ಮುಸ್ಲಿಂ ಸಮುದಾಯದ ಆಧ್ಯಾತ್ಮಿಕ ನಾಯಕ ಸೈಯ್ಯದ್ ಕೂರತ್ ತಂಙಳ್ ಅವರ ನಿಧನಕ್ಕೆ ಮುಖ್ಯಮಂತ್ರಿ ಸಂತಾಪ! » Dynamic Leader
July 17, 2024
ದೇಶ

ಮುಸ್ಲಿಂ ಸಮುದಾಯದ ಆಧ್ಯಾತ್ಮಿಕ ನಾಯಕ ಸೈಯ್ಯದ್ ಕೂರತ್ ತಂಙಳ್ ಅವರ ನಿಧನಕ್ಕೆ ಮುಖ್ಯಮಂತ್ರಿ ಸಂತಾಪ!

ಬೆಂಗಳೂರು: ಮುಸ್ಲಿಂ ಸಮುದಾಯದ ಆಧ್ಯಾತ್ಮಿಕ ನಾಯಕರು, ಹಿರಿಯರು ಆದ ಸೈಯ್ಯದ್ ಕೂರತ್ ತಂಙಳ್ ಅವರ ನಿಧನದ ಸುದ್ದಿ ನೋವುಂಟುಮಾಡಿದೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಹೇಳಿದ್ದಾರೆ.

ಸದಾಕಾಲ ಸಮಾಜದ ಹಿತವನ್ನು ಬಯಸುತ್ತಿದ್ದ, ಕೋಮುಸಾಮರಸ್ಯಕ್ಕಾಗಿ ದುಡಿದ ಹಿರಿಯ ಚೇತನದ ಅಗಲಿಕೆ ಮುಸ್ಲಿಂ ಸಮುದಾಯಕ್ಕೆ ಮಾತ್ರವಲ್ಲ, ಇಡೀ ನಾಡಿಗೆ ತುಂಬಲಾರದ ನಷ್ಟ. ಮೃತರ ಆತ್ಮಕ್ಕೆ ಶಾಂತಿ ಸಿಗಲಿ ಎಂದು ಪ್ರಾರ್ಥಿಸುತ್ತೇನೆ ಎಂದಿರುವ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಸೈಯ್ಯದ್ ಕೂರತ್ ತಂಙಳ್ ಅವರ ಕುಟುಂಬವರ್ಗ ಮತ್ತು ಅನುಯಾಯಿಗಳಿಗೆ ಸಂತಾಪ ಸೂಚಿಸಿದ್ದಾರೆ.

ಕೇರಳದ ಕಣ್ಣೂರು ಜಿಲ್ಲೆಯ ಎಟ್ಟಿಕ್ಕುಳಂನಲ್ಲಿರುವ ಮನೆಯಲ್ಲಿ ಇಂದು ಬೆಳಗ್ಗೆ 10 ಗಂಟೆ ಸುಮಾರಿಗೆ ಹೃದಯ ಸ್ತಂಭನದಿಂದ ತಂಙಳ್ ಕೊನೆಯುಸಿರೆಳೆದರೆಂದು ತಿಳಿದುಬಂದಿದೆ.

ಇಂದು ಅಪರಾಹ್ನ ಉಳ್ಳಾಲ ಸೈಯದ್ ಮದನಿ ದರ್ಗಾ ವಠಾರದಲ್ಲಿ ನಿಗದಿಯಾಗಿದ್ದ ಸೈಯದ್ ಮದನಿ ಶರೀಅತ್ ಕಾಲೇಜು ವಿದ್ಯಾರ್ಥಿಗಳ ನೂತನ ಹಾಸ್ಟೆಲ್ ಕಟ್ಟಡಕ್ಕೆ ಶಿಲಾನ್ಯಾಸ ಕಾರ್ಯಕ್ರಮದಲ್ಲಿ ಭಾಗವಹಿಸಲು ಅವರು ಬೆಳಗ್ಗೆ ಎಟ್ಟಿಕ್ಕುಳಂನಲ್ಲಿರುವ ಮನೆಯಲ್ಲಿ ಸಿದ್ಧರಾಗುತ್ತಿದ್ದರು ಈ ವೇಳೆ ಹೃದಯ ಸ್ತಂಭನ ಆಗಿ ನಿಧನರಾಗಿದ್ದಾರೆ.

Related Posts