ಸರ್ದಾರ್ ವಲ್ಲಭಭಾಯಿ ಪಟೇಲ್ ಪ್ರತಿಮೆಗೆ ಮಾಲಾರ್ಪಣೆ ಮಾಡಿದ ಪ್ರಧಾನಿ ಮೋದಿ!
ಅಹಮದಾಬಾದ್: ಭಾರತದ ಉಕ್ಕಿನ ಮನುಷ್ಯ ಎಂದು ಬಣ್ಣಿಸಲಾಗುವ ಸರ್ದಾರ್ ವಲ್ಲಭಭಾಯಿ ಪಟೇಲ್ ಅವರ ಪ್ರತಿಮೆಗೆ ಪ್ರಧಾನಿ ನರೇಂದ್ರ ಮೋದಿ ಮಾಲಾರ್ಪಣೆ ಮಾಡಿದರು.
ಅವರ ಜನ್ಮದಿನದಂದು ಪ್ರಧಾನಿ ಮೋದಿ ಗುಜರಾತ್‌ನಲ್ಲಿ ವಿವಿಧ ಕಲ್ಯಾಣ ಕಾರ್ಯಕ್ರಮಗಳನ್ನು ಉದ್ಘಾಟಿಸಲಿದ್ದಾರೆ. ಏಕತೆಯನ್ನು ಸಾರುವ ವಿಶ್ವದ ಅತಿದೊಡ್ಡ ಸರ್ದಾರ್ ವಲ್ಲಭಭಾಯಿ ಪಟೇಲ್ ಪ್ರತಿಮೆಯನ್ನು ನರ್ಮದಾ ನದಿಯ ದಡದಲ್ಲಿ ಸ್ಥಾಪಿಸಲಾಗಿದೆ. ಪ್ರಧಾನಿಯವರು ಇಲ್ಲಿಗೆ ಭೇಟಿ ನೀಡಿ ಪುಷ್ಪಾರ್ಚನೆ ಮಾಡುವ ಮೂಲಕ ಗೌರವ ಸಲ್ಲಿಸಿದರು.