ಕೆರೆಗೋಡು ಹನುಮ ಧ್ವಜ ವಿವಾದ: ಜನರು ದ್ವೇಷ ರಾಜಕಾರಣಕ್ಕೆ ಬಲಿಯಾಗಬಾರದು ಎಂದು ವೆಲ್‌ಫೇರ್ ಪಾರ್ಟಿ ಆಗ್ರಹಿಸಿದೆ! » Dynamic Leader
October 4, 2024
ರಾಜಕೀಯ

ಕೆರೆಗೋಡು ಹನುಮ ಧ್ವಜ ವಿವಾದ: ಜನರು ದ್ವೇಷ ರಾಜಕಾರಣಕ್ಕೆ ಬಲಿಯಾಗಬಾರದು ಎಂದು ವೆಲ್‌ಫೇರ್ ಪಾರ್ಟಿ ಆಗ್ರಹಿಸಿದೆ!

ಬೆಂಗಳೂರು: ಮಂಡ್ಯದ ಕೆರೆಗೋಡು ಗ್ರಾಮದಲ್ಲಿ ಹಾರಿಸಲಾಗಿದ್ದ ಹನುಮ ಧ್ವಜವನ್ನು ಕೆಳಗಿಳಿಸಿ, ರಾಷ್ಟ್ರ ಧ್ವಜ ಹಾರಿಸಿದ್ದನ್ನು ರಾಜಕೀಯ ಗೊಳಿಸಿ, ಜನರನ್ನು ದಾರಿತಪ್ಪಿಸುವ ಬಿಜೆಪಿ ಮತ್ತು ಜೆಡಿಎಸ್ ನಾಯಕರ ವರ್ತನೆ ಖಂಡನೀಯ ಎಂದು ವೆಲ್‌ಫೇರ್ ಪಾರ್ಟಿಯ ರಾಜ್ಯ ಅಧ್ಯಕ್ಷ ಅಡ್ವಕೇಟ್ ತಾಹೇರ್ ಹುಸೇನ್ ಹೇಳಿದ್ದಾರೆ.

ರಾಷ್ಟ್ರ ಧ್ವಜ ಅಥವಾ ಕನ್ನಡ ಧ್ವಜ ಹಾರಿಸಲು ಅನುಮತಿ ಪಡೆದು, ಕೇಸರಿ ಧ್ವಜ ಹಾರಿಸಲು ಪ್ರಯತ್ನಿಸುವುದು ಎಷ್ಟು ಸರಿ. ಮಾತ್ರವಲ್ಲ, 60 ಅಡಿ ಎತ್ತರದ ಸ್ಥಂಭಕ್ಕೆ ಅನುಮತಿ ಪಡೆದು 108 ಅಡಿ ಎತ್ತರದ ಸ್ಥಂಭ ಸ್ಥಾಪಿಸಲಾಗಿದೆ ಎಂದು ತಿಳಿದು ಬಂದಿದೆ. ಇದು ಸ್ಪಷ್ಟವಾದ ನಿಯಮ ಉಲ್ಲಂಘನೆಯಲ್ಲವೇ? ಸರ್ಕಾರದ ವಿರುದ್ಧ ಜನರನ್ನು ಈ ರೀತಿ ಎತ್ತಿ ಕಟ್ಟುವುದನ್ನು ಸಮರ್ಥಿಸಲಾಗದು.

ಈ ಮೂಲಕ ಜನರನ್ನು ಭಾವನಾತ್ಮಕವಾಗಿ ಕೆರಳಿಸುವ ರಾಜಕೀಯಕ್ಕೆ ಬಿಜೆಪಿ ಮತ್ತು ಜೆಡಿಎಸ್ ಮುಂದಾಗಿದೆಯೇ? ಎಂದು ಪ್ರಶ್ನಿಸಿರುವ ತಾಹೇರ್ ಹುಸೇನ್, ಸರಕಾರ ನಾಡಿನ ಜನತೆಗೆ ವಾಸ್ತವಾಂಶಗಳನ್ನು ತಿಳಿಸಿಕೊಡುವ ಪ್ರಯತ್ನ ಮಾಡಬೇಕು ಎಂದು ಕೇಳಿಕೊಂಡಿದ್ದಾರೆ.

ಜನರು ನಿಜಾಂಶಗಳನ್ನು ಅರಿತು ಸಮಾಜದಲ್ಲಿ ಶಾಂತಿ ಸುವ್ಯವಸ್ಥೆ  ಕಾಪಾಡಲು ಶ್ರಮಿಸಬೇಕು. ದ್ವೇಷದ ರಾಜಕೀಯಕ್ಕೆ ಯಾರೂ ಬಲಿಯಾಗಬಾರದು ಎಂದು ಅವರು ನಾಡಿನ ಜನರಲ್ಲಿ ಮನವಿ ಮಾಡಿಕೊಂಡಿದ್ದಾರೆ.

Related Posts