ರೈತರು ಕ್ರಿಮಿನಲ್‌ಗಳಲ್ಲ: ರೈತರ ಪ್ರತಿಭಟನೆಗೆ ಎಂ.ಎಸ್.ಸ್ವಾಮಿನಾಥನ್ ಪುತ್ರಿ ಬೆಂಬಲ! » Dynamic Leader
December 5, 2024
ದೇಶ

ರೈತರು ಕ್ರಿಮಿನಲ್‌ಗಳಲ್ಲ: ರೈತರ ಪ್ರತಿಭಟನೆಗೆ ಎಂ.ಎಸ್.ಸ್ವಾಮಿನಾಥನ್ ಪುತ್ರಿ ಬೆಂಬಲ!

“ರೈತರು, ಅಪರಾಧಿಗಳಲ್ಲ. ರೈತರನ್ನು ಅಪರಾಧಿಗಳಂತೆ ನಡೆಸಿಕೊಳ್ಳಬಾರದು. ಭಾರತದ ಪ್ರಮುಖ ವಿಜ್ಞಾನಿಗಳಾದ ನಿಮ್ಮೆಲ್ಲರಲ್ಲಿ ನಾನು ವಿನಂತಿಸುವುದು ಇದನ್ನೇ. ಈ ಸಮಸ್ಯೆಗೆ ಪರಿಹಾರ ಕಂಡುಕೊಳ್ಳಬೇಕಿದೆ. ಇದುವೇ ನನ್ನ ಕೋರಿಕೆ”

ಕೃಷಿ ಉತ್ಪನ್ನಗಳಿಗೆ ಕನಿಷ್ಠ ಬೆಂಬಲ ಬೆಲೆ ಸೇರಿದಂತೆ ವಿವಿಧ ಬೇಡಿಕೆಗಳಿಗೆ ಆಗ್ರಹಿಸಿ ದೆಹಲಿಯಲ್ಲಿ ಫೆಬ್ರವರಿ 13 ರಿಂದ ರೈತರು ಮುಷ್ಕರ ನಡೆಸುತ್ತಿದ್ದಾರೆ. ಈ ಹಿನ್ನಲೆಯಲ್ಲಿ ದಿವಂಗತ ಕೃಷಿ ವಿಜ್ಞಾನಿ ಎಂ.ಎಸ್.ಸ್ವಾಮಿನಾಥನ್ ಅವರ ಪುತ್ರಿ ಮಧುರಾ ಸ್ವಾಮಿನಾಥನ್ ಬೆಂಬಲ ವ್ಯಕ್ತಪಡಿಸಿದ್ದಾರೆ.

ಇತ್ತೀಚೆಗೆ ನಿಧನರಾದ ಕೃಷಿ ವಿಜ್ಞಾನಿ ಎಂ.ಎಸ್.ಸ್ವಾಮಿನಾಥನ್ ಅವರಿಗೆ ಕೇಂದ್ರ ಸರ್ಕಾರ ಭಾರತ ರತ್ನ ಪ್ರಶಸ್ತಿ ಘೋಷಿಸಿದೆ. ಇದಕ್ಕಾಗಿ ಕೃತಜ್ಞತೆ ಸಲ್ಲಿಸಲು ಭಾರತೀಯ ಕೃಷಿ ಸಂಶೋಧನಾ ಸಂಸ್ಥೆಯ ವತಿಯಿಂದ ನೆನ್ನೆ (ಫೆಬ್ರವರಿ 13) ಸಭೆ ಆಯೋಜಿಸಲಾಗಿತ್ತು. ಸಭೆಗೆ ಎಂ.ಎಸ್.ಸ್ವಾಮಿನಾಥನ್ ಅವರ ಪುತ್ರಿ ಹಾಗೂ ಅರ್ಥಶಾಸ್ತ್ರಜ್ಞೆ ಮಧುರಾ ಸ್ವಾಮಿನಾಥನ್ ಭಾಗವಹಿಸಿ ವಿಡಿಯೋ ಕಾನ್ಫರೆನ್ಸ್ ಮೂಲಕ ಮಾತನಾಡಿದರು.

ಆಗ ಮಾತನಾಡಿದ ಅವರು, ‘‘ಪಂಜಾಬ್ ರೈತರು ಇಂದು ದಿಲ್ಲಿಯತ್ತ ಪಾದಯಾತ್ರೆ ನಡೆಸುತ್ತಿದ್ದಾರೆ. ಹರ್ಯಾಣದಲ್ಲಿ ಅವರಿಗಾಗಿ ಜೈಲು ಸಿದ್ಧವಾಗುತ್ತಿದ್ದು, ಅವರನ್ನು ತಡೆಯಲು ಬ್ಯಾರಿಕೇಡ್‌ಗಳನ್ನು ಸಿದ್ಧಪಡಿಸಲಾಗುತ್ತಿದೆ ಎಂದು ನನಗೆ ಪತ್ರಿಕೆಗಳ ಮೂಲಕ ತಿಳಿದುಬಂದಿದೆ.

ನಮಗೆ ಅನ್ನ ನೀಡುವ ರೈತರೊಂದಿಗೆ ಮಾತುಕತೆ ನಡೆಸಬೇಕು. ಅವರು ರೈತರು, ಅಪರಾಧಿಗಳಲ್ಲ. ರೈತರನ್ನು ಅಪರಾಧಿಗಳಂತೆ ನಡೆಸಿಕೊಳ್ಳಬಾರದು. ಭಾರತದ ಪ್ರಮುಖ ವಿಜ್ಞಾನಿಗಳಾದ ನಿಮ್ಮೆಲ್ಲರಲ್ಲಿ ನಾನು ವಿನಂತಿಸುವುದು ಇದನ್ನೇ. ಈ ಸಮಸ್ಯೆಗೆ ಪರಿಹಾರ ಕಂಡುಕೊಳ್ಳಬೇಕಿದೆ. ಇದುವೇ ನನ್ನ ಕೋರಿಕೆಯಾಗಿದೆ” ಎಂದು ಹೇಳಿದರು.

Related Posts