ಮುಂಬರುವ ಬಜೆಟ್‌ನಲ್ಲಿ ಕ್ಷೇತ್ರಕ್ಕೆ ಹೆಚ್ಚಿನ ಅನುದಾನ ಮೀಸಲಿರಿಸಲು ಮುಖ್ಯಮಂತ್ರಿಗಳಿ ಬೇಡಿಕೆ ಸಲ್ಲಿಸಿದ ಸಂಸದ ಡಿ.ಕೆ.ಸುರೇಶ್! » Dynamic Leader
September 18, 2024
ಬೆಂಗಳೂರು

ಮುಂಬರುವ ಬಜೆಟ್‌ನಲ್ಲಿ ಕ್ಷೇತ್ರಕ್ಕೆ ಹೆಚ್ಚಿನ ಅನುದಾನ ಮೀಸಲಿರಿಸಲು ಮುಖ್ಯಮಂತ್ರಿಗಳಿ ಬೇಡಿಕೆ ಸಲ್ಲಿಸಿದ ಸಂಸದ ಡಿ.ಕೆ.ಸುರೇಶ್!

ಬೆಂಗಳೂರು: ಬೆಂಗಳೂರು ಗ್ರಾಮಾಂತರ ಲೋಕಸಭಾ ಕ್ಷೇತ್ರದ ಸಂಸದ ಡಿ.ಕೆ.ಸುರೇಶ್ ರವರು ನಿನ್ನೆ ಮುಖ್ಯಮಂತ್ರಿಗಳಾದ ಸಿದ್ದರಾಮಯ್ಯ ಅವರನ್ನು ಭೇಟಿ ಮಾಡಿ, ಮುಂಬರುವ ಬಜೆಟ್‌ನಲ್ಲಿ ಕ್ಷೇತ್ರಕ್ಕೆ ಅನುದಾನ ಮೀಸಲಿರಿಸುವಂತೆ ಮನವಿ ಮಾಡಿದ್ದಾರೆ.

ಮುಖ್ಯವಾಗಿ ಆನೇಕಲ್ ತಾಲ್ಲೂಕಿನಲ್ಲಿ ಹಸಿರುಮನೆ ಹೂ ಬೆಳೆಗಾರರಿಗೆ ಅನುದಾನ ಮೀಸಲಿಡುವಂತೆ ಮುಖ್ಯಮಂತ್ರಿಗಳಿಗೆ ಬೇಡಿಕೆ ಸಲ್ಲಿಸಿರುವುದು ಗಮನಾರ್ಹ ವಿಷಯವಾಗಿದೆ.

ಸಂಸದರ ಕ್ಷೇತ್ರ ವ್ಯಾಪ್ತಿಯಲ್ಲಿ ಬರುವ ವಸತಿ ರಹಿತರಿಗೆ ಅನುಕೂಲ ಆಗುವಂತೆ ರಾಜೀವ್ ಗಾಂಧಿ ವಸತಿ ನಿಗಮದ ಅಡಿಯಲ್ಲಿ ವಸತಿ ಕಲ್ಪಿಸುವಂತೆ ಬಜೆಟ್‌ನಲ್ಲಿ ಅನುವು ಮಾಡಿಕೊಡಲು ಮನವಿ ಮಾಡಿದ್ದಾರೆ. ಇದರಿಂದ ಕ್ಷೇತ್ರದಲ್ಲಿ ವಸತಿ ರಹಿತ ಬಡವರಿಗೆ ಮುಂದಿನ ದಿನಗಳಲ್ಲಿ ಮನೆಗಳು ಸಿಗುವ ಲಕ್ಷಣಗಳು ಕಂಡುಬರುತ್ತಿವೆ.

ಒಟ್ಟಾರೆಯಾಗಿ ಇವರ ಕ್ಷೇತ್ರದ ಅಡಿಯಲ್ಲಿ ಬರುವ ಎಲ್ಲಾ ವಿಧಾನಸಭಾ ಕ್ಷೇತ್ರಗಳಿಗೆ ಮೂಲ ಸೌಕರ್ಯ ಅಭಿವೃದ್ಧಿಗೆ ಹೆಚ್ಚಿನ ಅನುದಾನ ಮೀಸಲಿಡುವಂತೆ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ಬಳಿ ಮನವಿ ಮಾಡಿದ್ದಾರೆ. ಮಾಗಡಿ ವಿಧಾನಸಭಾ ಕ್ಷೇತ್ರದ ಶಾಸಕ ಎಚ್.ಸಿ.ಬಾಲಕೃಷ್ಣ ಈ ಸಂದರ್ಭದಲ್ಲಿ ಉಪಸ್ಥಿತರಿದ್ದರು.

Related Posts