ಶಾಂತಿನಗರಕ್ಕೆ ಒಳಿದ ಬೆಂಗಳೂರು ಅಭಿವೃದ್ಧಿ ಪ್ರಾಧಿಕಾರ (ಬಿಡಿಎ); ಅಧ್ಯಕ್ಷರಾದ ಶಾಸಕ ಎನ್.ಎ.ಹ್ಯಾರಿಸ್! » Dynamic Leader
December 13, 2024
ಬೆಂಗಳೂರು

ಶಾಂತಿನಗರಕ್ಕೆ ಒಳಿದ ಬೆಂಗಳೂರು ಅಭಿವೃದ್ಧಿ ಪ್ರಾಧಿಕಾರ (ಬಿಡಿಎ); ಅಧ್ಯಕ್ಷರಾದ ಶಾಸಕ ಎನ್.ಎ.ಹ್ಯಾರಿಸ್!

ಬೆಂಗಳೂರು: ಶಾಂತಿನಗರ ವಿಧಾನಸಭಾ ಕ್ಷೇತ್ರದ ಶಾಸಕ ಎನ್.ಎ.ಹ್ಯಾರಿಸ್ ಅವರನ್ನು ಬೆಂಗಳೂರು ಅಭಿವೃದ್ಧಿ ಪ್ರಾಧಿಕಾರಕ್ಕೆ (ಬಿಡಿಎ) ಅಧ್ಯಕ್ಷರನ್ನಾಗಿ ನೇಮಕ ಮಾಡಿ ಆದೇಶ ಹೊರಡಿಸಲಾಗಿದೆ.

ಶಾಂತಿನಗರ ವಿಧಾನಸಭಾ ಕ್ಷೇತ್ರದಿಂದ ಮೂರು ಭಾರಿ ಆಯ್ಕೆಯಾಗಿದ್ದ ಶಾಸಕ ಎನ್.ಎ.ಹ್ಯಾರಿಸ್ ಅವರು ಸಿದ್ದರಾಮಯ್ಯ ಸಚಿವ ಸಂಪುಟದಲ್ಲಿ ಸಚಿವರಾಗುವ ನಿರೀಕ್ಷೆಯಿತ್ತು. ಆದರೆ ಕಾರಣಾಂತರಗಳಿಂದ ಆ ಸೌಭಾಗ್ಯ ಕೂಡಿಬರಲಿಲ್ಲ. ನಿಗಮ-ಮಂಡಳಿಗಳಲ್ಲಿ ಉನ್ನತ ಸ್ಥಾನ ಸಿಗುವ ನಿರೀಕ್ಷೆಯಿತ್ತು ಅದು ನೆರವೇರಿದೆ. ಕೆಲವು ದಿನಗಳ ಹಿಂದೆ ಉಪ ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಅವರನ್ನು ಹ್ಯಾರಿಸ್ ಅವರು ಪ್ರತ್ಯೇಕವಾಗಿ ಬೇಟಿಯಾಗಿ ಬಂದಿದ್ದು ಗಮನಾರ್ಹ.

ತಕ್ಷಣದಿಂದಲೇ ಜಾರಿಗೆ ಬರುವಂತೆ ಹಾಗೂ ಸಚಿವ ಸಂಪುಟ ದರ್ಜೆಯ ಸಚಿವರಿಗೆ ನೀಡುವ ಎಲ್ಲಾ ಸೌಲಭ್ಯಗಳೊಂದಿಗೆ ಮುಂದಿನ ಎರಡು ವರ್ಷಗಳ ಅವಧಿಗೆ ಅಥವಾ ಮುಂದಿನ ಆದೇಶದವರೆಗೆ ಅಧ್ಯಕ್ಷರಾಗಿ ನೇಮಿಸಿ ಸರ್ಕಾರದಿಂದ ಆದೇಶ ಹೊರಡಿಸಲಾಗಿದೆ.

ಸಚಿವ ಸಂಪುಟದಲ್ಲಿ ಅಥವಾ ನಿಗಮ ಮಂಡಳಿಗಳಲ್ಲಿ ಯಾವುದೇ ಸ್ಥಾನಮಾನ ನೀಡದೇ ಶಾಂತಿನಗರ ಕ್ಷೇತ್ರವನ್ನು ನಿರ್ಲಕ್ಷ್ಯೆ ಮಾಡಿಬಂದಿದ್ದ ಹಿನ್ನಲೆಯಲ್ಲಿ ಈಗಲಾದರೂ ಸಚಿವ ಸಂಪುಟ ದರ್ಜೆಗೆ ಸರಿಸಮಾನವಾಗಿ ಬಿಡಿಎ ಅಧ್ಯಕ್ಷ ಸ್ಥಾನ ನೀಡಿರುವುದು ಕ್ಷೇತ್ರದ ಜನರಲ್ಲಿ ಸಂತಸ ತಂದಿದೆ.   

Related Posts