Waqf: ಮುಂದಿನ ಅಧಿವೇಶನದಲ್ಲಿ ವಕ್ಫ್ ತಿದ್ದುಪಡಿ ಮಸೂದೆ ಮಂಡನೆ: ಅಮಿತ್ ಶಾ ಭರವಸೆ!
ಗುರ್ಗಾನ್: ಮುಂಬರುವ ಸಂಸತ್ತಿನ ಅಧಿವೇಶನದಲ್ಲಿ ವಕ್ಫ್ ಮಸೂದೆಯನ್ನು ಮಂಡಿಸಲಾಗುವುದು ಎಂದು ಕೇಂದ್ರ ಗೃಹ ಸಚಿವ ಅಮಿತ್ ಶಾ ಭರವಸೆ ನೀಡಿದ್ದಾರೆ.
ಹರಿಯಾಣದ ಗುರ್ಗಾನ್ನ (Gurgaon) ಬಾದಶಾಪುರದಲ್ಲಿ ಚುನಾವಣಾ ಪ್ರಚಾರ ಸಭೆಯಲ್ಲಿ ಭಾಗವಹಿಸಿ ಮಾತನಾಡಿದ ಕೇಂದ್ರ ಗೃಹ ಸಚಿವ ಅಮಿತ್ ಶಾ, “ವಕ್ಫ್ ತಿದ್ದುಪಡಿ ಮಸೂದೆ (Waqf Amendment Bill 2024) ಮುಂಬರುವ ಸಂಸತ್ತಿನ ಚಳಿಗಾಲದ ಅಧಿವೇಶನದಲ್ಲಿ ಮಸೂದೆಯನ್ನು ಮಂಡಿಸಲಿದ್ದೇವೆ. ಇದರೊಂದಿಗೆ ಮಂಡಳಿಯ ಕೋರಿಕೆಯಂತೆ ಹಣ ವಿತರಣೆಗೂ ಅನುಮತಿ ನೀಡಲಾಗಿದೆ.
ಈ ಮಸೂದೆಗೆ ಸಂಬಂಧಿಸಿದಂತೆ ವಕ್ಫ್ ಮಂಡಳಿಯ ಪ್ರತಿನಿಧಿಗಳು ಮಾಡಿರುವ ಆರೋಪಗಳನ್ನು ಒಪ್ಪಲು ಸಾಧ್ಯವಿಲ್ಲ. ಪರಿಶೀಲನಾ ಸಮಿತಿಯ ಅಧ್ಯಕ್ಷರಾಗಿರುವ ಬಿಜೆಪಿಯ ಜಗದಾಂಬಿಕಾ ಪಾಲ್ ಅವರು ಮಸೂದೆಯ ಸಂಪೂರ್ಣ ವಿವರಗಳನ್ನು ಅಧ್ಯಯನ ಮಾಡುತ್ತಿದ್ದಾರೆ” ಎಂದು ಹೇಳಿದ್ದಾರೆ.