ಬೆಂಗಳೂರಿನಲ್ಲಿ ಜರುಗುತ್ತಿರುವ ಐತಿಹಾಸಿಕ ಕಂಬಳಕ್ಕೆ ಸರ್ಕಾರದಿಂದ ನೆರವು! » Dynamic Leader
October 4, 2024
ರಾಜ್ಯ

ಬೆಂಗಳೂರಿನಲ್ಲಿ ಜರುಗುತ್ತಿರುವ ಐತಿಹಾಸಿಕ ಕಂಬಳಕ್ಕೆ ಸರ್ಕಾರದಿಂದ ನೆರವು!

ಬೆಂಗಳೂರು: ಬೆಂಗಳೂರು ಅರಮನೆ ಮೈದಾನದಲ್ಲಿ ನವೆಂಬರ್‌ನಲ್ಲಿ ಹಮ್ಮಿಕೊಂಡಿರುವ ಕಂಬಳ ಓಟದ ಕರೆ ಪೂಜೆ ಕಾರ್ಯಕ್ರಮದಲ್ಲಿ ಉಪ ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಅವರು ಭಾಗಿಯಾಗಿ ಭೂಮಿಪೂಜೆ ನೆರವೇರಿಸಿದರು.

ನಂತರ ಸುದ್ದಿಗಾರರೊಂದಿಗೆ ಮಾತನಾಡಿದ ಡಿ.ಕೆ.ಶಿವಕುಮಾರ್ ಅವರು “ಕರಾವಳಿ ಭಾಗದ ಸಂಸ್ಕೃತಿ, ವ್ಯಾಪಾರ – ವಹಿವಾಟು, ಅಲ್ಲಿನ ಶಿಕ್ಷಣ, ಹೋಟೆಲ್‌ಗಳು ಎಲ್ಲವೂ ಈ ದೇಶದ ಆಸ್ತಿ. ಅಲ್ಲಿನ ಸಂಸ್ಕೃತಿಯ ಭಾಗವಾಗಿರುವ ಕಂಬಳ ಓಟವು ಬೆಂಗಳೂರಿನಲ್ಲಿ ಜರುಗುತ್ತಿರುವುದು ತುಂಬಾ ಸಂತೋಷದ ವಿಷಯ ಎಂದರು.

ಪುತ್ತೂರು ಶಾಸಕರಾದ ಅಶೋಕ್ ಕುಮಾರ್ ರೈ ಅವರು ಈ ಸಂಸ್ಕೃತಿ ಉಳಿಸುವ ಸಲುವಾಗಿ ಒಂದು ಕಚೇರಿ ತೆರೆಯಲು ಜಾಗ ನೀಡುವಂತೆ ಕೇಳಿದ್ದಾರೆ. ಖಂಡಿತವಾಗಿಯೂ ಅವರ ಮನವಿಯನ್ನು ಪರಿಗಣಿಸುತ್ತೇವೆ. ಬೆಂಗಳೂರಿನಲ್ಲಿ ಜರುಗುತ್ತಿರುವ ಐತಿಹಾಸಿಕ ಕಂಬಳಕ್ಕೆ ಸರ್ಕಾರದಿಂದ ಎಷ್ಟು ಸಾಧ್ಯವೋ ಅಷ್ಟು ಸಹಕಾರ ನೀಡಲಾಗುವುದು ಎಂದು ತಿಳಿಸಿದರು.

Related Posts