ಮಸೀದಿ ಪರಿಶೀಲನೆಗೆ ತೆರಳಿದ್ದ ಅಧಿಕಾರಿಗಳ ಮೇಲೆ ದಾಳಿ.. ಪೊಲೀಸರ ಗೋಲಿಬಾರ್: ಯುಪಿಯಲ್ಲಿ ಉದ್ವಿಗ್ನತೆ! » Dynamic Leader
December 12, 2024
ದೇಶ

ಮಸೀದಿ ಪರಿಶೀಲನೆಗೆ ತೆರಳಿದ್ದ ಅಧಿಕಾರಿಗಳ ಮೇಲೆ ದಾಳಿ.. ಪೊಲೀಸರ ಗೋಲಿಬಾರ್: ಯುಪಿಯಲ್ಲಿ ಉದ್ವಿಗ್ನತೆ!

ಲಕ್ನೋ: ಉತ್ತರ ಪ್ರದೇಶದ ಸಂಬಾಲ್ ಪ್ರದೇಶದಲ್ಲಿ ಶಾಜಿ ಜಮಾ ಮಸೀದಿ ಇದೆ. ಮೊಘಲರ ಆಳ್ವಿಕೆಯಲ್ಲಿ ಹಿಂದೂ ದೇವಾಲಯವನ್ನು ಕೆಡವಿ ಈ ಮಸೀದಿಯನ್ನು ನಿರ್ಮಿಸಲಾಗಿದೆ ಎಂದು ನ್ಯಾಯಾಲಯದಲ್ಲಿ ಪ್ರಕರಣ ದಾಖಲಾಗಿದೆ. ನ್ಯಾಯಾಲಯದ ಆದೇಶದಂತೆ ಮಸೀದಿ ಪರಿಶೀಲನೆಗೆ ಅಧಿಕಾರಿಗಳ ತಂಡ ರಚಿಸಲಾಗಿತ್ತು.

ನ್ಯಾಯಾಲಯದ ಆದೇಶದ ಪ್ರಕಾರ ತಂಡ ಇಂದು ಬೆಳಗ್ಗೆ ಮಸೀದಿಯ ಪರಿಶೀಲನೆಗೆ ತೆರಳಿತ್ತು. ಪೊಲೀಸರೂ ಭದ್ರತೆಗೆ ತೆರಳಿದ್ದರು. ಆ ವೇಳೆ ನೂರಾರು ಜನರು ಮಸೀದಿ ಬಳಿ ಜಮಾಯಿಸಿ ಮಸೀದಿ ಪರಿಶೀಲನೆ ವಿರೋಧಿಸಿ ಪ್ರತಿಭಟನೆ ನಡೆಸಿದರು. ಅವರನ್ನು ಚದುರಿಸಲು ಪೊಲೀಸ್ ಅಧಿಕಾರಿಗಳು ಆದೇಶಿಸಿದರು. ಆದರೆ ಘೋಷಣೆ ಮುಂದುವರಿಸಿದ ಪ್ರತಿಭಟನಾಕಾರರು ಹಿಂಸಾಚಾರಕ್ಕೆ ಮುಂದಾದರು. ಅಧಿಕಾರಿಗಳ ಮೇಲೆ ಕಲ್ಲು ತೂರಾಟ ನಡೆಸಿದರು. ವಾಹನಗಳಿಗೂ ಬೆಂಕಿ ಹಚ್ಚಲಾಗಿದೆ. ಇದು ಉದ್ವಿಗ್ನತೆಯನ್ನು ಸೃಷ್ಟಿಸಿತ್ತು.

ಪೊಲೀಸರು ಅಶ್ರುವಾಯು ಶೆಲ್‌ಗಳನ್ನು ಪ್ರಯೋಗಿಸಿ ಪ್ರತಿಭಟನಾಕಾರರನ್ನು ಚದುರಿಸಿದರು. ಆ ನಂತರ ಪರಿಸ್ಥಿತಿ ಹತೋಟಿಗೆ ಬಂದಿದೆ. ಅಧಿಕಾರಿಗಳು ಮಸೀದಿಯೊಳಗೆ ತೆರಳಿ ಪರಿಶೀಲನೆ ನಡೆಸಿದರು.

ಕಳೆದ ಕೆಲವು ದಿನಗಳಿಂದ ಈ ಪ್ರದೇಶದಲ್ಲಿ ಉದ್ವಿಗ್ನ ಪರಿಸ್ಥಿತಿ ಇದೆ. ಹೀಗಾಗಿ ಹಿಂಸಾತ್ಮಕ ಘಟನೆಗಳು ನಡೆಯದಂತೆ ಪೊಲೀಸ್ ಬಂದೋಬಸ್ತ್ ಮಾಡಲಾಗಿದೆ. 5ಕ್ಕಿಂತ ಹೆಚ್ಚು ಜನ ಸೇರುವುದನ್ನು ನಿಷೇಧಿಸಲಾಗಿದೆ. ಇಂದು ನಿಷೇಧಾಜ್ಞೆ ಉಲ್ಲಂಘಿಸಿ ಹಿಂಸಾತ್ಮಕ ಪ್ರತಿಭಟನೆಯಲ್ಲಿ ತೊಡಗಿದ್ದಾರೆ.

ಕಳೆದ 19 ರಂದು ಕೂಡ ಬಿಗಿ ಭದ್ರತೆಯೊಂದಿಗೆ ಮಸೀದಿ ಪರಿಶೀಲನೆ ನಡೆಸಲಾಯಿತು. ಆ ಸಮಯಾಲ್ಲಿ ಮಸೀದಿ ಆಡಳಿತ ಸಮಿತಿಯ ಸದಸ್ಯರು ಉಪಸ್ಥಿತರಿದ್ದರು ಎಂಬುದು ಗಮನಾರ್ಹ.

Related Posts