ಪೆಟ್ರೋಲ್ ಡೀಸೆಲ್ ದರ ಏರಿಕೆ ಆದೇಶ ಹಿಂಪಡೆಯಲು ವೆಲ್ಫೇರ್ ಪಾರ್ಟಿ ಆಗ್ರಹ! » Dynamic Leader
October 10, 2024
ರಾಜ್ಯ

ಪೆಟ್ರೋಲ್ ಡೀಸೆಲ್ ದರ ಏರಿಕೆ ಆದೇಶ ಹಿಂಪಡೆಯಲು ವೆಲ್ಫೇರ್ ಪಾರ್ಟಿ ಆಗ್ರಹ!

ಬೆಂಗಳೂರು: ಕೇಂದ್ರ ಸರ್ಕಾರದ ಬೆಲೆ ಏರಿಕೆ ನೀತಿಗಳನ್ನು ಟೀಕಿಸುತ್ತಾ ಅಧಿಕಾರಕ್ಕೇರಿದ ಕಾಂಗ್ರೆಸ್ ನೇತೃತ್ವದ ರಾಜ್ಯ ಸರಕಾರ ಪೆಟ್ರೋಲ್, ಡೀಸೆಲ್ ಬೆಲೆಯನ್ನು ಏರಿಸಿದ್ದು ಖಂಡನಾರ್ಹ. ಈಗಾಗಲೇ ಅಗತ್ಯ ವಸ್ತುಗಳ ಬೆಲೆ ಏರಿಕೆಯಿಂದ ಕಂಗೆಟ್ಟಿರುವ ಕನ್ನಡ ನಾಡ ಜನತೆಗೆ ಗಾಯದ ಮೇಲೆ ಬರೆ ಎಳೆದಂತಾಗಿದೆ ಎಂದು ವೆಲ್ಫೇರ್ ಪಾರ್ಟಿ ಆಫ್ ಇಂಡಿಯಾ ಇದರ ಕರ್ನಾಟಕ ರಾಜ್ಯಾಧ್ಯಕ್ಷ ಅಡ್ವಕೇಟ್ ತಾಹೇರ್ ಹುಸೇನ್ ಹೇಳಿದ್ದಾರೆ.

ಅವರು ಮಾತನಾಡುತ್ತಾ, ಸಂಕಷ್ಟದಿಂದ ಕೂಡಿದ ಜನತೆಗೆ ಗ್ಯಾರಂಟಿ ಯೋಜನೆಗಳ ಮೂಲಕ ಸ್ವಲ್ಪ ನೆಮ್ಮದಿ ನೀಡಿದ್ದ ಸರ್ಕಾರ, ಲೋಕಸಭಾ ಚುನಾವಣೆ ಮುಗಿದ ತಕ್ಷಣ ಪೆಟ್ರೋಲ್, ಡೀಸೆಲ್ ಬೆಲೆ ಏರಿಸಿರುವುದು ನಾಡಿನ ಜನತೆಗೆ ಬಗೆದ ದ್ರೊಹವಾಗಿದೆ.

ಆದ್ದರಿಂದ ರಾಜ್ಯ ಸರಕಾರ ತಕ್ಷಣ ಸ್ಪಂದಿಸಿ ಪೆಟ್ರೋಲ್, ಡೀಸೆಲ್ ದರ ಇಳಿಕೆ ಮಾಡುವ ಮೂಲಕ ಜನತೆಯ ಹಿತವನ್ನು ಕಾಪಾಡಲು ಸರಕಾರ ಮುಂದಾಗಬೇಕೆಂದು ಅವರು ಸರಕಾರವನ್ನು ಆಗ್ರಹಿಸಿದ್ದಾರೆ.

Related Posts