ತಮಿಳುನಾಡು ಪೊಲೀಸರ ವಿರುದ್ಧ ನ್ಯಾಯಾಂಗ ನಿಂದನೆ ಪ್ರಕರಣ ದಾಖಲಿಸಿದ ಆರ್‌ಎಸ್‌ಎಸ್.!
ತಮಿಳುನಾಡಿನಲ್ಲಿ ರ‍್ಯಾಲಿ ನಡೆಸಲು ಅನುಮತಿ ನಿರಾಕರಿಸಿದ ಪೊಲೀಸರ ವಿರುದ್ಧ ಆರ್‌ಎಸ್‌ಎಸ್ ನ್ಯಾಯಾಂಗ ನಿಂದನೆ ಪ್ರಕರಣ ದಾಖಲಿಸಿದೆ.!
ದೇಶದ 76ನೇ ಸ್ವಾತಂತ್ರ್ಯ ದಿನಾಚರಣೆ ಹಾಗೂ ಅಂಬೇಡ್ಕರ್ ಅವರ ಜನ್ಮದಿನದ ಅಂಗವಾಗಿ ಇದೇ 22 ಮತ್ತು 29 ರಂದು ತಮಿಳುನಾಡಿನ 33 ಸ್ಥಳಗಳಲ್ಲಿ ಮೆರವಣಿಗೆ ನಡೆಸಲು ಅನುಮತಿ ನೀಡುವಂತೆ ಆರ್‌ಎಸ್‌ಎಸ್‌ನಿಂದ ಮದ್ರಾಸ್ ಹೈಕೋರ್ಟ್‌ನಲ್ಲಿ ಪ್ರಕರಣ ದಾಖಲಾಗಿದ್ದವು.
ಈ ಪ್ರಕರಣದ ವಿಚಾರಣೆ ನಡೆಸಿದ ನ್ಯಾಯಮೂರ್ತಿ ಜಯಚಂದ್ರ ಅವರು ಆರ್‌ಎಸ್‌ಎಸ್ ಮೆರವಣಿಗೆಗೆ ಷರತ್ತುಗಳೊಂದಿಗೆ ಅನುಮತಿ ನೀಡುವಂತೆ ಪೊಲೀಸರಿಗೆ ಕಳೆದ 16 ರಂದು ಆದೇಶ ಹೊರಡಿಸಿದ್ದರು.
ಈ ಹಿನ್ನಲೆಯಲ್ಲಿ, ನ್ಯಾಯಾಲಯದ ಆದೇಶದಂತೆ ಮೆರವಣಿಗೆಗೆ ಅನುಮತಿ ನೀಡದ ಪೊಲೀಸರ ವಿರುದ್ಧ ನ್ಯಾಯಾಂಗ ನಿಂದನೆ ಪ್ರಕರಣ ದಾಖಲಿಸಿ, ಆರ್‌ಎಸ್‌ಎಸ್ ಪರ ವಾದ ಮಂಡಿಸಿದ ವಕೀಲರು, ಪ್ರಕರಣವನ್ನು ತುರ್ತು ಪ್ರಕರಣವಾಗಿ ಪರಿಗಣಿಸಬೇಕು ಎಂದು ನ್ಯಾಯಮೂರ್ತಿ ಜಯಚಂದ್ರ ಅವರ ಬಳಿ ಮನವಿ ಮಾಡಿದರು.
ಈ ಮನವಿಯನ್ನು ತಿರಸ್ಕರಿಸಿದ ನ್ಯಾಯಮೂರ್ತಿ, ಮೆರವಣಿಗೆ ನಡೆಸಲು ಅನುಮತಿ ನೀಡಿದ ದಿನಾಂಕಗಳು ಈಗಾಗಲೇ ಮುಗಿದಿರುವುದರಿಂದ ಇದನ್ನು ತುರ್ತು ಪ್ರಕರಣವೆಂದು ಪರಿಗಣಿಸುವ ಅಗತ್ಯವಿಲ್ಲ ಮತ್ತು ಅರ್ಜಿಯ ಪ್ರಕ್ರಿಯೆಗಳು ಪೂರ್ಣಗೊಂಡ ನಂತರ ಈ ಪ್ರಕರಣಗಳನ್ನು ವಿಚಾರಣೆಗೆ ಕೈಗೆತ್ತಿಕೊಳ್ಳಲಾಗುವುದು ಎಂದು ಹೇಳಿದರು.