ಪಾರಂಪರಿಕ ಮಹತ್ವವುಳ್ಳ ರಾಮನಗರ, ಚನ್ನಪಟ್ಟಣ ರೈಲು ನಿಲ್ದಾಣಗಳು ಮೇಲ್ದರ್ಜೆಗೆ: ಹೆಚ್.ಡಿ.ಕುಮಾಸ್ವಾಮಿ » Dynamic Leader
October 11, 2024
ರಾಜ್ಯ

ಪಾರಂಪರಿಕ ಮಹತ್ವವುಳ್ಳ ರಾಮನಗರ, ಚನ್ನಪಟ್ಟಣ ರೈಲು ನಿಲ್ದಾಣಗಳು ಮೇಲ್ದರ್ಜೆಗೆ: ಹೆಚ್.ಡಿ.ಕುಮಾಸ್ವಾಮಿ

ಬೆಂಗಳೂರು: ಸಾಂಸ್ಕೃತಿಕ ನಗರ ಮೈಸೂರು ಹಾಗೂ ರಾಜಧಾನಿ ಬೆಂಗಳೂರು ನಡುವಿನ ಐತಿಹಾಸಿಕ, ಪಾರಂಪರಿಕ ಮಹತ್ವವುಳ್ಳ ರಾಮನಗರ, ಚನ್ನಪಟ್ಟಣ ರೈಲು ನಿಲ್ದಾಣಗಳನ್ನು ಮೇಲ್ದರ್ಜೆಗೇರಿಸಲು ಪ್ರಧಾನಿಗಳಾದ ನರೇಂದ್ರ ಮೋದಿ ಅವರು ಸಂಕಲ್ಪ ಮಾಡಿರುವುದು ನನಗೆ ಅತೀವ ಸಂತಸ ಉಂಟು ಮಾಡಿದೆ ಎಂದು ಮಾಜಿ ಮುಖ್ಯಮಂತ್ರಿ ಎಚ್.ಡಿ.ಕುಮಾರಸ್ವಾಮಿ ಹೇಳಿದ್ದಾರೆ.  

ರೂ.20.93 ಕೋಟಿ ವೆಚ್ಚದಲ್ಲಿ ಚನ್ನಪಟ್ಟಣ ರೈಲು ನಿಲ್ದಾಣ, ರೂ.20.96 ಕೋಟಿ ವೆಚ್ಚದಲ್ಲಿ ರಾಮನಗರ ರೈಲು ನಿಲ್ದಾಣವನ್ನು ಸ್ಥಳೀಯ ಸಾಂಸ್ಕೃತಿಕ ಸೊಗಡಿನ ಮಾದರಿಯಲ್ಲಿಯೇ ಉನ್ನತೀಕರಿಸುತ್ತಿರುವುದು ಈ ಭಾಗದ ಜನರ ಆಶೋತ್ತರಗಳನ್ನು ಈಡೇರಿಸುವ ಬೃಹತ್ ಪ್ರಯತ್ನವಾಗಿದೆ ಎಂದು ಹೇಳಿದ್ದಾರೆ.

ನಿತ್ಯವೂ ಉದ್ಯೋಗ, ವ್ಯವಹಾರಕ್ಕಾಗಿ ಎರಡೂ ನಗರಗಳ ನಡುವೆ ಸಂಚರಿಸುವ ಜಿಲ್ಲೆಯ ಅಸಂಖ್ಯಾತ ಜನರಿಗೆ ಅನುಕೂಲವೂ ಆಗಲಿದೆ. ಈ ಕಾರಣಕ್ಕಾಗಿ ನಾನು ಮಾನ್ಯ ಪ್ರಧಾನಿಗಳು ಹಾಗೂ ಕೇಂದ್ರ ರೈಲ್ವೆ ಸಚಿವರಾದ ಅಶ್ವಿನಿ ವೈಶ್ನವ್ ಅವರಿಗೆ ತುಂಬು ಹೃದಯದ ಧನ್ಯವಾದಗಳನ್ನು ಸಲ್ಲಿಸುತ್ತೇನೆ ಎಂದು ಹೇಳಿದ್ದಾರೆ.

Related Posts