ಲೋಕಸಭೆ ಚುನಾವಣೆಯಲ್ಲಿ ಬಿಎಸ್‌ಪಿ ಯಾರೊಂದಿಗೂ ಮೈತ್ರಿಯಿಲ್ಲ; ಏಕಾಂಗಿಯಾಗಿ ಸ್ಪರ್ದಿಸಲಿದೆ: ಮಾಯಾವತಿ » Dynamic Leader
January 21, 2025
ದೇಶ

ಲೋಕಸಭೆ ಚುನಾವಣೆಯಲ್ಲಿ ಬಿಎಸ್‌ಪಿ ಯಾರೊಂದಿಗೂ ಮೈತ್ರಿಯಿಲ್ಲ; ಏಕಾಂಗಿಯಾಗಿ ಸ್ಪರ್ದಿಸಲಿದೆ: ಮಾಯಾವತಿ

ಲಖನೌ: ಮುಂಬರುವ ಲೋಕಸಭೆ ಚುನಾವಣೆಯಲ್ಲಿ ತಮ್ಮ ಪಕ್ಷ ಏಕಾಂಗಿಯಾಗಿ ಕಣಕ್ಕಿಳಿಯಲಿದೆ ಎಂದು ಬಿಎಸ್‌ಪಿ ವರಿಷ್ಠೆ ಮಾಯಾವತಿ ಸೋಮವಾರ ಹೇಳಿದ್ದಾರೆ ಆದರೆ ಚುನಾವಣೋತ್ತರ ಮೈತ್ರಿಯನ್ನು ಅವರು ತಳ್ಳಿಹಾಕಲಿಲ್ಲ.

ತಮ್ಮ ಜನ್ಮದಿನದಂದು ರಾಜ್ಯ ಪಕ್ಷದ ಕಚೇರಿಯಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ರಾಜಕೀಯದಿಂದ ನಿವೃತ್ತಿ ಹೊಂದುವ ಕುರಿತು ಮಾಧ್ಯಮದ ಒಂದು ವಿಭಾಗದ ವರದಿಗಳನ್ನು ಸ್ಪಷ್ಟವಾಗಿ ನಿರಾಕರಿಸಿದರು.

ಏಪ್ರಿಲ್-ಮೇ ತಿಂಗಳಲ್ಲಿ ನಡೆಯಲಿರುವ ಲೋಕಸಭೆ ಚುನಾವಣೆಗೆ ಪಕ್ಷವು ಯಾವುದೇ ಮೈತ್ರಿ ಮಾಡಿಕೊಳ್ಳುವುದಿಲ್ಲ ಮತ್ತು ಏಕಾಂಗಿಯಾಗಿ ಹೋಗಲಿದೆ ಎಂದು ಅವರು ಹೇಳಿದರು.

Related Posts