ಮಹಿಳಾ ಮೀಸಲಾತಿ ಮಸೂದೆ ನಾನು ನಿಮಗೆ ನೀಡಿದ ಉಡುಗರೆ: ಪ್ರಧಾನಿ ಮೋದಿ » Dynamic Leader
November 2, 2024
ರಾಜಕೀಯ

ಮಹಿಳಾ ಮೀಸಲಾತಿ ಮಸೂದೆ ನಾನು ನಿಮಗೆ ನೀಡಿದ ಉಡುಗರೆ: ಪ್ರಧಾನಿ ಮೋದಿ

ಅಹಮದಾಬಾದ್: ಗುಜರಾತ್ ನಲ್ಲಿ ವಿವಿಧ ಕಾರ್ಯಕ್ರಮಗಳಲ್ಲಿ ಭಾಗವಹಿಸಲು ಆಗಮಿಸಿದ್ದ ಪ್ರಧಾನಿ ಮೋದಿ ಅವರನ್ನು ಅಹಮದಾಬಾದ್ ನಗರದಲ್ಲಿ ಜನರು ಸಂಭ್ರಮದಿಂದ ಸ್ವಾಗತಿಸಿದರು.

ಎರಡು ದಿನಗಳ ಭೇಟಿಗಾಗಿ ಪ್ರಧಾನಿ ಮೋದಿ ಇಂದು ಗುಜರಾತ್‌ಗೆ ಆಗಮಿಸಿದರು. ಅವರು ಇಲ್ಲಿ ವಿವಿಧ ಕಲ್ಯಾಣ ಕಾರ್ಯಕ್ರಮಗಳನ್ನು ಉದ್ಘಾಟಿಸಿದರು. ಸಂಸತ್ತಿನ ಉಭಯ ಸದನಗಳಲ್ಲಿ ಮಹಿಳಾ ಮೀಸಲಾತಿ ಮಸೂದೆ ಅಂಗೀಕಾರದ ನಂತರ ಮೋದಿ ಮೊದಲ ಬಾರಿಗೆ ಗುಜರಾತ್‌ಗೆ ಭೇಟಿ ನೀಡುತ್ತಿದ್ದಂತೆ ಅಹಮದಾಬಾದ್‌ನಲ್ಲಿ ಬೃಹತ್ ವಾಹನ ಮೆರವಣಿಗೆ ನಡೆಸಲಾಯಿತು.

ಇದನ್ನೂ ಓದಿ: ಕಾವೇರಿ ಜಲ ನಿಯಂತ್ರಣ ಸಮಿತಿ ಆದೇಶ ಕನ್ನಡಿಗರ ಪಾಲಿಗೆ ಮರಣಶಾಸನ: ಹೆಚ್.ಡಿ.ಕುಮಾರಸ್ವಾಮಿ

ರಸ್ತೆಯುದ್ದಕ್ಕೂ ಮಹಿಳೆಯರು ಉತ್ಸಾಹದಿಂದ ಮೋದಿ ಅವರನ್ನು ಸ್ವಾಗತಿಸಿದರು. ನಂತರ ಬಿಜೆಪಿ ಮಹಿಳಾ ಮೋರ್ಚಾದ ನಾಯಕಿಯರು ಪ್ರಧಾನಿಗಳಿಗೆ ಸ್ಮರಣಿಕೆ ನೀಡಿ ಗೌರವಿಸಿದರು. ಈ ಸಂದರ್ಭದಲ್ಲಿ ಮಾತನಾಡಿದ ಪ್ರಧಾನಿ ಮೋದಿ, “ಮಹಿಳಾ ಮೀಸಲಾತಿ ಮಸೂದೆ ನಾನು ನಿಮಗೆ ನೀಡಿದ ಉಡುಗರೆ” ಎಂದು ಹೇಳಿದರು.

ಇದನ್ನೂ ಓದಿ: ಬಿಜೆಪಿಯ 25 ಸಂಸದರು ಪ್ರಧಾನಿಯವರ ಮೇಲೆ ಒತ್ತಡ ಹೇರಿ ಕಾವೇರಿ ಸಮಸ್ಯೆಗೆ ಪರಿಹಾರ ದೊರಕಿಸಬೇಕು!

Related Posts