ಮುಖ್ಯಮoತ್ರಿ ಸಿದ್ದರಾಮಯ್ಯ ಅವರಿಗೆ ಅಭಿನಂದನೆ ಸಲ್ಲಿಸಿದ ರಾಜ್ಯ ಸರ್ಕಾರಿ ನೌಕರರ ಸoಘದ ಅಧ್ಯಕ್ಷ ಷಡಕ್ಷರಿ ನೇತೃತ್ವದ ನಿಯೋಗ! » Dynamic Leader
September 10, 2024
ರಾಜ್ಯ

ಮುಖ್ಯಮoತ್ರಿ ಸಿದ್ದರಾಮಯ್ಯ ಅವರಿಗೆ ಅಭಿನಂದನೆ ಸಲ್ಲಿಸಿದ ರಾಜ್ಯ ಸರ್ಕಾರಿ ನೌಕರರ ಸoಘದ ಅಧ್ಯಕ್ಷ ಷಡಕ್ಷರಿ ನೇತೃತ್ವದ ನಿಯೋಗ!

ಬೆಂಗಳೂರು: ರಾಜ್ಯ ಸರ್ಕಾರಿ ನೌಕರರ ಸoಘದ ಅಧ್ಯಕ್ಷ ಷಡಕ್ಷರಿ ಅವರ ನೇತೃತ್ವದ ನಿಯೋಗದವರು ಮುಖ್ಯಮoತ್ರಿ ಸಿದ್ದರಾಮಯ್ಯ ಅವರನ್ನು ಇಂದು ವಿಧಾನಸೌಧದಲ್ಲಿ ಭೇಟಿಯಾಗಿ ಅಭಿನoದನೆ ಸಲ್ಲಿಸಿದರು.

ಆಗಸ್ಟ್‌ 1 ರಿಂದ 7ನೇ ವೇತನ ಆಯೋಗದ ಶಿಫಾರಸುಗಳನ್ನು ಜಾರಿ ಮಾಡುವುದಾಗಿ ನಿರ್ಧರಿಸಲಾಗಿದೆ. ಈ ಮೂಲಕ ಸರ್ಕಾರಿ ನೌಕರರ ಬಹುದಿನಗಳ ಬೇಡಿಕೆ ಈಡೇರಿದೆ. ಸೋಮವಾರ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ಅಧ್ಯಕ್ಷತೆಯಲ್ಲಿ ನಡೆದ ಸಚಿವ ಸಂಪುಟ ಸಭೆಯಲ್ಲಿ 7ನೇ ವೇತನ ಆಯೋಗ ವರದಿ ಜಾರಿ ಕುರಿತು ಸಂಪುಟ ಒಪ್ಪಿಗೆ ಸೂಚಿಸಿತ್ತು.

ರಾಜ್ಯ ಸರ್ಕಾರಿ ನೌಕರರ ವೇತನ ಪರಿಷ್ಕರಣೆಗಾಗಿ ರಚಿಸಲಾದ 7ನೇ ವೇತನ ಆಯೋಗದ ಶಿಫಾರಸುಗಳನ್ನು ಸರ್ಕಾರ ಅoಗೀಕರಿಸಿರುವ ಹಿನ್ನೆಲೆಯಲ್ಲಿ ರಾಜ್ಯ ಸರ್ಕಾರಿ ನೌಕರರ ಸoಘದ ಅಧ್ಯಕ್ಷ ಷಡಕ್ಷರಿ ಅವರ ನೇತೃತ್ವದ ನಿಯೋಗದವರು ಮುಖ್ಯಮoತ್ರಿ ಸಿದ್ದರಾಮಯ್ಯ ಅವರನ್ನು ಭೇಟಿಯಾಗಿ ಅಭಿನoದನೆ ಸಲ್ಲಿಸಿದರು. ಉಪಮುಖ್ಯಮಂತ್ರಿಗಳಾದ  ಡಿ.ಕೆ.ಶಿವಕುಮಾರ್ ಹಾಗೂ ಸಂಘದ ಪದಾಧಿಕಾರಿಗಳು ಈ ವೇಳೆ ಹಾಜರಿದ್ದರು.

Related Posts