ಕೆಎಂಡಿಸಿ ಭವನದಲ್ಲಿ ಕಾರ್ಯನಿರ್ವಹಿಸಲಿರುವ ಕರ್ನಾಟಕ ಕ್ರಿಶ್ಚಿಯನ್ ಅಭಿವೃದ್ಧಿ ನಿಗಮ! » Dynamic Leader
December 12, 2024
ರಾಜ್ಯ

ಕೆಎಂಡಿಸಿ ಭವನದಲ್ಲಿ ಕಾರ್ಯನಿರ್ವಹಿಸಲಿರುವ ಕರ್ನಾಟಕ ಕ್ರಿಶ್ಚಿಯನ್ ಅಭಿವೃದ್ಧಿ ನಿಗಮ!

ಬೆಂಗಳೂರು: ರಾಜ್ಯದಲ್ಲಿನ ಕ್ರಿಶ್ಚಿಯನ್ ಸಮುದಾಯ ಬಹುದಿನಗಳ ಬೇಡಿಕೆಯಾದ ಕರ್ನಾಟಕ ಕ್ರಿಶ್ಚಿಯನ್ ಅಭಿವೃದ್ಧಿ ನಿಗಮದ ಬೇಡಿಕೆಗೆ ಸ್ಪಂದಿಸಿದ ಸರ್ಕಾರ ಕಳೆದ ಫೆಬ್ರವರಿಯಲ್ಲೇ ಅದಕ್ಕಾದ ಆದೇಶವನ್ನು ಹೊರಡಿಸಿತ್ತು. ಆ ಆದೇಶದಲ್ಲಿ Memorandum of Association ಮತ್ತು Articles of Association ಗಳಿಗೆ ಸರ್ಕಾರ ಅನುಮೋದನೆ ನೀಡಿತ್ತು.

ಸದರಿ ನಿಗಮವನ್ನು ಕಂಪೆನಿ ಕಾಯ್ದೆಯಡಿಯಲ್ಲಿ ನೋಂದಣಿ ಮಾಡಲು ನಿಗಮದ ಕಛೇರಿಯ ಸಂಪೂರ್ಣ ವಿಳಾಸ, ವಿದ್ಯುತ್ / ಟೆಲಿಫೋನ್ ಬಿಲ್ ಮತ್ತು ಮಾಲೀಕತ್ವದ ಪುರಾವೆಗೆ ಸಂಬಂಧಿಸಿದ ದಾಖಲೆಗಳು ಅಗತ್ಯವಾಗಿತ್ತು. ಕರ್ನಾಟಕ ಕ್ರಿಶ್ಚಿಯನ್ ಅಭಿವೃದ್ಧಿ ನಿಗಮದ ಕೇಂದ್ರ ಕಛೇರಿಗೆ ಕೆ.ಎಂ.ಡಿ.ಸಿ ಭವನ, ಶೇಷಾದ್ರಿಪುರಂ, ಬೆಂಗಳೂರು ಇಲ್ಲಿ ಸ್ಥಳಾವಕಾಶವನ್ನು ನಿಗದಿಪಡಿಸಿ ಸೂಕ್ತ ಸರ್ಕಾರಿ ಆದೇಶ ಹೊರಡಿಸುವಂತೆ ಅಲ್ಪಸಂಖ್ಯಾತರ ನಿರ್ದೇಶನಾಲಯದ ನಿರ್ದೇಶಕರು ಪ್ರಸ್ತಾವನೆಯನ್ನು ಸಲ್ಲಿಸಿದ್ದರು.

ಈ ಹಿನ್ನೆಲೆಯಲ್ಲಿ, ಪ್ರಸ್ತಾವನೆಯಲ್ಲಿ ವಿವರಿಸಿರುವ ಅಂಶಗಳ ಹಿನ್ನೆಲೆಯಲ್ಲಿ ಕರ್ನಾಟಕ ಕ್ರಿಶ್ಚಿಯನ್ ಅಭಿವೃದ್ಧಿ ನಿಗಮ ನಿಯಮಿತದ ಕಛೇರಿಗೆ ಕೆ.ಎಂ.ಡಿ.ಸಿ ಭವನ, ಶೇಷಾದ್ರಿಪುರಂ, ಬೆಂಗಳೂರು ಈ ಕಟ್ಟಡದ ಮೊದಲನೇ ಮಹಡಿಯಲ್ಲಿ ಅರ್ಧ ಭಾಗವನ್ನು ಹಂಚಿಕೆ ಮಾಡಿ ಸರ್ಕಾರ ಆದೇಶ ಹೊರಡಿಸಿದೆ. ಇದಕ್ಕೆ ಕ್ರಿಶ್ಚಿಯನ್ ಸಮುದಾಯದವರು ಸಂತಸ ವ್ಯಕ್ತಪಡಿಸಿದ್ದಾರೆ.

Related Posts