ಭಾರತದಲ್ಲಿ ಅಲ್ಪಸಂಖ್ಯಾತರ ಮೇಲಿನ ದಾಳಿಗಳು ಹೆಚ್ಚುತ್ತಿವೆ ಎಂದ ಅಮೆರಿಕ… ತಿರಸ್ಕರಿಸಿದ ಭಾರತ!
ನವದೆಹಲಿ: ಧಾರ್ಮಿಕ ಸ್ವಾತಂತ್ರ್ಯದ ಕುರಿತು ಅಮೆರಿಕ ನೀಡಿರುವ ಹೇಳಿಕೆ ನಿರಂಕುಶವಾಗಿದ್ದು ಅದನ್ನು ತಿರಸ್ಕರಿಸುತ್ತಿದ್ದೇವೆ ಎಂದು ವಿದೇಶಾಂಗ ವ್ಯವಹಾರಗಳ ಸಚಿವಾಲಯದ ವಕ್ತಾರ ರಣಧೀರ್ ಜೈಸ್ವಾಲ್ ಹೇಳಿದ್ದಾರೆ.
ಈ ಸಂಬಂಧ ಮಾತನಾಡಿರುವ ರಣಧೀರ್ ಜೈಸ್ವಾಲ್, ‘ಅಮೆರಿಕ ವರದಿಯು ಏಕಪಕ್ಷೀಯವಾಗಿದೆ. ಭಾರತದ ಸಾಮಾಜಿಕ ರಚನೆಯನ್ನು ಅರ್ಥಮಾಡಿಕೊಳ್ಳದೆ ವರದಿಯನ್ನು ಸಿದ್ಧಪಡಿಸಲಾಗಿದೆ. ಆರೋಪಗಳು ಮತ್ತು ತಪ್ಪು ನಿರೂಪಣೆಗಳನ್ನು ಮಿಶ್ರಣಗೊಳಿಸಿ ವರದಿ ಸಿದ್ಧಪಡಿಸಲಾಗಿದೆ. ನಾವು ಧಾರ್ಮಿಕ ಸ್ವಾತಂತ್ರ್ಯದ ಮೇಲಿನ ಅಮೆರಿಕ ವರದಿಯನ್ನು ತಿರಸ್ಕರಿಸುತ್ತೇವೆ’ ಎಂದು ಹೇಳಿದ್ದಾರೆ.