ಬಿಎಸ್‌ಪಿ ಸಂಸದ ಡ್ಯಾನಿಶ್ ಅಲಿಗೆ ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಸಾಂತ್ವನ! » Dynamic Leader
December 5, 2024
ದೇಶ ರಾಜಕೀಯ

ಬಿಎಸ್‌ಪಿ ಸಂಸದ ಡ್ಯಾನಿಶ್ ಅಲಿಗೆ ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಸಾಂತ್ವನ!

ನವದೆಹಲಿ: ದ್ವೇಷ ಭಾಷಣದಿಂದ ಪ್ರಭಾವಿತರಾದ ಬಹುಜನ ಸಾಮಾಜ ಪಾರ್ಟಿಯ ಸಂಸದ ಕುನ್ವರ್ ಡ್ಯಾನಿಶ್ ಅಲಿ ಅವರನ್ನು ಕಾಂಗ್ರೆಸ್ ಸಂಸದ ರಾಹುಲ್ ಭೇಟಿ ಮಾಡಿದ್ದಾರೆ.

ಸಂಸತ್ತಿನಲ್ಲಿ ಚರ್ಚೆಯ ಸಂದರ್ಭದಲ್ಲಿ ದೆಹಲಿ ಬಿಜೆಪಿ ಸಂಸದ ರಮೇಶ್ ಬಿಧುರಿ ಚಂದ್ರಯಾನ-3 ವಿಚಾರವಾಗಿ ಮಾತನಾಡುತ್ತಿದ್ದರು. ಆಗ ಮಾಯಾವತಿ ಅವರ ಬಹುಜನ ಸಮಾಜ ಪಕ್ಷದ ಸಂಸದ ಡ್ಯಾನಿಶ್ ಅಲಿ ಅಡ್ಡಿಪಡಿಸುತ್ತಿದ್ದಂತೆ, ಇದರಿಂದ ಕೆರಳಿದ ರಮೇಶ್ ಬಿಧುರಿ, ಡ್ಯಾನಿಶ್ ಅವರನ್ನು ‘ಭಯೋತ್ಪಾದಕ’ ಎಂದು ಸಂಭೋಧಿಸಿದರು. ಇದು ವಿವಾದಕ್ಕೆ ಕಾರಣವಾಗಿತ್ತು.

ಇದನ್ನೂ ಓದಿ: ವಿಕ್ರಮ್ ಲ್ಯಾಂಡರ್, ಪ್ರಗ್ಯಾನ್ ರೋವರ್‌ನಿಂದ ಸಿಗ್ನಲ್ ಸ್ವೀಕರಿಸಲು ಸಾಧ್ಯವಾಗುತ್ತಿಲ್ಲ: ಇಸ್ರೋ

ಈ ವಿಚಾರ, ವಿವಾದ ಸೃಷ್ಟಿಸಿದ ನಂತರ ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ, ಡ್ಯಾನಿಶ್ ಅಲಿ ಅವರನ್ನು ಭೇಟಿ ಮಾಡಿ ಸಾಂತ್ವನ ಹೇಳಿದರು. ರಾಹುಲ್ ಜೊತೆಗೆ ಕಾಂಗ್ರೆಸ್ ಪ್ರಧಾನ ಕಾರ್ಯದರ್ಶಿ ಕೆ.ಸಿ.ವೇಣುಗೋಪಾಲ್ ಉಪಸ್ಥಿತರಿದ್ದರು.

ಇಂಡಿಯಾ ಮೈತ್ರಿಕೂಟದ ಪರವಾಗಿ ಲೋಕಸಭೆಯ ಸ್ಪೀಕರ್‌ಗೆ ಕಳುಹಿಸಿರುವ ಪತ್ರದಲ್ಲಿ, ದ್ವೇಷ ಭಾಷಣ ಮಾಡಿದ ಬಿಜೆಪಿ ಸಂಸದ ರಮೇಶ್ ಬಿಧುರಿ ವಿರುದ್ಧ ಕ್ರಮ ಕೈಗೊಳ್ಳಬೇಕು ಎಂದು ಉಲ್ಲೇಖಿಸಿದ್ದಾರೆ.  

Related Posts