ಪ್ರಜ್ವಲ್ ರೇವಣ್ಣ ಅಶ್ಲೀಲ ವೀಡಿಯೋ ವಿಚಾರದಲ್ಲಿ ಪ್ರಧಾನಿ ಮೋದಿ ಮೌನವಾಗಿರುವುದೇಕೆ? ಪ್ರಿಯಾಂಕಾ ಗಾಂಧಿ
ನವದೆಹಲಿ: ದೇವೇಗೌಡರ ಪುತ್ರನ ಅಶ್ಲೀಲ ವಿಡಿಯೋ ವಿಚಾರದಲ್ಲಿ ಪ್ರಧಾನಿ ಮೋದಿ ಮೌನವಾಗಿರುವುದೇಕೆ? ಎಂದು ಕಾಂಗ್ರೆಸ್ ಪ್ರಧಾನ ಕಾರ್ಯದರ್ಶಿ ಪ್ರಿಯಾಂಕಾ ವಾದ್ರಾ ಗಾಂಧಿ ಪ್ರಶ್ನೆ ಎತ್ತಿದ್ದಾರೆ.
ಜಾತ್ಯತೀತ ಜನತಾ ದಳದ ರಾಷ್ಟ್ರೀಯ ಅಧ್ಯಕ್ಷ ಮಾಜಿ ಪ್ರಧಾನಿ ದೇವೇಗೌಡರ ಹಿರಿಯ ಮಗ ರೇವಣ್ಣ, ಅವರ ಪುತ್ರ ಪ್ರಜ್ವಲ್ ರೇವಣ್ಣ ವಿರುದ್ಧ ಅಶ್ಲೀಲ ವೀಡಿಯೋ ಪ್ರಕರಣ ರೂಪ ಪಡೆದುಕೊಂಡಿದೆ. ವಿಚಾರಣೆಗೆ ಹೆದರಿ ಅವರು ಜರ್ಮನಿಗೆ ಪಲಾಯನ ಮಾಡಿದ್ದಾರೆ ಎಂದು ಆರೋಪಿಸಲಾಗುತ್ತಿದೆ. ಕರ್ನಾಟಕ ಸರ್ಕಾರ ವಿಶೇಷ ತನಿಖಾ ಸಮಿತಿ (SIT) ಯನ್ನು ರಚಿಸಿದೆ.
ಈ ಬಗ್ಗೆ ಸಾಮಾಜಿಕ ಜಾಲತಾಣ ಎಕ್ಸ್‌ನಲ್ಲಿ ಪ್ರಿಯಾಂಕಾ ಪ್ರಕಟಿಸಿರುವ ಪೋಸ್ಟ್‌ನಲ್ಲಿ, “10 ದಿನಗಳ ಹಿಂದೆ ಪ್ರಧಾನಿ ಕೈಕುಲುಕಿ, ಭುಜ ತಟ್ಟಿ ಕರ್ನಾಟಕ ಚುನಾವಣಾ ಪ್ರಚಾರ ಸಭೆಯಲ್ಲಿ ಭಾಗವಹಿಸಿದ್ದ ವ್ಯಕ್ತಿ ಈಗ ದೇಶ ಬಿಟ್ಟು ತಲೆಮರೆಸಿಕೊಂಡಿದ್ದಾರೆ. ಪ್ರಜ್ವಲ್ ರೇವಣ್ಣ ನೂರಾರು ಮಹಿಳೆಯರ ಬದುಕನ್ನು ಹಾಳು ಮಾಡಿದ್ದಾರೆ.
ದೇವೇಗೌಡರ ಮೊಮ್ಮಗ ಪ್ರಜ್ವಲ್ ರೇವಣ್ಣ ಮಾಡಿದ ಅಪರಾಧಗಳನ್ನು ಕೇಳಿದರೆ ಹೃದಯ ಕಂಪಿಸುತ್ತದೆ. ಈ ಬಗ್ಗೆ ಪ್ರಧಾನಿ ಮೋದಿ ಬಾಯಿ ತೆರೆಯುತ್ತಾರಾ? ಪ್ರಧಾನಿ ಮೋದಿ ಯಾವುದೇ ಪ್ರತಿಕ್ರಿಯೆ ನೀಡದೆ ಮೌನ ವಹಿಸಿರುವುದು ಏಕೆ? ಎಂದು ಪ್ರಧಾನಿ ಮೋದಿಯನ್ನು ಪ್ರಿಯಾಂಕಾ ವಾದ್ರಾ ಗಾಂಧಿ ಪ್ರಶ್ನಿಸಿದ್ದಾರೆ.