ನಾಗಮಂಗಲ ಮಲ್ಲೇಗೌಡನಹಳ್ಳಿ ಕೆರೆ ಕಟ್ಟೆಗೆ ಭೇಟಿ ನೀಡಿ ಪರಿಶೀಲಿಸಿದ ಕೇಂದ್ರ ಸಚಿವ ಹೆಚ್.ಡಿ.ಕುಮಾರಸ್ವಾಮಿ
ಮಂಡ್ಯ: ನಾಗಮಂಗಲ ತಾಲೂಕಿನ ಮಲ್ಲೇಗೌಡನಹಳ್ಳಿ ಕೆರೆ ಕಟ್ಟೆಗೆ ಇಂದು ಭೇಟಿ ನೀಡಿದ ಕೇಂದ್ರ ಉಕ್ಕು ಮತ್ತು ಭಾರೀ ಕೈಗಾರಿಕೆಗಳ ಸಚಿವ ಹೆಚ್.ಡಿ.ಕುಮಾರಸ್ವಾಮಿ ಅವರು ಅಲ್ಲಿ ಪರಿಶೀಲನೆ ನಡೆಸಿದರು.
ಕೆರೆ ಏರಿ ಒಡೆದ ಪರಿಣಾಮ ಅಪಾರ ಪ್ರಮಾಣದಲ್ಲಿ ರೈತರ ಬೆಳೆ ನಾಶವಾಗಿದೆ. ನೊಂದ ರೈತರಿಗೆ ಧೈರ್ಯ ಹೇಳಿ, ಪರಿಹಾರ ಕೊಡಿಸುವ ಬಗ್ಗೆ ಮಂಡ್ಯ ಜಿಲ್ಲಾಧಿಕಾರಿಗಳೊಂದಿಗೆ ಚರ್ಚಿಸಿದ್ದೇನೆ ಎಂದು ಹೇಳಿದರು.
ಈ ಸಂದರ್ಭದಲ್ಲಿ, ಮಾಜಿ ಸಚಿವ ಸಾರಾ ಮಹೇಶ್, ಶಾಸಕ ಸುರೇಶ್ ಗೌಡ, ವಿಧಾನ ಪರಿಷತ್ ಸದಸ್ಯ ಮಂಜೇಗೌಡ ಹಾಗೂ ಇನ್ನಿತರೆ ನಾಯಕರೊಂದಿಗೆ ನೂರಾರು ಗ್ರಾಮಸ್ಥರು ಉಪಸ್ಥಿತರಿದ್ದರು.