ರೇಣುಕಾಸ್ವಾಮಿ ಹತ್ಯೆ ಪ್ರಕರಣ: ದರ್ಶನ್ ಗ್ಯಾಂಗ್ ವಿರುದ್ಧ ಚಾರ್ಜ್ ಶೀಟ್ ಸಲ್ಲಿಕೆ! » Dynamic Leader
January 21, 2025
ಕ್ರೈಂ ರಿಪೋರ್ಟ್ಸ್

ರೇಣುಕಾಸ್ವಾಮಿ ಹತ್ಯೆ ಪ್ರಕರಣ: ದರ್ಶನ್ ಗ್ಯಾಂಗ್ ವಿರುದ್ಧ ಚಾರ್ಜ್ ಶೀಟ್ ಸಲ್ಲಿಕೆ!

ಬೆಂಗಳೂರು: ಚಿತ್ರದುರ್ಗದ ರೇಣುಕಾಸ್ವಾಮಿ ಅಪಹರಣ ಹಾಗೂ ಕೊಲೆ ಪ್ರಕರಣಕ್ಕೆ ಸಂಬಂಧಿಸಿದಂತೆ ದರ್ಶನ್, ಪವಿತ್ರಾ ಗೌಡ ಸೇರಿದಂತೆ ಒಟ್ಟು 17 ಆರೋಪಿಗಳ ವಿರುದ್ಧ 4800 ಪುಟಗಳ ದೋಷಾರೋಪ ಪಟ್ಟಿಯನ್ನು ಪೊಲೀಸರು 24ನೇ ಎಸಿಎಂಎಂ ಕೋರ್ಟ್‌ಗೆ ಇಂದು ಸಲ್ಲಿಸಿದ್ದಾರೆ.

ದೋಷಾರೋಪ ಪಟ್ಟಿಯಲ್ಲಿ ದರ್ಶನ್ ಅವರನ್ನು 2ನೇ ಆರೋಪಿ ಎಂದೇ ದಾಖಲಿಸಲಾಗಿದ್ದು, ಪವಿತ್ರಾ 1ನೇ ಆರೋಪಿಯಾಗಿದ್ದಾರೆಂದು ಉಲ್ಲೇಖಿಸಲಾಗಿದೆ ಎಂದು ತಿಳಿದುಬಂದಿದೆ.

ಜೂನ್ 9 ರಂದು ಕಾಮಾಕ್ಷಿಪಾಳ್ಯ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಪ್ರಕರಣ ದಾಖಲಾಗಿದ್ದು, ಜೂನ್ 11 ರಂದು ನಟ ದರ್ಶನ್ ಅವರನ್ನು ಮೈಸೂರಿನಲ್ಲಿ ಬಂಧಿಸಲಾಗಿತ್ತು. ಕೊಲೆಯಂತಹ ಘೋರ ಪ್ರಕರಣಗಳಲ್ಲಿ ಆರೋಪಿಗಳನ್ನು ಬಂಧಿಸಿದ ನಂತರ ಪೊಲೀಸರು 90 ದಿನಗಳಲ್ಲಿ ಆರೋಪಪಟ್ಟಿ ಸಲ್ಲಿಸುವುದು ಕಡ್ಡಾಯವಾಗಿದೆ.

Related Posts