ಸೈನಿಕ ಶಾಲೆಯಲ್ಲಿ ಕನ್ನಡದವರಿಗೆ ಶೇ.65ರಷ್ಟು ಸೀಟುಗಳನ್ನು ಹಂಚಿಕೆ ಮಾಡಲು ಕ್ರಮ: ಸಿದ್ದರಾಮಯ್ಯ » Dynamic Leader
January 13, 2025
ರಾಜ್ಯ

ಸೈನಿಕ ಶಾಲೆಯಲ್ಲಿ ಕನ್ನಡದವರಿಗೆ ಶೇ.65ರಷ್ಟು ಸೀಟುಗಳನ್ನು ಹಂಚಿಕೆ ಮಾಡಲು ಕ್ರಮ: ಸಿದ್ದರಾಮಯ್ಯ

ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಇಂದು ಬೈಲಹೊಂಗಲ ತಾಲ್ಲೂಕಿನಲ್ಲಿ ಸೈನಿಕ ಶಾಲೆ ಉದ್ಘಾಟನೆ ಕಾರ್ಯಕ್ರಮಕ್ಕೆ ತೆರಳುವ ಮುನ್ನ ಮಾಧ್ಯಮದವರೊಂದಿಗೆ ಮಾತನಾಡಿದರು.

ಕರ್ನಾಟಕದ ಗಡಿ ಭಾಗದ 865 ಗ್ರಾಮಗಳಲ್ಲಿ ಮಹಾರಾಷ್ಟ್ರ ಸರ್ಕಾರ ಆರೋಗ್ಯ ವಿಮೆ ಜಾರಿ ಮಾಡಲು ಮುಂದಾಗಿರುವ ಬಗ್ಗೆ ರಾಜ್ಯ ಸರ್ಕಾರವು ಅಗತ್ಯ ಕ್ರಮ ಕೈಗೊಂಡಿದೆ. ಮಹಾರಾಷ್ಟ್ರ ಕರ್ನಾಟಕದೊಳಗೆ ಬರಬಾರದು ಎಂದು ಮುಖ್ಯಕಾರ್ಯದರ್ಶಿಗಳು ಈಗಾಗಲೇ ಮಹಾರಾಷ್ಟ್ರದವರಿಗೆ ಸೂಚಿಸಿದ್ದಾರೆ ಎಂದು ಹೇಳಿದರು.

ಸೈನಿಕ ಶಾಲೆಯಲ್ಲಿ ಕನ್ನಡದವರಿಗೆ ಸೀಟುಗಳನ್ನು ಶೇ.65 ರಷ್ಟು ಹಾಗೂ ಇತರರಿಗೆ ಶೇ.35ರಷ್ಟು ಸೀಟುಗಳು ಹಂಚಿಕೆಯಾಗಬೇಕೆಂದು ಕ್ರಮ ಕೈಗೊಳ್ಳಲಾಗಿದೆ. ಗುಣಮಟ್ಟದ ಶಿಕ್ಷಣದೊಂದಿಗೆ ದೇಶಪ್ರೇಮವನ್ನು ಮಕ್ಕಳಲ್ಲಿ ಬೆಳೆಸಲಾಗುವುದು. ಇಲ್ಲಿ ಕಲಿತವರು ಸೇನೆಗೆ ಸೇರ್ಪಡೆಯಾಗುವ ಅವಕಾಶವಿದೆ ಎಂದರು.

ಸುಮಾರು 110 ಎಕರೆ ಜಮೀನನ್ನು ಸರ್ಕಾರದ ವತಿಯಿಂದ ರಾಕ್ ಗಾರ್ಡನ್ ಮತ್ತು ವಸ್ತುಸಂಗ್ರಹಾಲಯ ನಿರ್ಮಾಣಕ್ಕಾಗಿ ಅನುದಾನವನ್ನೂ ನಮ್ಮ ಸರ್ಕಾರದ ಹಿಂದಿನ ಅವಧಿಯಲ್ಲಿ ನೀಡಲಾಗಿತ್ತು. ಮುಖ್ಯಮಂತ್ರಿಯಾಗಿ ಶಂಕುಸ್ಥಾಪನೆ ಮಾಡಿ, ಉದ್ಘಾಟನೆಯನ್ನೂ ಮಾಡುತ್ತಿದ್ದೇನೆ. ಎಲ್ಲವೂ ಉತ್ತಮವಾಗಿ ಮೂಡಿಬಂದಿದೆ. ರಾಯಣ್ಣ ಅವರ ಜ್ಞಾಪಕಾರ್ಥವಾಗಿ ಇಲ್ಲಿ ರಾಕ್ ಗಾರ್ಡನ್ ಮತ್ತು ವಸ್ತು ಸಂಗ್ರಹಾಲಯ ನಿರ್ಮಾಣವಾಗಿದೆ ಎಂದು ಸಂತಸ ವ್ಯಕ್ತಪಡಿಸಿದರು.

Related Posts