ಹಲಸೂರ ಮತ್ತು ಇತರ ಪೊಲೀಸ್ ಠಾಣೆಗಳ ವ್ಯಾಪ್ತಿಯಲ್ಲಿ ಸುಲಿಗೆ ಮಾಡುತ್ತಿದ್ದ ಇಬ್ಬರು ವ್ಯಕ್ತಿಗಳನ್ನು ವಶಕ್ಕೆ ಪಡೆದ ಪೊಲೀಸರು! » Dynamic Leader
October 11, 2024
ಕ್ರೈಂ ರಿಪೋರ್ಟ್ಸ್

ಹಲಸೂರ ಮತ್ತು ಇತರ ಪೊಲೀಸ್ ಠಾಣೆಗಳ ವ್ಯಾಪ್ತಿಯಲ್ಲಿ ಸುಲಿಗೆ ಮಾಡುತ್ತಿದ್ದ ಇಬ್ಬರು ವ್ಯಕ್ತಿಗಳನ್ನು ವಶಕ್ಕೆ ಪಡೆದ ಪೊಲೀಸರು!

ಬೆಂಗಳೂರು: ಕಳೆದ ಅಕ್ಟೋಬರ್ 17 ರಂದು ಹಲಸೂರು ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದವು. ಪ್ರಕರಣಕ್ಕೆ ಸಂಬಂಧಿಸಿದಂತೆ ತನಿಖೆ ಕೈಗೊಂಡ ಹಲಸೂರು ಪೊಲೀಸರು ಇಬ್ಬರ ವ್ಯಕ್ತಿಗಳನ್ನು ವಶಕ್ಕೆ ಪಡೆದು ವಿಚಾರಣೆ ನಡೆಸಿದರು. ವಿಚಾರಣೆಯ ವೇಳೆ ಅವರುಗಳು ನೀಡಿದ ಮಾಹಿತಿಯ ಮೇರೆಗೆ 5 ಲಕ್ಷ 50 ಸಾವಿರ ರೂಪಯಿಗಳ ಮೌಲ್ಯದ 3 ದ್ವಿಚಕ್ರ ವಾಹನ, ಲೆನೋವಾ ಲ್ಯಾಪ್ ಟಾಪ್, ವಿವಿಧ ಕಂಪನಿಯ 9 ಮೊಬೈಲ್ ಫೋನ್ ಗಳು ಹಾಗೂ ಒಂದು ಸ್ಮಾರ್ಟ್ ವಾಚನ್ನು ವಶಪಡಿಸಿಕೊಳ್ಳಲಾಯಿತು.

ವಶಕ್ಕೆ ಪಡೆದ ವ್ಯಕ್ತಿಗಳನ್ನು ಹೆಚ್ಚಿನ ವಿಚಾರಣೆಗೊಳಪಡಿಸಿದಾಗ, ಹಲಸೂರು ಪೊಲೀಸ್ ಠಾಣೆಯಲ್ಲಿ ಒಟ್ಟು ಮೂರು ಪ್ರಕರಣಗಳು, ಕೋರಮಂಗಲ ಪೊಲೀಸ್ ಠಾಣೆಯಲ್ಲಿ ಒಂದು ಪ್ರಕರಣ ಮತ್ತು ರಾಮಮೂರ್ತಿ ನಗರ ಪೊಲೀಸ್ ಠಾಣೆಯಲ್ಲಿ ಒಂದು ಪ್ರಕರಣ ಪತ್ತೆಯಾಗಿತ್ತು.

ದಸ್ತಗಿರಿ ಮಾಡಿದ ಇಬ್ಬರ ಪೈಕಿ ಒಬ್ಬ ವ್ಯಕ್ತಿ ಈ ಹಿಂದೆ ಉಪ್ಪಾರಪೇಟೆ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಒಂದು ಕೊಲೆ ಪ್ರಕರಣ, ಪುಲಿಕೇಶಿನಗರ, ಭಾರತಿನಗರ, ಹೆಬ್ಬಾಳ, ಕೆ.ಆರ್.ಪುರಂ, ಹೆಣ್ಣೂರು, ಕಮರ್ಷಿಯಲ್ ಸ್ಟ್ರೀಟ್ ಪೊಲೀಸ್ ಠಾಣೆಗಳ ವ್ಯಾಪ್ತಿಯಲ್ಲಿ ರಾಬರಿ ಪ್ರಕರಣ ಸೇರಿದಂತೆ ಒಟ್ಟು 10 ಪ್ರಕರಣಗಳು ದಾಖಲಾಗಿದ್ದು ಕಂಡುಬಂದಿರುತ್ತದೆ.

ಈ ಕಾರ್ಯಚರಣೆಯನ್ನು ಪೂರ್ವ ವಿಭಾಗದ ಉಪ ಪೊಲೀಸ್ ಆಯುಕ್ತರಾದ ಡಿ.ದೇವರಾಜ್ ರವರ ಮಾರ್ಗದರ್ಶನದಲ್ಲಿ ಹಲಸೂರು ಉಪ ವಿಭಾಗದ ಸಹಾಯಕ ಪೊಲೀಸ್ ಆಯುಕ್ತರಾದ ಬಿ.ರಾಮಚಂದ್ರ ರವರ ನೇತೃತ್ವದಲ್ಲಿ ಹಲಸೂರು ಪೊಲೀಸ್ ಠಾಣೆಯ ಪೊಲೀಸ್ ಇನ್ಸ್ ಪೆಕ್ಟರ್ ಕೆ.ಸಂತೋಷ್ ಹಾಗೂ ಸಿಬ್ಬಂಧಿ ವರ್ಗದವರು ಈ ಪ್ರಕರಣ ಬೇದಿಸುವಲ್ಲಿ ಯಶಸ್ವಿಯಾಗಿರುತ್ತಾರೆ.  

Related Posts