ಶ್ರೀ ಕ್ಷೇತ್ರ ಧರ್ಮಸ್ಥಳಕ್ಕೆ ಭೇಟಿನೀಡಿ ಶ್ರೀ ಮಂಜುನಾಥ ಸ್ವಾಮಿಯ ದರ್ಶನ ಪಡೆ ಮುಖ್ಯಮಂತ್ರಿ! » Dynamic Leader
September 18, 2024
ರಾಜ್ಯ

ಶ್ರೀ ಕ್ಷೇತ್ರ ಧರ್ಮಸ್ಥಳಕ್ಕೆ ಭೇಟಿನೀಡಿ ಶ್ರೀ ಮಂಜುನಾಥ ಸ್ವಾಮಿಯ ದರ್ಶನ ಪಡೆ ಮುಖ್ಯಮಂತ್ರಿ!

ಧರ್ಮಸ್ಥಳ (ದಕ್ಷಿಣ ಕನ್ನಡ ಜಿಲ್ಲೆ): ಇಂದು ಶ್ರೀ ಕ್ಷೇತ್ರ ಧರ್ಮಸ್ಥಳಕ್ಕೆ ಭೇಟಿನೀಡಿ ಶ್ರೀ ಮಂಜುನಾಥ ಸ್ವಾಮಿಯ ದರ್ಶನ ಪಡೆದು ವಿಶೇಷ ಪೂಜೆ ಸಲ್ಲಿಸಿದ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಈ ವರ್ಷ ನಾಡಿನಲ್ಲಿ ಉತ್ತಮ ಮಳೆ, ಬೆಳೆಯಾಗಲಿ. ಜನರ ಕಷ್ಟ – ನಷ್ಟಗಳೆಲ್ಲವೂ ದೂರಾಗಿ ಸುಖ, ಶಾಂತಿ, ಸಮೃದ್ಧಿ ಎಲ್ಲರ ಬದುಕಲ್ಲಿ ನೆಲೆಸಲಿ ಎಂದು ಪ್ರಾರ್ಥಿಸಿರುವುದಾಗಿ ಹೇಳಿದರು.

ಶ್ರೀ ಕ್ಷೇತ್ರ ಧರ್ಮಸ್ಥಳಕ್ಕೆ ಭೇಟಿನೀಡಿದ ಸಂದರ್ಭದಲ್ಲಿ ಧರ್ಮಾಧಿಕಾರಿಗಳು ಹಾಗೂ ರಾಜ್ಯಸಭಾ ಸದಸ್ಯರು ಆದ ವೀರೇಂದ್ರ ಹೆಗ್ಗಡೆ ಅವರನ್ನು ಭೇಟಿಯಾಗಿ, ಹಲವು ವಿಷಯಗಳ ಕುರಿತು ಚರ್ಚಿಸಿದ್ದಾರೆ. ಈ ಸಂದರ್ಭದಲ್ಲಿ ಉಪ ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್, ನಗರಾಭಿವೃದ್ಧಿ ಸಚಿವ ಬೈರತಿ ಸುರೇಶ್ ಉಪಸ್ಥಿತರಿದ್ದರು.

“ಶ್ರೀ ಕ್ಷೇತ್ರ ಧರ್ಮಸ್ಥಳದಲ್ಲಿ ದೇವರ ದರ್ಶನಕ್ಕೆ ತೆರಳುವ ಸಂದರ್ಭದಲ್ಲಿ ಕೆಲವು ಮಹಿಳೆಯರು ನಗುಮೊಗದಲ್ಲಿ ನನ್ನ ಬಳಿ ಬಂದು ಗೃಹಲಕ್ಷ್ಮಿ ಯೋಜನೆಯ 2,000 ರೂಪಾಯಿಯಿಂದ ನಾವು ನೆಮ್ಮದಿಯ ಬದುಕು ಕಟ್ಟಿಕೊಂಡಿದ್ದೇವೆ, ನೀವು ಶಕ್ತಿ ಯೋಜನೆ ಜಾರಿ ಮಾಡಿದ್ದರಿಂದ ಇಂದು ನಾವು ದೂರದ ಊರಿನಿಂದ ದೇವರ ದರ್ಶನಕ್ಕೆ ಬರಲು ಅನುಕೂಲ ಆಗಿದೆ, ನಿಮಗೆ ಮಂಜುನಾಥ ಸ್ವಾಮಿ ದೀರ್ಘ ಆಯಸ್ಸು, ಆರೋಗ್ಯ ನೀಡಲಿ, ಬಡವರಿಗೆ ಇನ್ನಷ್ಟು ಅನುಕೂಲ ಆಗುವಂತಹ ಕಾರ್ಯಕ್ರಮಗಳು ನಿಮ್ಮಿಂದ ಜಾರಿಯಾಗಲಿ ಎಂದು ಆಶೀರ್ವದಿಸಿದರು” ಎಂದು ಮುಖ್ಯಮಂತ್ರಿಗಳು ಹೇಳಿಕೊಂಡಿದ್ದಾರೆ.

“ಈ ದಿನ ದೇವರ ದರ್ಶನ ಭಾಗ್ಯದ ಜೊತೆಗೆ ಹತ್ತಾರು ತಾಯಂದಿರ ಆಶೀರ್ವಾದ ಪಡೆದ ಧನ್ಯತಾಭಾವ ನನ್ನದು” ಎಂದು ಹೇಳಿದ್ದಾರೆ.

Related Posts