ದರೆ ಹೊಸ ಕಟ್ಟಡಗಳನ್ನು ಒದಗಿಸಲಾಗುವುದು ಎಂಬ ಭರವಸೆಯನ್ನು ನೀಡಿದರು.

ಹಿರಿಯ ಅಧಿಕಾರಿಗಳು ಜನ ಸಂಪರ್ಕಕ್ಕೆ ಸಿಗದೇ ಹೋದರೆ , ಜನಸ್ನೇಹಿ ಆಗದೇ ಹೋದರೆ ಅಂತಹ ಅಧಿಕಾರಿಗಳ ವಿರುದ್ದ ಕ್ರಮ ಕೈಗೊಳ್ಳಲಾಗುವುದು. ಠಾಣೆಗೆ ಬರುವ ಬಡವರು, ಜನಸಾಮಾನ್ಯರಿಗೆ ಪೊಲೀಸ್ ವ್ಯವಸ್ಥೆ ಬಗ್ಗೆ ಭರವಸೆ ಹುಟ್ಟುವ ರೀತಿಯಲ್ಲಿ ಜನಸ್ನೇಹಿ ಪೊಲೀಸ್ ವ್ಯವಸ್ಥೆ ರೂಪಿಸಬೇಕು ಎಂದು ಹೇಳಿದರು.

ಇದನ್ನೂ ಓದಿ: ಕಲೈಜ್ಞರ್ ಮಹಿಳಾ ಹಕ್ಕುಭತ್ಯೆ ಯೋಜನೆಗೆ ಇಂದು ಚಾಲನೆ; ತಮಿಳುನಾಡಿನಲ್ಲಿ ಸಂಭ್ರಮದ ವಾತಾವರಣ!

Related Posts