ಕಾವಾಡಿಗರ ಹಟ್ಟಿಯ ಅಭಿವೃದ್ದಿಗೆ 3 ಎಕರೆ ಜಾಗ 4 ಕೋಟಿ ರೂಪಾಯಿ ಪರಿಹಾರ: ಸಿದ್ದರಾಮಯ್ಯ » Dynamic Leader
October 4, 2024
ರಾಜಕೀಯ ರಾಜ್ಯ

ಕಾವಾಡಿಗರ ಹಟ್ಟಿಯ ಅಭಿವೃದ್ದಿಗೆ 3 ಎಕರೆ ಜಾಗ 4 ಕೋಟಿ ರೂಪಾಯಿ ಪರಿಹಾರ: ಸಿದ್ದರಾಮಯ್ಯ

ಚಿತ್ರದುರ್ಗ: ಕಲುಷಿತ ನೀರು ಸೇವನೆಯಿಂದ ಸಾವು ಸಂಭವಿಸಿದ ಕಾವಾಡಿಗರಹಟ್ಟಿಯ ಸಂತ್ರಸ್ಥ ಕುಟುಂಬಗಳನ್ನು ಭೇಟಿಮಾಡಿ, ಬಳಿಕ ಗ್ರಾಮಸ್ಥರ ಸಮಸ್ಯೆಗಳನ್ನು ಮುಖ್ಯಮಂತ್ರಿ ಸಿದ್ದರಾಮಯ್ಯ ಆಲಿಸಿದರು.  

ಕಲುಷಿತ ನೀರು ಕುಡಿದು ಆರು ಮಂದಿ ಮೃತಪಟ್ಟಿದ್ದ ಕಾವಾಡಿಗರ ಹಟ್ಟಿಯ ಅಭಿವೃದ್ದಿಗೆ 3 ಎಕರೆ ಜಾಗ 4 ಕೋಟಿ ರೂಪಾಯಿ ನೀಡಿದ್ದೇವೆ. ಸಂತ್ರಸ್ಥ ಕುಟುಂಬಗಳ ಜವಾಬ್ದಾರಿಯನ್ನು ಸರ್ಕಾರ ವಹಿಸಿಕೊಳ್ಳಲಿದೆ. ಈ ಕುಟುಂಬಗಳ ಸದಸ್ಯರಿಗೆ ಉದ್ಯೋಗವನ್ನೂ ಕೊಡುತ್ತೇವೆ; ಮನೆಯನ್ನೂ ಕಟ್ಟಿಸಿಕೊಡುತ್ತೇವೆ. ಶುದ್ಧ ಕುಡಿಯುವ ನೀರು ಕೊಡುವುದು ನಮ್ಮ ಕರ್ತವ್ಯ ಎಂದು ಪರಿಹಾರಕ್ಕಾಗಿ ಸರ್ಕಾರ ಕೈಗೊಂಡಿರುವ ಕ್ರಮಗಳ ಬಗ್ಗೆ ಮುಖ್ಯಮಂತ್ರಿಗಳು ವಿವರಿಸಿ ಹೇಳಿದರು.

ಘಟನೆ ಘಟಿಸಿದ ತಕ್ಷಣ ಸ್ಥಳೀಯ ಶಾಸಕರು, ಜಿಲ್ಲಾ ಮಂತ್ರಿಗಳು ಮತ್ತು ಜಿಲ್ಲಾಧಿಕಾರಿಗಳು ಹಾಗೂ ಸಂಬಂಧಪಟ್ಟ ಅಧಿಕಾರಿಗಳಿಗೆ ಸ್ಪಷ್ಟ ಸೂಚನೆ ಕೊಟ್ಟು, ತಕ್ಷಣಕ್ಕೆ 10 ಲಕ್ಷ ಪರಿಹಾರ ನೀಡಲಾಗಿತ್ತು. ಮೊದಲೇ ಶುದ್ಧ ನೀರಿನ ವ್ಯವಸ್ಥೆ ಇದ್ದಿದ್ದರೆ ಈ ಅನಾಹುತ ನಡೆಯುತ್ತಿರಲಿಲ್ಲ. ಘಟನೆ ಬಳಿಕ ಶುದ್ಧ ಕುಡಿಯುವ ನೀರಿಗೆ ತೊಂದರೆ ಆಗದಂತೆ ಎಲ್ಲಾ ಕ್ರಮಗಳನ್ನು ಕೈಗೊಳ್ಳಲಾಗಿದೆ. ಮುಂದೆ ಇಂತಹ ಅನಾಹುತ ನಡೆದರೆ ಸಂಬಂಧ ಪಟ್ಟ ಅಧಿಕಾರಿಗಳ ವಿರುದ್ಧ ಕಠಿಣ ಕ್ರಮ ಕೈಗೊಳ್ಳಲಾಗುವುದು ಎಂದು ಹೇಳಿದರು.

ಇದನ್ನೂ ಓದಿ: ಜನರ ಮನಸ್ಥಿತಿ ಬದಲಾಗಿದೆ; ಮುಂದಿನ ದಿನಗಳಲ್ಲಿ ಕುಟುಂಬ ಪ್ರಾಬಲ್ಯವಿರುವ ಪ್ರಾದೇಶಿಕ ಪಕ್ಷಗಳು ನೆಲಕಚ್ಚುವುದು ಖಚಿತ! – ಜೆಪಿ ನಡ್ಡಾ

Related Posts