195 ಅಭ್ಯರ್ಥಿಗಳ ಮೊದಲ ಪಟ್ಟಿ ಬಿಡುಗಡೆ ಮಾಡಿದ ಬಿಜೆಪಿ: ವಾರಣಾಸಿಯಲ್ಲಿ ಮೋದಿ ಮತ್ತೆ ಸ್ಪರ್ದೆ.! » Dynamic Leader
December 13, 2024
ರಾಜಕೀಯ

195 ಅಭ್ಯರ್ಥಿಗಳ ಮೊದಲ ಪಟ್ಟಿ ಬಿಡುಗಡೆ ಮಾಡಿದ ಬಿಜೆಪಿ: ವಾರಣಾಸಿಯಲ್ಲಿ ಮೋದಿ ಮತ್ತೆ ಸ್ಪರ್ದೆ.!

ನವದೆಹಲಿ: ಬಿಜೆಪಿ ಬಿಡುಗಡೆ ಮಾಡಿರುವ ಅಭ್ಯರ್ಥಿಗಳ ಮೊದಲ ಪಟ್ಟಿಯಲ್ಲಿ ಪ್ರಧಾನಿ ಮೋದಿ ಮತ್ತೊಮ್ಮೆ ವಾರಣಾಸಿ ಕ್ಷೇತ್ರದಿಂದ ಸ್ಪರ್ಧಿಸುತ್ತಿದ್ದಾರೆ. ಸಂಸತ್ ಚುನಾವಣೆಗೆ ಇನ್ನು ಕೆಲವೇ ವಾರಗಳು ಬಾಕಿ ಇವೆ. ಚುನಾವಣಾ ಆಯೋಗ ಶೀಘ್ರವೇ ಘೋಷಣೆ ಮಾಡುವ ನಿರೀಕ್ಷೆ ಇದೆ.

ಯಾವಾಗ ಬೇಕಾದರೂ ಚುನಾವಣಾ ದಿನಾಂಕ ಘೋಷಣೆಯಾಗುವ ನಿರೀಕ್ಷೆ ಇದೆ. ಚುನಾವಣಾ ಕಣದಲ್ಲಿ ಮೊದಲ ಅಭ್ಯರ್ಥಿಯನ್ನು ಕಣಕ್ಕಿಳಿಸುವ ಮೂಲಕ ವಿರೋಧ ಪಕ್ಷಗಳ ಮೇಲೆ ಒತ್ತಡ ಹೇರಲು ಆಡಳಿತಾರೂಢ ಬಿಜೆಪಿ ಸಿದ್ಧವಾಗುತ್ತಿದೆ. ಆ ಮೂಲಕ ನಿನ್ನೆ ಅಭ್ಯರ್ಥಿಗಳ ಆಯ್ಕೆಗೆ ಸಂಬಂಧಿಸಿದಂತೆ ಬಿಜೆಪಿ ನಾಯಕತ್ವ ಸಮಾಲೋಚನೆ ನಡೆಸಿದೆ.

ಇದರ ಬೆನ್ನಲ್ಲೇ ದೇಶಾದ್ಯಂತ ರಾಷ್ಟ್ರೀಯ ಪಕ್ಷಗಳು ಹಾಗೂ ಪ್ರಾದೇಶಿಕ ಪಕ್ಷಗಳು ಮೈತ್ರಿ ಮಾಡಿಕೊಳ್ಳುವ ಕಾರ್ಯದಲ್ಲಿ ನಿರತರಾಗಿರುವಾಗಲೇ ಅಭ್ಯರ್ಥಿಗಳ ಘೋಷಣೆ ಕೂಡ ಪ್ರಕಟವಾಗುತ್ತಿದೆ.

ಈ ಹಿನ್ನೆಲೆಯಲ್ಲಿ, ರಾಷ್ಟ್ರೀಯ ಪ್ರಜಾಸತ್ತಾತ್ಮಕ ಮೈತ್ರಿಕೂಟಕ್ಕೆ (ಎನ್.ಡಿ.ಎ) ನೇತೃತ್ವ ವಹಿಸಿರುವ ಬಿಜೆಪಿ ತನ್ನ ಅಭ್ಯರ್ಥಿಗಳ ಮೊದಲ ಪಟ್ಟಿಯನ್ನು ಇಂದು ಬಿಡುಗಡೆ ಮಾಡಿದೆ. ಈ ಪಟ್ಟಿಯಲ್ಲಿ ಪ್ರಧಾನಿ ಮೋದಿ, ಅಮಿತ್ ಶಾ ಮತ್ತಿತರರು ಸೇರಿದ್ದಾರೆ. ಅದರಂತೆ ಪ್ರಧಾನಿ ಮೋದಿ ಮತ್ತೆ ವಾರಣಾಸಿ ಕ್ಷೇತ್ರದಿಂದ ಸ್ಪರ್ಧಿಸುತ್ತಿದ್ದಾರೆ.

ಈ ಸಂಬಂಧ ಮಾತನಡಿದ ಬಿ.ಜೆ.ಪಿ.ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿ ವಿನೋದ್ ತಾವಡೆ, “ಮೊದಲ ಹಂತವಾಗಿ 16 ರಾಜ್ಯಗಳು ಮತ್ತು 2 ಕೇಂದ್ರಾಡಳಿತ ಪ್ರದೇಶಗಳ 195 ಕ್ಷೇತ್ರಗಳಿಗೆ ಅಭ್ಯರ್ಥಿಗಳ ಪಟ್ಟಿಯನ್ನು ಪ್ರಕಟಿಸಲಾಗಿದೆ” ಎಂದು ಹೇಳಿದರು.

ಅಭ್ಯರ್ಥಿಗಳ ಮೊದಲ ಪಟ್ಟಿಯ ಪ್ರಕಾರ 34 ಸಚಿವರು ಮತ್ತೆ ಸ್ಪರ್ಧಿಸುತ್ತಿದ್ದಾರೆ. ಪಟ್ಟಿಯಲ್ಲಿ 28 ಮಹಿಳೆಯರು ಮತ್ತು 47 ಮಂದಿ 50 ವರ್ಷದೊಳಗಿನವರು. ಉತ್ತರಪ್ರದೇಶ-51, ಪಶ್ಚಿಮ ಬಂಗಾಳ-20, ತೆಲಂಗಾಣ-9, ಗುಜರಾತ್ -15 ಮಧ್ಯಪ್ರದೇಶ-24, ರಾಜಸ್ಥಾನ-15, ಕೇರಳ-12, ಜಾರ್ಖಂಡ್, ಛತ್ತೀಸ್‌ಗಢ ತಲಾ 11.

ಪ್ರಧಾನಿ ಮೋದಿ, ವಾರಣಾಸಿ; ಸಚಿವ ಅಮಿತ್ ಶಾ, ಗಾಂಧಿನಗರದಲ್ಲಿ ಸ್ಪರ್ದಿಸುತ್ತಿದ್ದಾರೆ.

Related Posts