ಕ್ರೈಂ ರಿಪೋರ್ಟ್ಸ್ Archives » Dynamic Leader
January 21, 2025
Home Archive by category ಕ್ರೈಂ ರಿಪೋರ್ಟ್ಸ್

ಕ್ರೈಂ ರಿಪೋರ್ಟ್ಸ್

ಕ್ರೈಂ ರಿಪೋರ್ಟ್ಸ್

 ಪ್ರತಿಭನ್ ಡಿಸಿ

ನವದೆಹಲಿ: ಅಂತರಾಷ್ಟ್ರೀಯ ಅಪರಾಧ ತನಿಖಾ ಸಂಸ್ಥೆ ‘ಇಂಟರ್‌ಪೋಲ್‌’ನಂತೆಯೇ ಭಾರತದಲ್ಲಿ ‘ಭಾರತ್‌ಪೋಲ್’ ಅನ್ನು ರಚಿಸಲಾಗಿದೆ ಎಂದು ಕೇಂದ್ರ ಗೃಹ ಸಚಿವ ಅಮಿತ್ ಶಾ ಹೇಳಿದ್ದಾರೆ.

ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರು ದೆಹಲಿಯ ಭಾರತ್ ಮಂಟಪದಲ್ಲಿ ಕೇಂದ್ರೀಯ ತನಿಖಾ ದಳ (ಸಿಬಿಐ) ಅಭಿವೃದ್ಧಿಪಡಿಸಿರುವ ‘ಭಾರತ್‌ಪೋಲ್’ ವೆಬ್‌ಸೈಟ್‌ಗೆ ಇಂದು ಚಾಲನೆ ನೀಡಿದರು. ಭಾರತದಲ್ಲಿ ಅಂತರಾಷ್ಟ್ರೀಯ ಪೊಲೀಸ್ ಇಲಾಖೆಯ ಬ್ಯೂರೋ ಆಗಿರುವ ಸಿಬಿಐ ಸಂಸ್ಥೆ, ಕಾನೂನು ಜಾರಿ ಸಂಸ್ಥೆಗಳು ಸೇರಿದಂತೆ ದೇಶಾದ್ಯಂತ ವಿವಿಧ ತನಿಖಾ ಸಂಸ್ಥೆಗಳೊಂದಿಗೆ ಸೇರಿ ಅಪರಾಧ ಸಂಬಂಧಿತ ವಿಷಯಗಳ ಕುರಿತು ಅಂತರರಾಷ್ಟ್ರೀಯ ಗುಪ್ತಚರ ಸಂಸ್ಥೆಗಳೊಂದಿಗೆ ಸಹಕರಿಸಲು ವೆಬ್‌ಸೈಟ್ ಅನ್ನು ಅಭಿವೃದ್ಧಿಪಡಿಸಿದೆ.

ಈ ಕುರಿತು ಮಾತನಾಡಿದ ಕೇಂದ್ರ ಗೃಹ ಸಚಿವ ಅಮಿತ್ ಶಾ, ” ಅಂತರರಾಷ್ಟ್ರೀಯ ಅಪರಾಧ ತನಿಖಾ ಸಂಸ್ಥೆಯಾದ ‘ಇಂಟರ್‌ಪೋಲ್‌’ನಂತೆಯೇ ಭಾರತದಲ್ಲಿ ‘ಭಾರತ್‌ಪೋಲ್’ಅನ್ನು ರಚಿಸಲಾಗಿದೆ. ಸಿಬಿಐ ಸಂಸ್ಥೆಯ ಅಡಿಯಲ್ಲಿ ಕೆಲಸ ಮಾಡುವ ಸಂಸ್ಥೆಯು ಅಂತರಾಷ್ಟ್ರೀಯ ತನಿಖಾ ಸಂಸ್ಥೆಗಳಿಗೆ ಸಹಾಯ ಮಾಡುತ್ತದೆ. ವಿದೇಶಕ್ಕೆ ಪರಾರಿಯಾಗುವ ಅಪರಾಧಿಗಳನ್ನು ಹಿಡಿಯಲು ‘ಭಾರತ್‌ಪೋಲ್’ ಸಂಸ್ಥೆ ನೆರವಾಗಲಿದೆ.

ಅಂತರರಾಷ್ಟ್ರೀಯ ಪೋಲೀಸ್ ಸಹಾಯವನ್ನು ತ್ವರಿತವಾಗಿ ಸಂಪರ್ಕಿಸಬಹುದು. ಸಿಬಿಐ ಸಂಸ್ಥೆಯಿಂದ ಅಭಿವೃದ್ಧಿಪಡಿಸಿರುವ ‘ಭಾರತ್‌ಪೋಲ್’ ಪೋರ್ಟಲ್ ನಮ್ಮ ತನಿಖಾ ಸಂಸ್ಥೆಗಳ ಜಾಗತಿಕ ವ್ಯಾಪ್ತಿಯನ್ನು ಹೆಚ್ಚಿಸುತ್ತದೆ ಮತ್ತು ಎಲ್ಲರಿಗೂ ‘ಸುರಕ್ಷಿತ ಭಾರತ’ ಎಂಬ ಸರ್ಕಾರದ ದೃಷ್ಟಿಯನ್ನು ಪೂರೈಸುತ್ತದೆ.

ಇಂದು ಮಹತ್ವದ ದಿನವಾಗಿದೆ. ‘ಭಾರತ್‌ಪೋಲ್’ ನಮ್ಮ ದೇಶದ ಅಂತಾರಾಷ್ಟ್ರೀಯ ತನಿಖೆಗಳನ್ನು ಹೊಸ ಯುಗಕ್ಕೆ ಕೊಂಡೊಯ್ಯಲಿದೆ. ಇದರಿಂದ ಅಪರಾಧವನ್ನು ಪರಿಣಾಮಕಾರಿಯಾಗಿ ನಿಯಂತ್ರಿಸಬಹುದು” ಎಂದು ಅಮಿತ್ ಶಾ ಹೇಳಿದರು.

ಕ್ರೈಂ ರಿಪೋರ್ಟ್ಸ್

ಬೆಂಗಳೂರು: ದೂರು ನೀಡಲು ಬಂದ ಮಹಿಳೆಯನ್ನು ತನ್ನ ಕಾಮತೃಷೆಗೆ ಬಳಸಿಕೊಂಡಿದ್ದ ತುಮಕೂರು ಜಿಲ್ಲೆ ಮಧುಗಿರಿ ಉಪ ವಿಭಾಗದ ಡಿವೈಎಸ್‌ಪಿ ರಾಮಚಂದ್ರಪ್ಪನನ್ನು ಸೇವೆಯಿಂದ ಅಮಾನತ್ತು ಗೊಳಿಸಲಾಗಿತ್ತು. ಇದೀಗ ಅವರನ್ನು ಪೊಲೀಸರು ಬಂಧಿಸಿದ್ದಾರೆ.

ಜಮೀನು ವಿವಾದಕ್ಕೆ ಸಂಬಂಧಿಸಿದಂತೆ ದೂರು ನೀಡಲು ಬಂದ ಮಹಿಳೆಯೊಂದಿಗೆ ರಾಸಲೀಲೆ ನಡೆಸಿರುವ ವಿಡಿಯೋ ವೈರಲ್ ಆಗುತ್ತಿದ್ದಂತೆಯೇ ರಾಮಚಂದ್ರಪ್ಪ ಅವರನ್ನು ಅಮಾನತು ಮಾಡಿ ಪೊಲೀಸ್ ಮಹಾ ನಿರ್ದೇಶಕ ಅಲೋಕ್ ಮೋಹನ್ ಅವರು ಆದೇಶ ಹೊರಡಿಸಿದ್ದರು. ಇದರ ಬೆನ್ನಲ್ಲೇ ಇದೀಗ ಡಿವೈಎಸ್‌ಪಿ ರಾಮಚಂದ್ರಪ್ಪನನ್ನು ಪೊಲೀಸರು ಬಂಧಿಸಿದ್ದಾರೆ.

ಮಹಿಳೆ ನೀಡಿದ ದೂರಿನ ಮೇರೆಗೆ ಮಧುಗಿರಿ ಪೊಲೀಸ್ ಠಾಣೆಯಲ್ಲಿ ಸೆಕ್ಸನ್ 68, 75, 79 ಅತ್ಯಾಚಾರ ಪ್ರಕರಣ ದಾಖಲಾಗಿದ್ದು, ಮಧುಗಿರಿ ಉಪವಿಭಾಗ ಡಿವೈಎಸ್ ಪಿ ರಾಮಚಂದ್ರಪ್ಪ ಅವರನ್ನು ಬಂಧಿಸಲಾಗಿದೆ.

ಜಮೀನು ವ್ಯಾಜ್ಯದ ಬಗ್ಗೆ ಪಾವಗಡ ಮೂಲದ ಮಹಿಳೆಯೊಬ್ಬರು ದೂರು ನೀಡಿದ್ದರು. ಈ ಸಂಬಂಧ ವಿಚಾರಿಸುವ ಸಲುವಾಗಿ ಮಹಿಳೆಯನ್ನು ಪೊಲೀಸ್ ಠಾಣೆಗೆ ಕರೆಯಿಸಿದ ರಾಮಚಂದ್ರಪ್ಪ, ಆಕೆಯನ್ನು ತನ್ನ ಕಚೇರಿಯ ಶೌಚಾಲಯದ ಬಳಿ ಕರೆದುಕೊಂಡು ಹೋಗಿ ಕಾಮತೃಷೆಗೆ ಬಳಸಿಕೊಂಡಿದ್ದರು.

ವ್ಯಕ್ತಿಯೊಬ್ಬರು ಇದನ್ನು ಮೊಬೈಲ್ ನಲ್ಲಿ ಸೆರೆ ಹಿಡಿದಿದ್ದು, ವಿಡಿಯೋ ಸಾಮಾಜಿಕ ಜಾಲತಾಣದಲ್ಲಿ ವೈರಲ್ ಮಾಡಿದ್ದರು. ಗೃಹ ಸಚಿವರ ತವರು ಜಿಲ್ಲೆಯಲ್ಲಿಯೇ ನಡೆದ ಈ ಘಟನೆ ಸರ್ಕಾರಕ್ಕೆ ಮುಜುಗರವನ್ನು ಉಂಟು ಮಾಡಿದೆ.

ಕ್ರೈಂ ರಿಪೋರ್ಟ್ಸ್

 ಪ್ರತಿಭನ್ ಡಿಸಿ

ಬೆಂಗಳೂರು: ರಾತ್ರಿ ಮನೆ ಕನ್ನ ಕಳವು ಮಾಡುತಿದ್ದ ಮೂವರು ಬಂಧನ. 180 ಗ್ರಾಂ ಚಿನ್ನಾಭರಣ, 4 ಕೆ.ಜಿ. 800 ಗ್ರಾಂ ಬೆಳ್ಳಿ ವಸ್ತುಗಳು ಹಾಗೂ 1 ದ್ವಿ ಚಕ್ರ ವಾಹನ ವಶ. ಇದರ ಒಟ್ಟು ಮೌಲ್ಯ ರೂ.18 ಲಕ್ಷ ರೂ.ಗಳು ಎಂದು ಪೊಲೀಸ್ ಪ್ರಕಟಣೆಯಲ್ಲಿ ತಿಳಿಸಲಾಗಿದೆ.

ಬಾಣಸವಾಡಿ ಪೊಲೀಸ್ ಠಾಣಾ ಸರಹದ್ದಿನ ಸಂಪನ್ನ ಲೇಔಟ್, ಕಮ್ಮನಹಳ್ಳಿ ಮುಖ್ಯ ರಸ್ತೆಯಲ್ಲಿರುವ ಬಾಡಿಗೆ ಮನೆಯೊಂದರಲ್ಲಿ ವಾಸವಿದ್ದ ಪಿರ‍್ಯಾದುದಾರರು ನವೆಂಬರ್ 3 ರಂದು ಬಾಣಸವಾಡಿ ಪೊಲೀಸ್ ಠಾಣೆಯಲ್ಲಿ ದೂರನ್ನು ಸಲ್ಲಿಸಿರುತ್ತಾರೆ. ದೂರಿನಲ್ಲಿ ಪಿರ‍್ಯಾದುದಾರರು ಅಕ್ಟೋಬರ್ 30 ರಂದು ತಮ್ಮ ಸ್ವಂತ ಊರಾದ ವೆಲ್ಲೂರಿಗೆ ಹೋಗಿರುತ್ತಾರೆ. ನವೆಂಬರ್ 2 ರಂದು ರಾತ್ರಿ ಮನೆಯ ಮಾಲೀಕರು ಪಿರ‍್ಯಾದುದಾರರಿಗೆ ಕರೆಮಾಡಿ, ಮನೆಯ ಬಾಗಿಲು ಮುರಿದಿರುವುದಾಗಿ ತಿಳಿಸಿದ್ದು, ಪಿರ‍್ಯಾದುದಾರರು ದಿನಾಂಕ: ನವೆಂಬರ್ 3 ರಂದು ಬೆಳಗಿನ ಜಾವ ಮನೆಯ ಬಳಿ ಬಂದು ನೋಡಲಾಗಿ, ಯಾರೋ ಅಪರಿಚಿತ ಕಳ್ಳರು ಮನೆಯ ಬಾಗಿಲನ್ನು ಮುರಿದು, ಕೊಠಡಿಯಲ್ಲಿದ್ದ ಬೀರುವಿನ ಲಾಕರನ್ನು ಒಡೆದು, ಲಾಕರ್‌ನಲ್ಲಿಟ್ಟಿದ್ದ 108 ಗ್ರಾಂ ಚಿನ್ನಾಭರಣಗಳು, 300 ಗ್ರಾಂ ಬಿಳ್ಳಿಯ ವಸ್ತುಗಳು ಮತ್ತು ರೂ.15 ಸಾವಿರ ನಗದನ್ನು ಕಳ್ಳತನ ಮಾಡಿಕೊಂಡು ಹೋಗಿರುವುದಾಗಿ ದೂರಿನಲ್ಲಿ ತಿಳಿಸಿರುತ್ತಾರೆ. ಈ ಕುರಿತು ಬಾಣಸವಾಡಿ ಪೊಲೀಸ್ ಠಾಣೆಯಲ್ಲಿ ಮನೆ ಕನ್ನ ಕಳವು ಪ್ರಕರಣ ದಾಖಲಾಗಿರುತ್ತದೆ.

ಪ್ರಕರಣದ ತನಿಖೆಯನ್ನು ಮುಂದುವರೆಸಿದ ಪೊಲೀಸರು, ವಿವಿಧ ಆಯಾಮಗಳಲ್ಲಿ ತನಿಖೆಯನ್ನು ಕೈಗೊಂಡಿರುತ್ತಾರೆ. ನವೆಂಬರ್ 24 ರಂದು ಬಾಣಸವಾಡಿ ಪೊಲೀಸರು ಠಾಣಾ ಸರಹದ್ದಿನಲ್ಲಿ ಗಸ್ತಿನಲ್ಲಿದ್ದಾಗ, ನಂಬರ್ ಪ್ಲೇಟ್ ಇಲ್ಲದ 1 ದ್ವಿ ಚಕ್ರವಾಹನದಲ್ಲಿ ಮೂವರು ವ್ಯಕ್ತಿಗಳು ಬರುತ್ತಿದ್ದು, ಅನುಮಾನಾಸ್ಪದವಾಗಿ ಕಂಡುಬಂದಿದ್ದು, ಅವರುಗಳನ್ನು ತಡೆದು ವಿಚಾರಣೆ ಮಾಡಲಾಗಿ ದ್ವಿ ಚಕ್ರ ವಾಹನವನ್ನು ಕಳವು ಮಾಡಿರುವುದಾಗಿ ಹಾಗೂ ಬಾಣಸವಾಡಿಯ ಪೊಲೀಸ್ ಠಾಣಾ ಸರಹದ್ದಿನ ಹಲವಾರು ಕಡೆಗಳಲ್ಲಿ ಮನೆ ಕನ್ನ ಕಳವು ಹಾಗೂ ಈ ಪ್ರಕರಣದಲ್ಲಿ ಚಿನ್ನಾಭರಣ ಮತ್ತು ಬೆಳ್ಳಿಯ ವಸ್ತುಗಳನ್ನು ಕಳವು ಮಾಡಿರುವುದಾಗಿ ತಪ್ಪೊಪ್ಪಿಕೊಂಡಿರುತ್ತಾರೆ. ಮೂವರು ಆರೋಪಿಗಳನ್ನು 1 ದ್ವಿ ಚಕ್ರ ವಾಹನ ಸಮೇತ ವಶಕ್ಕೆ ಪಡೆದುಕೊಳ್ಳಲಾಗಿರುತ್ತದೆ.

ನವೆಂಬರ 25 ರಂದು ವಶಕ್ಕೆ ಪಡೆದ ಮೂವರು ಆರೋಪಿಗಳನ್ನು ಮಾನ್ಯ ನ್ಯಾಯಾಲಯಕ್ಕೆ ಹಾಜರುಪಡಿಸಿ, 10 ದಿನಗಳ ಕಾಲ ಪೊಲೀಸ್ ಕಸ್ಟಡಿಗೆ ಪಡೆದುಕೊಳ್ಳಲಾಗಿರುತ್ತದೆ.

ಪೊಲೀಸ್ ಕಸ್ಟಡಿಗೆ ಪಡೆದ ಆರೋಪಿಗಳನ್ನು ಸುಧೀರ್ಘವಾಗಿ ವಿಚಾರಣೆ ಮಾಡಲಾಗಿ ಪ್ರಕರಣದಲ್ಲಿ ಕಳವು ಮಾಡಿದ್ದ ಚಿನ್ನಾಭರಣ ಮತ್ತು ಬೆಳ್ಳಿಯ ವಸ್ತುಗಳನ್ನು ಚಿಕ್ಕಪೇಟೆ ಪೊಲೀಸ್ ಠಾಣಾ ಸರಹದ್ದಿನಲ್ಲಿರುವ ಚಿನ್ನಾಭರಣ ಮತ್ತು ಬೆಳ್ಳಿಯ ವಸ್ತುಗಳನ್ನು ತಯಾರಿಸುವ ಮತ್ತು ಪಾಲೀಸ್ ಮಾಡುವ ಅಂಗಡಿಯೊಂದರಲ್ಲಿ ಮಾರಾಟ ಮಾಡಿರುವುದಾಗಿ ತಿಳಿಸಿದ ಮೇರೆಗೆ ನವೆಂಬರ 25 ರಂದು ಚಿನ್ನಾಭರಣ ಮತ್ತು ಬೆಳ್ಳಿಯ ವಸ್ತುಗಳನ್ನು ಸ್ವೀಕರಿಸಿದ್ದ ವ್ಯಕ್ತಿಗೆ ನೋಟೀಸ್ ಜಾರಿಮಾಡಿದ್ದು, ಆ ವ್ಯಕ್ತಿಯು ನವೆಂಬರ 26 ರಂದು 180 ಗ್ರಾಂ ಚಿನ್ನಾಭರಣ ಮತ್ತು 4 ಕೆಜಿ 800 ಗ್ರಾಂ ಬೆಳ್ಳಿಯ ವಸ್ತುಗಳನ್ನು ಠಾಣೆಗೆ ತಂದು ಹಾಜರು ಪಡಿಸಿದ್ದನ್ನು ವಶಪಡಿಸಿಕೊಳ್ಳಲಾಗಿರುತ್ತದೆ.

ಒಟ್ಟಾರೆ ಈ ಪ್ರಕರಣದ ಆರೋಪಿಗಳ ವಶದಿಂದ 180 ಗ್ರಾಂ ಚಿನ್ನಾಭರಣ ಮತ್ತು 4 ಕೆಜಿ 800 ಗ್ರಾಂ ಬೆಳ್ಳಿಯ ವಸ್ತುಗಳು ಹಾಗೂ 1 ದ್ವಿ-ಚಕ್ರ ವಾಹನವನ್ನು ವಶಪಡಿಸಿಕೊಳ್ಳಲಾಗಿರುತ್ತದೆ. ಇದರ ಒಟ್ಟು ಮೌಲ್ಯ 18 ಲಕ್ಷ ರೂಪಾಯಿಗಳು.

ಈ ಪ್ರಕರಣದ ಆರೋಪಿಗಳ ಬಂಧನದಿಂದ ಬಾಣಸವಾಡಿ ಪೊಲೀಸ್ ಠಾಣೆಯ 9 ಮನೆ ಕಳವು ಪ್ರಕರಣಗಳು, ರಾಮಮೂರ್ತಿ ನಗರ ಪೊಲೀಸ್ ಠಾಣೆಯ 1 ಮನೆ ಕಳವು ಪ್ರಕರಣ ಮತ್ತು 1 ದ್ವಿ-ಚಕ್ರವಾಹನ ಕಳವು ಪ್ರಕರಣ ಸೇರಿದಂತೆ ಒಟ್ಟು 11 ಪ್ರಕರಣ ಪತ್ತೆಯಾಗಿರುತ್ತವೆ.

ಈ ಪ್ರಕರಣದ ಮೂವರು ಆರೋಪಿಗಳ ಪೈಕಿ ಇಬ್ಬರು ಆರೋಪಿಗಳು ಬೆಂಗಳೂರು, ಕೋಲಾರ ಜಿಲ್ಲೆಯ ಕೆ.ಜಿ.ಎಫ್ ಮತ್ತು ಬಂಗಾರಪೇಟೆ ಪೊಲೀಸ್ ಠಾಣೆಯಲ್ಲಿ ಘೋರ ಅಪರಾಧ ಪ್ರಕರಣಗಳಲ್ಲಿ ಭಾಗಿಯಾಗಿರುವುದು ಕಂಡುಬಂದಿರುತ್ತದೆ. ಡಿಸೆಂಬರ್ 4 ರಂದು ಮೂವರು ಆರೋಪಿಗಳನ್ನು ಮಾನ್ಯ ನ್ಯಾಯಾಲಯಕ್ಕೆ ಹಾಜರುಪಡಿಸಿದ್ದು, ಮಾನ್ಯ ನ್ಯಾಯಾಲವು ಮೂವರು ಆರೋಪಿಗಳನ್ನು ನ್ಯಾಯಾಂಗ ಬಂಧನಕ್ಕೆ ಒಳಪಡಿಸಿರುತ್ತದೆ.

ಈ ಕಾರ್ಯಾಚರಣೆಯನ್ನು ಪೂರ್ವ ವಿಭಾಗದ ಉಪ-ಪೊಲೀಸ್ ಕಮೀಷನರ್ ಡಿ.ದೇವರಾಜ್ ಐಪಿಎಸ್ ರವರ ಮಾರ್ಗದರ್ಶನದಲ್ಲಿ ಬಾಣಸವಾಡಿ ಉಪ ವಿಭಾಗದ ಸಹಾಯಕ ಪೊಲೀಸ್ ಕಮೀಷನರ್ ಉಮಾಶಂಕರ್.ಎಂ.ಹೆಚ್. ರವರ ನೇತೃತ್ವದಲ್ಲಿ ಬಾಣಸವಾಡಿ ಪೊಲೀಸ್ ಠಾಣೆಯ ಪೊಲೀಸ್ ಇನ್ಸ್​ಪೆಕ್ಟರ್ ಅರುಣ್ ಸಾಳುಂಕೆ ರವರ ಉಸ್ತುವಾರಿಯಲ್ಲಿ ಅಧಿಕಾರಿ / ಸಿಬ್ಬಂದಿಯವರುಗಳು ಈ ಪ್ರಕರಣವನ್ನು ಬೇಧಿಸುವಲ್ಲಿ ಯಶಸ್ವಿಯಾಗಿರುತ್ತಾರೆ.

ಕ್ರೈಂ ರಿಪೋರ್ಟ್ಸ್ ದೇಶ

ನವದೆಹಲಿ: ‘ಡಿಜಿಟಲ್ ಅರೆಸ್ಟ್’ಗಳ ಮೂಲಕ ಜನರನ್ನು ವಂಚಿಸುವ ಸೈಬರ್ ಅಪರಾಧಿಗಳ ಬಗ್ಗೆ ಪ್ರಧಾನಿ ನರೇಂದ್ರ ಮೋದಿ ಅವರು ಭಾನುವಾರ ಸಾರ್ವಜನಿಕರಿಗೆ ಎಚ್ಚರಿಕೆ ನೀಡಿದ್ದಾರೆ. ಬೆಳೆಯುತ್ತಿರುವ ಇಂತಹ ಸಮಸ್ಯೆಗಳನ್ನು ಎದುರಿಸಲು ಅನೇಕ ಏಜೆನ್ಸಿಗಳು ಒಟ್ಟಾಗಿ ಕೆಲಸ ಮಾಡುತ್ತಿವೆ ಎಂದು ಅವರು ಒತ್ತಿ ಹೇಳಿದರು. ಇದು ಮಹತ್ವದ ಕಾಳಜಿ ಎಂದು ಬಣ್ಣಿಸಿರುವ ಪ್ರಧಾನಮಂತ್ರಿ, ಇಂತಹ ಹಗರಣಗಳನ್ನು ಎದುರಿಸುವಾಗ ‘ನಿರೀಕ್ಷಿಸಿ, ಯೋಚಿಸಿ ಮತ್ತು ಕ್ರಮ ಕೈಗೊಳ್ಳಿ’ ಎಂಬ ವಿಧಾನವನ್ನು ಅನುಸರಿಸುವಂತೆ ನಾಗರಿಕರನ್ನು ಒತ್ತಾಯಿಸಿದ್ದಾರೆ.

‘ಡಿಜಿಟಲ್ ಅರೆಸ್ಟ್’ ಒಂದು ರೀತಿಯ ಸೈಬರ್ ಕ್ರೈಮ್ ಅನ್ನು ಉಲ್ಲೇಖಿಸುತ್ತದೆ, ಅಲ್ಲಿ ಸ್ಕ್ಯಾಮರ್‌ಗಳು ಕಾನೂನು ಜಾರಿ ಅಧಿಕಾರಿಗಳಂತೆ ನಟಿಸುತ್ತಾರೆ. ಬಲಿಪಶುಗಳು ನಿರ್ದಿಷ್ಟ ಮೊತ್ತವನ್ನು ಪಾವತಿಸದಿದ್ದಾಗ ಬಂಧನದ ಬೆದರಿಕೆ ಹಾಕುತ್ತಾರೆ. ಈ ಹಗರಣದ ಹಲವಾರು ಪ್ರಕರಣಗಳು ಇತ್ತೀಚೆಗೆ ದೇಶಾದ್ಯಂತ ವರದಿಯಾಗಿವೆ.

ಕಾನೂನಿನಲ್ಲಿ ಡಿಜಿಟಲ್ ಬಂಧನದಂತಹ ವ್ಯವಸ್ಥೆ ಇಲ್ಲ. ಇದು ಕೇವಲ ವಂಚನೆ, ಸುಳ್ಳು, ಅಪರಾಧಿಗಳ ಗುಂಪು ಮತ್ತು ಇದನ್ನು ಮಾಡುತ್ತಿರುವವರು ಸಮಾಜದ ಶತ್ರುಗಳು. ಡಿಜಿಟಲ್ ಬಂಧನದ ಹೆಸರಿನಲ್ಲಿ ನಡೆಯುತ್ತಿರುವ ವಂಚನೆಯನ್ನು ಎದುರಿಸಲು ವಿವಿಧ ತನಿಖಾ ಸಂಸ್ಥೆಗಳು ರಾಜ್ಯ ಸರ್ಕಾರಗಳ ಸಹಯೋಗದಲ್ಲಿ ಕಾರ್ಯನಿರ್ವಹಿಸುತ್ತಿವೆ ಎಂದು ಪ್ರಧಾನಿ ಮೋದಿ ತಮ್ಮ ‘ಮನ್ ಕಿ ಬಾತ್’ ಪ್ರಸಾರದಲ್ಲಿ ಹೇಳಿದರು.

ಜನರ ಭಯವನ್ನು ಬೇಟೆಯಾಡಲು ಸ್ಕ್ಯಾಮರ್‌ಗಳು ತನಿಖಾ ಸಂಸ್ಥೆ ಅಧಿಕಾರಿಗಳಂತೆ ಹೇಗೆ ನಟಿಸುತ್ತಾರೆ ಎಂಬುದನ್ನು ತೋರಿಸುವ ಪ್ರಾತಿನಿಧಿಕ ವಿಡಿಯೊವನ್ನು ಸಹ ಅವರು ಪ್ಲೇ ಮಾಡಿದರು. ಡಿಜಿಟಲ್ ಅರೆಸ್ಟ್ ವಂಚನೆಗಳ ಬಗ್ಗೆ ಎಚ್ಚರದಿಂದಿರಿ ಎಂದು ಪ್ರಧಾನಿ ಹೇಳಿದರು. ಅಂತಹ ತನಿಖೆಗಾಗಿ ಯಾವುದೇ ತನಿಖಾ ಸಂಸ್ಥೆಯು ನಿಮ್ಮನ್ನು ಫೋನ್ ಅಥವಾ ವಿಡಿಯೊ ಕರೆ ಮೂಲಕ ಸಂಪರ್ಕಿಸುವುದಿಲ್ಲ.

ಬೆದರಿಕೆ ಕರೆ ಮಾಡುವ ಸೈಬರ್ ವಂಚಕರನ್ನು ಎದುರಿಸಲು ಮೂರು ಹಂತದ ವಿಧಾನವನ್ನು ಪ್ರಧಾನಿ ವಿವರಿಸಿದರು.

ಒಬ್ಬರು ಕರೆಯನ್ನು ಸ್ವೀಕರಿಸಿದಾಗ, ಮೊದಲು ‘ನಿರೀಕ್ಷಿಸಿ’ ಎಂದು ಹೇಳಿ. ಭೀತಿಗೊಳಗಾಗಬೇಡಿ; ಶಾಂತವಾಗಿರಿ ಮತ್ತು ಯಾವುದೇ ಆತುರದ ನಿರ್ಧಾರಗಳನ್ನು ತೆಗೆದುಕೊಳ್ಳುವುದನ್ನು ತಪ್ಪಿಸಿ. ನಿಮ್ಮ ವೈಯಕ್ತಿಕ ಮಾಹಿತಿಯನ್ನು ಯಾರೊಂದಿಗೂ ಹಂಚಿಕೊಳ್ಳಬೇಡಿ. ಸಾಧ್ಯವಾದರೆ, ಸ್ಕ್ರೀನ್‌ಶಾಟ್ ತೆಗೆದುಕೊಂಡು ಕರೆಯನ್ನು ರೆಕಾರ್ಡ್ ಮಾಡಿ ಎಂದು ಪ್ರಧಾನಿ ಹೇಳಿದರು.

ನಂತರ, ‘ಯೋಚಿಸಿ’ ಯಾವುದೇ ಸರ್ಕಾರಿ ಏಜೆನ್ಸಿಯು ನಿಮಗೆ ಫೋನ್‌ನಲ್ಲಿ ಬೆದರಿಕೆ ಹಾಕುವುದಿಲ್ಲ, ವಿಡಿಯೊ ಕರೆ ಮೂಲಕ ನಿಮ್ಮನ್ನು ವಿಚಾರಿಸುವುದಿಲ್ಲ ಅಥವಾ ಈ ರೀತಿಯಲ್ಲಿ ಹಣವನ್ನು ಬೇಡಿಕೆಯಿಡುವುದಿಲ್ಲ. ನೀವು ಭಯಭೀತರಾಗಿದ್ದರೆ, ಏನಾದರೂ ತಪ್ಪಾಗಿದೆಯೇ ಎಂದು ಗುರುತಿಸಿ.

ಅಂತಿಮವಾಗಿ, ‘ಕ್ರಮ ತೆಗೆದುಕೊಳ್ಳಿ’. ರಾಷ್ಟ್ರೀಯ ಸೈಬರ್ ಸಹಾಯವಾಣಿಗೆ (1930)  ಕರೆ ಮಾಡಿ, ಅಧಿಕೃತ ಪೋರ್ಟಲ್‌ನಲ್ಲಿ ಘಟನೆಯನ್ನು ವರದಿ ಮಾಡಿ ಮತ್ತು ನಿಮ್ಮ ಕುಟುಂಬದವರಿಗೆ ಮತ್ತು ಪೊಲೀಸರಿಗೆ ತಿಳಿಸಿ. ಯಾವುದೇ ಪುರಾವೆಗಳನ್ನು ಸುರಕ್ಷಿತವಾಗಿರಿಸಲು ಮರೆಯದಿರಿ ಎಂದು ಪ್ರಧಾನಿ ಸಲಹೆ ನೀಡಿದರು.

ಈ ರೀತಿಯ ಹಗರಣಗಳನ್ನು ತನಿಖೆ ಮಾಡುವ ವಿವಿಧ ಏಜೆನ್ಸಿಗಳ ನಡುವೆ ಸಮನ್ವಯವನ್ನು ರಚಿಸಲು ರಾಷ್ಟ್ರೀಯ ಸೈಬರ್ ಸಮನ್ವಯ ಕೇಂದ್ರವನ್ನು ಸ್ಥಾಪಿಸಲಾಗಿದೆ ಎಂದು ಅವರು ಹೇಳಿದರು.

ಕ್ರೈಂ ರಿಪೋರ್ಟ್ಸ್

ಮುಂಬೈ: ತಾಯಿಯನ್ನು ಕೊಂದು ದೇಹದ ಭಾಗಗಳನ್ನು ಹುರಿದು ತಿಂದ ವ್ಯಕ್ತಿಯೊಬ್ಬನ ಮರಣದಂಡನೆಯನ್ನು ಮುಂಬೈ ಹೈಕೋರ್ಟ್ ಎತ್ತಿ ಹಿಡಿದಿದೆ.

ಸುನೀಲ್ ಮಹಾರಾಷ್ಟ್ರದ ಕೊಲ್ಲಾಪುರದವನು. ಈತ 2017ರಲ್ಲಿ ತನ್ನ ತಾಯಿ ಎಲ್ಲಮ್ಮನನ್ನು ಹತ್ಯೆ ಮಾಡಿ, ಅವರ ದೇಹದ ಭಾಗಗಳನ್ನು ಬೇರ್ಪಡಿಸಿ ಹುರಿದು ತಿಂದಿದ್ದಾನೆ. ಕುಡಿತಕ್ಕೆ ಹಣ ನೀಡದ ಕಾರಣ ಅವರನ್ನು ಹತ್ಯೆ ಮಾಡಲಾಗಿದೆ ಎಂದು ಸರ್ಕಾರದ ಪರವಾಗಿ ಆರೋಪಿಸಲಾಗಿತ್ತು.

ತನಿಖೆ ನಡೆಸಿದ ವಿಚಾರಣಾ ನ್ಯಾಯಾಲಯ ಇದೊಂದು ಅಪರೂಪದ ಪ್ರಕರಣ ಎಂದು ಹೇಳಿ ಸುನಿಲ್‌ಗೆ 2021ರಲ್ಲಿ ಮರಣದಂಡನೆ ವಿಧಿಸಿತ್ತು. ಸದ್ಯ ಆರೋಪಿಯನ್ನು ಪುಣೆ ಜೈಲಿನಲ್ಲಿ ಇರಿಸಲಾಗಿದೆ. ಇದರ ವಿರುದ್ಧ ಸುನೀಲ್ ಬಾಂಬೆ ಹೈಕೋರ್ಟ್ ನಲ್ಲಿ ಮೊಕದ್ದಮೆ ಹೂಡಿದರು. ಈ ಬಗ್ಗೆ ವಿಚಾರಣೆ ನಡೆಸಿದ ನ್ಯಾಯಮೂರ್ತಿಗಳಾದ ರೇವತಿ ಮತ್ತು ಪೃಥ್ವಿರಾಜ್ ಚವಾಣ್ ಅವರ ಪೀಠವು, ವಿಚಾರಣಾ ನ್ಯಾಯಾಲಯದ ಆದೇಶವನ್ನು ಎತ್ತಿ ಹಿಡಿದಿದೆ.

‘ಈ ಪ್ರಕರಣ ಬಹಳ ಅಪರೂಪದಲ್ಲೂ ಅಪುರೂಪವಾಗಿದೆ. ಆರೋಪಿಯು ತಾಯಿಯನ್ನು ಕೊಂದಿದ್ದಲ್ಲದೆ ಆಕೆಯ ಕಿಡ್ನಿ, ಮೆದುಳು, ಹೃದಯ, ಲಿವರ್ ಮುಂತಾದವುಗಳನ್ನು ಹುರಿದು ತಿಂದಿದ್ದಾರೆ. ಇದು ನರಭಕ್ಷಕತೆಯನ್ನು ತೋರಿಸುತ್ತದೆ. ಅವರಿಗೆ ಜೀವಾವಧಿ ಶಿಕ್ಷೆ ವಿಧಿಸಿದರೆ ಜೈಲಿನಲ್ಲಿಯೂ ಇದೇ ರೀತಿಯ ಅಪರಾಧಗಳನ್ನು ಮಾಡುತ್ತಾರೆ’ ಎಂದು ಹೇಳಿ ವಿಚಾರಣಾ ನ್ಯಾಯಾಲಯ ನೀಡಿದ್ದ ಆದೇಶವನ್ನು ಎತ್ತಿ ಹಿಡಿದಿದ್ದಾರೆ.

ಕ್ರೈಂ ರಿಪೋರ್ಟ್ಸ್ ದೇಶ

ಕೋಲ್ಕತ್ತಾ: ಕೋಲ್ಕತ್ತಾ ಸರ್ಕಾರಿ ಆಸ್ಪತ್ರೆಯಲ್ಲಿ 26 ವರ್ಷದ ಮಹಿಳೆಗೆ ಲೈಂಗಿಕ ಕಿರುಕುಳ ನೀಡಿ ಅದನ್ನು ಚಿತ್ರೀಕರಿಸಿದ ಆಸ್ಪತ್ರೆ ನೌಕರನನ್ನು ಪೊಲೀಸರು ಬಂಧಿಸಿದ್ದಾರೆ.

ಪಶ್ಚಿಮ ಬಂಗಾಳದ ಕೋಲ್ಕತ್ತಾ ಆರ್‌.ಜಿ.ಕರ್ ಆಸ್ಪತ್ರೆಯಲ್ಲಿ ರಾತ್ರಿ ಕರ್ತವ್ಯದಲ್ಲಿ ಯುವ ಟ್ರೈನಿ ಮಹಿಳಾ ವೈದ್ಯೆಯ ಮೇಲೆ ಲೈಂಗಿಕ ದೌರ್ಜನ್ಯ ಮಾಡಿ ಬರ್ಬರವಾಗಿ ಹತ್ಯೆ ಮಾಡಲಾಗಿತ್ತು. ಈ ಘಟನೆಗೆ ನ್ಯಾಯ ಕೇಳಿ ವೈದ್ಯರು ನಿರಂತರವಾಗಿ ಪ್ರತಿಭಟನೆ ನಡೆಸುತ್ತಿದ್ದಾರೆ. ಲೈಂಗಿಕ ಅಪರಾಧಿಗಳಿಗೆ ಗರಿಷ್ಠ ಶಿಕ್ಷೆಯಾಗಬೇಕು ಎಂದು ಆಗ್ರಹಿಸಿದ್ದಾರೆ.

ಮಹಿಳಾ ವೈದ್ಯೆ ಹತ್ಯೆ ಪ್ರಕರಣಕ್ಕೆ ಸಂಬಂಧಿಸಿದಂತೆ ಭಾರೀ ಕೋಲಾಹಲ, ಉದ್ವೇಗ ಕಡಿಮೆಯಾಗುವ ಮುನ್ನ, ಇದೇ ಕೋಲ್ಕತ್ತಾದಲ್ಲಿ ಸರ್ಕಾರಿ ಮಕ್ಕಳ ಆಸ್ಪತ್ರೆಯಲ್ಲಿ ಮಹಿಳೆಯೊಬ್ಬರಿಗೆ ಆಸ್ಪತ್ರೆಯ ಉದ್ಯೋಗಿಯೊಬ್ಬರು ಲೈಂಗಿಕ ಕಿರುಕುಳ ನೀಡಿದ್ದು ಭಾರೀ ಆಘಾತವನ್ನುಂಟು ಮಾಡಿದೆ.

ಆ ಆಸ್ಪತ್ರೆಯ ಮಕ್ಕಳ ವಿಭಾಗದಲ್ಲಿ 26 ವರ್ಷದ ಮಹಿಳೆಯೊಬ್ಬರು ತಮ್ಮ ಮಗುವನ್ನು ಚಿಕಿತ್ಸೆಗಾಗಿ ದಾಖಲಿಸಿದ್ದರು. ರಾತ್ರಿ ಮಗುವಿನ ಪಕ್ಕದಲ್ಲಿ ಮಲಗಿದ್ದ ಅವರಿಗೆ, ಅಲ್ಲಿ ವಾರ್ಡ್ ಬಾಯ್ ಆಗಿ ಕೆಲಸ ಮಾಡುತ್ತಿರುವ ತನಯ್ ಪಾಲ್ (26) ಎಂಬುವನು ಲೈಂಗಿಕ ಕಿರುಕುಳ ನೀಡಿದ್ದಾನೆ. ಅಲ್ಲದೆ, ಅದನ್ನು ತನ್ನ ಮೊಬೈಲ್‌ನಲ್ಲೂ ಚಿತ್ರೀಕರಿಸಿಕೊಂಡಿದ್ದಾನೆ.

ಇದರಿಂದ ಆಘಾತಕ್ಕೊಳಗಾದ ಮಹಿಳೆ ದೌರ್ಜನ್ಯದ ಕುರಿತು ಪೊಲೀಸರಿಗೆ ದೂರು ನೀಡಿದ್ದಾರೆ. ಅದರಂತೆ ಪೊಲೀಸರು ಪ್ರಕರಣ ದಾಖಲಿಸಿಕೊಂಡು ವಾರ್ಡ್ ಬಾಯ್ ತನಯ್ ಪಾಲ್ ನನ್ನು ಬಂಧಿಸಿ ಆತನ ಸೆಲ್ ಫೋನ್ ಜಪ್ತಿ ಮಾಡಿ ವಿಧಿವಿಜ್ಞಾನ ಪರೀಕ್ಷೆಗೆ ಕಳುಹಿಸಿದ್ದಾರೆ.

ಅಂತೆಯೇ, ಕಳೆದ ತಿಂಗಳು, ಬಿರ್ಬಮ್ ಜಿಲ್ಲೆಯ ಸರ್ಕಾರಿ ಆಸ್ಪತ್ರೆಯಲ್ಲಿ ರಾತ್ರಿ ಕರ್ತವ್ಯದಲ್ಲಿದ್ದ ನರ್ಸ್‌ಗೆ ಲೈಂಗಿಕ ಕಿರುಕುಳ ನೀಡಿದ ವ್ಯಕ್ತಿಯನ್ನು ಬಂಧಿಸಲಾಗಿತ್ತು. ಪಶ್ಚಿಮ ಬಂಗಾಳದ ಆಸ್ಪತ್ರೆಗಳಲ್ಲಿ ಲೈಂಗಿಕ ಅಪರಾಧಗಳ ಸಂಖ್ಯೆ ಹೆಚ್ಚುತ್ತಿದ್ದು, ಇದನ್ನು ತಡೆಯಲು ಕಠಿಣ ಕ್ರಮ ಕೈಗೊಳ್ಳಬೇಕೆಂಬ ಆಗ್ರಹ ಬಲವಾಗುತ್ತಿದೆ.

ಕ್ರೈಂ ರಿಪೋರ್ಟ್ಸ್

ಉತ್ತರ ಪ್ರದೇಶ: 17 ವರ್ಷದ ಬಾಲಕಿಯನ್ನು ಅಪಹರಿಸಿದ ಪ್ರಕರಣದಲ್ಲಿ ಬಂಧನಕ್ಕೊಳಗಾಗಿ ಜಾಮೀನಿನ ಮೇಲೆ ಹೊರಬಂದ ವ್ಯಕ್ತಿ, ಮತ್ತೆ ಅದೇ ಬಾಲಕಿಯನ್ನು ಅಪಹರಿಸಿ, ಲೈಂಗಿಕ ದೌರ್ಜನ್ಯ ನಡೆಸಿ ಮತ್ತೆ ಬಂಧನಕ್ಕೊಳಗಾಗಿರುವ ಘಟನೆ ಆಘಾತವನ್ನು ಉಂಟು ಮಾಡಿದೆ.

ವಿರನಾಥ್ ಪಾಂಡೆ, ಬಿಹಾರ ರಾಜ್ಯದ ಭೋಜ್‌ಪುರ ಜಿಲ್ಲೆಯವನು. ಉತ್ತರ ಪ್ರದೇಶದಲ್ಲಿ 17 ವರ್ಷದ ಬಾಲಕಿಯನ್ನು ಅಪಹರಿಸಿದ ಪ್ರಕರಣದಲ್ಲಿ ಈಗಾಗಲೇ ಜೈಲು ಸೇರಿದವನು.

ಈ ಹಿನ್ನೆಲೆಯಲ್ಲಿ, ಸಂತ್ರಸ್ತೆಯ ತಂದೆ ಕಳೆದ ಮೇನಲ್ಲಿ ತನ್ನ ಮಗಳು ಮತ್ತೆ ಕಾಣೆಯಾಗಿದ್ದಾಳೆ ಎಂದು ಕೊಯ್ರಾವುನಾ (Koirauna) ಪೊಲೀಸ್ ಠಾಣೆಗೆ ದೂರು ನೀಡಿದ್ದರು. ಇದರ ನಂತರ ಪೊಲೀಸರು ಪ್ರಥಮ ಮಾಹಿತಿ ವರದಿ (FIR) ದಾಖಲಿಸಿಕೊಂಡು ತನಿಖೆ ಆರಂಭಿಸಿದ್ದರು. ಹೆಚ್ಚಿನ ತನಿಖೆಯಲ್ಲಿ ಬಾಲಕಿಯನ್ನು ರಕ್ಷಿಸಿದ್ದು, ಪಾಂಡೆಯನ್ನು ಜೈಲಿಗೆ ಕಳುಹಿಸಲಾಗಿದೆ.

ಈ ಕುರಿತು ಮಾತನಾಡಿದ ಕೊಯ್ರಾವುನಾ ಪೊಲೀಸ್ ಠಾಣೆಯ ಪ್ರಭಾರಿ ಇನ್ಸ್‌ಪೆಕ್ಟರ್ ಮನೋಜ್ ಕುಮಾರ್, ‘ಪಾಂಡೆ ಜಾಮೀನಿನ ಮೇಲೆ ಹೊರಬಂದ ಕೆಲವು ದಿನಗಳ ನಂತರ ಅಂದರೆ, ಆಗಸ್ಟ್ 5 ರಂದು ಹುಡುಗಿಯನ್ನು ಅಪಹರಿಸಿ, ಒಂದು ತಿಂಗಳ ಕಾಲ ಆಕೆಯ ಮೇಲೆ ಲೈಂಗಿಕ ದೌರ್ಜನ್ಯ ಎಸಗಿದ್ದಾನೆ.

ನಂತರ ಸೆಪ್ಟೆಂಬರ್ 2 ರಂದು ಜಂಗಿಗಂಜ್ (Jangiganj) ರೈಲ್ವೆ ನಿಲ್ದಾಣದ ಬಳಿ ಬಾಲಕಿಯನ್ನು ಬಿಟ್ಟು ಪಾಂಡೆ ಪರಾರಿಯಾಗಿದ್ದಾನೆ. ಇದರ ನಂತರ ಸಂತ್ರಸ್ತೆ ಕಳೆದ ಒಂದು ತಿಂಗಳಿನಿಂದ ತನ್ನ ಮೇಲೆ ಲೈಂಗಿಕ ದೌರ್ಜನ್ಯ ನಡೆಸಲಾಗಿದೆ ಎಂದು ಪೊಲೀಸ್ ಠಾಣೆಗೆ ದೂರು ನೀಡಿದಳು.

ಪಾಂಡೆ ವಿರುದ್ಧ ಭಾರತೀಯ ನ್ಯಾಯ ಸಂಹಿತಾ ಕಾಯ್ದೆಯಡಿ ಲೈಂಗಿಕ ದೌರ್ಜನ್ಯ, ಅಪಹರಣ ಮತ್ತು ಪೋಕ್ಸೋ ಸೆಕ್ಷನ್‌ಗಳ ಅಡಿಯಲ್ಲಿ ಪ್ರಕರಣ ದಾಖಲಿಸಲಾಗಿದೆ. ಸಂತ್ರಸ್ತೆ ಮಹಿಳೆಯ ವೈದ್ಯಕೀಯ ಪರೀಕ್ಷೆಯಲ್ಲಿ, ಮಹಿಳೆ ಮೇಲೆ ಲೈಂಗಿಕ ದೌರ್ಜನ್ಯ ನಡೆದಿರುವುದು ದೃಢಪಟ್ಟಿದೆ’ ಎಂದು ಅವರು ಹೇಳಿದರು.

ಪಾಂಡೆ ಅವರನ್ನು ನಿನ್ನೆ (ಸೆ.9) ಇಟಹರಾ ಚೌರಾಹಾ (Itahara Chaura)ದಲ್ಲಿ ಬಂಧಿಸಲಾಗಿದೆ. ಮುಂದಿನ ಕಾನೂನು ಕ್ರಮ ಕೈಗೊಳ್ಳಲಾಗುತ್ತಿದೆ.

ಕ್ರೈಂ ರಿಪೋರ್ಟ್ಸ್

ಭೋಪಾಲ್: ಮಧ್ಯಪ್ರದೇಶದ ಉಜ್ಜಯಿನಿಯಲ್ಲಿ ಜನನಿಬಿಡ ರಸ್ತೆಯಲ್ಲಿ ಮಹಿಳೆಯೊಬ್ಬರ ಮೇಲೆ ಅತ್ಯಾಚಾರ ನಡೆದಿದೆ. ಅಲ್ಲಿದ್ದವರು ಆ ಮಹಿಳೆಯನ್ನು ರಕ್ಷಿಸದೆ ವಿಡಿಯೋ ರೆಕಾರ್ಡ್ ಮಾಡಿ ಆನ್‌ಲೈನ್‌ನಲ್ಲಿ ಪ್ರಕಟಿಸಿದ್ದಾರೆ.

ಉಜ್ಜಯಿನಿಯ ಕೊಯಿಲಾ ಪಾಠಕ್ ನಲ್ಲಿ ಮಹಿಳೆಯೊಬ್ಬರು ಕಸ ಸಂಗ್ರಹಿಸುತ್ತಿದ್ದರು. ಆ ಪ್ರದೇಶದಲ್ಲಿದ್ದ ಲೋಕೇಶ್ ಎಂಬುವನು, ಮಹಿಳೆಯನ್ನು ಕರೆದುಕೊಂಡು ಹೋಗಿ ಮದುವೆಯಾಗುವುದಾಗಿ ಆಸೆ ಮಾತು ಹೇಳಿದ್ದಾನೆ. ಇದನ್ನು ನಂಬಿದ ಮಹಿಳೆ ಆತನೊಂದಿಗೆ ತೆರಳಿದ್ದಾಳೆ. ಮಹಿಳೆಗೆ ಲೋಕೇಶ್ ರಸ್ತೆಯಲ್ಲೇ ಅರಿವಳಿಕೆ ಮಿಶ್ರಿತ ಮದ್ಯ ನೀಡಿದ್ದಾನೆ. ಇದನ್ನು ಅರಿಯದೆ ಕುಡಿದು ಅಲ್ಲೆ ಪ್ರಜ್ಞೆ ತಪ್ಪಿ ಬಿದ್ದ ಮಹಿಳೆಯ ಮೇಲೆ ಅತ್ಯಾಚಾರ ಎಸಗಿ ಪರಾರಿಯಾಗಿದ್ದಾನೆ.

ಇದನ್ನು ಕಂಡ ಅಲ್ಲಿದ್ದ ಕೆಲವರು ಮಹಿಳೆಗೆ ಸಹಾಯ ಮಾಡದೆ ಮೊಬೈಲ್ ನಲ್ಲಿ ವಿಡಿಯೋ ರೆಕಾರ್ಡ್ ಮಾಡಿ ಸಾಮಾಜಿಕ ಜಾಲತಾಣಗಳಲ್ಲಿ ಹರಿಬಿಟ್ಟಿದ್ದಾರೆ. ಇದು ಪೊಲೀಸರ ಗಮನಕ್ಕೆ ಬಂದಾಗ ಲೋಕೇಶ್ ನನ್ನು ಬಂಧಿಸಿ ತನಿಖೆ ನಡೆಸುತ್ತಿದ್ದಾರೆ.

ಕ್ರೈಂ ರಿಪೋರ್ಟ್ಸ್

ಬೆಂಗಳೂರು: ಚಿತ್ರದುರ್ಗದ ರೇಣುಕಾಸ್ವಾಮಿ ಅಪಹರಣ ಹಾಗೂ ಕೊಲೆ ಪ್ರಕರಣಕ್ಕೆ ಸಂಬಂಧಿಸಿದಂತೆ ದರ್ಶನ್, ಪವಿತ್ರಾ ಗೌಡ ಸೇರಿದಂತೆ ಒಟ್ಟು 17 ಆರೋಪಿಗಳ ವಿರುದ್ಧ 4800 ಪುಟಗಳ ದೋಷಾರೋಪ ಪಟ್ಟಿಯನ್ನು ಪೊಲೀಸರು 24ನೇ ಎಸಿಎಂಎಂ ಕೋರ್ಟ್‌ಗೆ ಇಂದು ಸಲ್ಲಿಸಿದ್ದಾರೆ.

ದೋಷಾರೋಪ ಪಟ್ಟಿಯಲ್ಲಿ ದರ್ಶನ್ ಅವರನ್ನು 2ನೇ ಆರೋಪಿ ಎಂದೇ ದಾಖಲಿಸಲಾಗಿದ್ದು, ಪವಿತ್ರಾ 1ನೇ ಆರೋಪಿಯಾಗಿದ್ದಾರೆಂದು ಉಲ್ಲೇಖಿಸಲಾಗಿದೆ ಎಂದು ತಿಳಿದುಬಂದಿದೆ.

ಜೂನ್ 9 ರಂದು ಕಾಮಾಕ್ಷಿಪಾಳ್ಯ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಪ್ರಕರಣ ದಾಖಲಾಗಿದ್ದು, ಜೂನ್ 11 ರಂದು ನಟ ದರ್ಶನ್ ಅವರನ್ನು ಮೈಸೂರಿನಲ್ಲಿ ಬಂಧಿಸಲಾಗಿತ್ತು. ಕೊಲೆಯಂತಹ ಘೋರ ಪ್ರಕರಣಗಳಲ್ಲಿ ಆರೋಪಿಗಳನ್ನು ಬಂಧಿಸಿದ ನಂತರ ಪೊಲೀಸರು 90 ದಿನಗಳಲ್ಲಿ ಆರೋಪಪಟ್ಟಿ ಸಲ್ಲಿಸುವುದು ಕಡ್ಡಾಯವಾಗಿದೆ.

ಕ್ರೈಂ ರಿಪೋರ್ಟ್ಸ್

ಬೆಂಗಳೂರು: ನಟ ದರ್ಶನ್ ಸೇರಿದಂತೆ ರೇಣುಕಾಸ್ವಾಮಿ ಕೊಲೆ ಪ್ರಕರಣದ ಹಲವು ಆರೋಪಿಗಳನ್ನು ಸಹ ಇದೀಗ ಬೇರೆ ಬೇರೇ ಜೈಲಿಗೆ ಸ್ಥಳಾಂತರಿಸುವಂತೆ ಬೆಂಗಳೂರಿನ 24ನೇ ಎಸಿಎಂಎಂ ಕೋರ್ಟ್ ಆದೇಶಿಸಿದೆ. ಚೀಫ್ ಸೂಪರಿಡೆಂಟ್ ರಿಂದ ನ್ಯಾಯಾಲಯಕ್ಕೆ ಮನವಿ ಮಾಡಲಾಗಿತ್ತು.

ಅದರಂತೆ ದರ್ಶನ್ ಅವರನ್ನು ಬಳ್ಳಾರಿ ಜೈಲಿಗೆ ಸ್ಥಳಾಂತರಿಸಲಾಗುತ್ತದೆ. ನ್ಯಾಯಾಲಯದ ಆದೇಶದ ಪ್ರತಿ ಸಿಗುತ್ತಿದ್ದಂತೆ ಜೈಲು ಸಿಬ್ಬಂದಿ ದರ್ಶನ್ ರನ್ನು ಸ್ಥಳಾಂತರಿಸಲಿದ್ದಾರೆ. ಪರಪ್ಪನ ಅಗ್ರಹಾರ ಕೇಂದ್ರ ಕಾರಾಗೃಹ ಜೈಲಿನಲ್ಲಿ ನಟ ದರ್ಶನ್ ಗೆ ರಾಜಾತಿಥ್ಯ ಫೋಟೋ ವೈರಲ್ ಆದ ಬೆನ್ನಲ್ಲೇ ಇದೀಗ ನಟನಿಗೆ ಸಂಕಷ್ಟ ಎದುರಾಗಿದೆ.

ಯಾರ‍್ಯಾರು ಯಾವ-ಯಾವ ಜೈಲಿಗೆ ಶಿಫ್ಟ್​: ರೇಣುಕಾಸ್ವಾಮಿ ಕೊಲೆ ಪ್ರಕರಣದ 2ನೇ ಆರೋಪಿ ದರ್ಶನ್​ನನ್ನು ಬಳ್ಳಾರಿ ಜೈಲಿಗೆ ಶಿಫ್ಟ್ ಮಾಡಲಿದ್ದಾರೆ. ಆರೋಪಿ ಪವನ್, ರಾಘವೇಂದ್ರ ನಂದೀಶ್ ನನ್ನು ಮೈಸೂರು ಜೈಲಿಗೆ ಶಿಫ್ಟ್ ಮಾಡಲಿದ್ದಾರೆ. ಆರೋಪಿ ಜಗದೀಶ್ ಅವರನ್ನು ಶಿವಮೊಗ್ಗಕ್ಕೆ ಹಾಗೂ ಧನರಾಜ್​ನನ್ನು ಧಾರವಾಡ ಜೈಲಿಗೆ ಸ್ಥಳಾಂತರಿಸಲು ಪೊಲೀಸರು ಸಿದ್ಧತೆ ಮಾಡಿಕೊಳ್ತಿದ್ದಾರೆ.

ಕೊಲೆ ಪ್ರಕರಣದ ಆರೋಪಿ ವಿನಯ್​ನನ್ನು ವಿಜಯಪುರ ಜೈಲಿಗೆ, ನಾಗರಾಜನನ್ನು ಗುಲ್ಬರ್ಗ ಹಾಗೂ ಲಕ್ಷ್ಮಣನನ್ನು ಶಿವಮೊಗ್ಗ, ಆರೋಪಿ ಪ್ರದೂಶ್ ನನ್ನು ಬೆಳಗಾವಿ ಜೈಲಿಗೆ ಶಿಫ್ಟ್ ಮಾಡಲಿದ್ದಾರೆ. ಈಗಾಗಲೇ ರವಿ, ಕಾರ್ತಿಕ್, ನಿಖಿಲ್, ಕೇಶವಮೂರ್ತಿ ತುಮಕೂರು ಜೈಲಿನಲ್ಲೆ ಇದ್ದರು. ಅವರು ಅಲ್ಲೇ ಇರಲಿದ್ದಾರೆ.

ರೇಣುಕಾಸ್ವಾಮಿ ಕೊಲೆ ಪ್ರಕರಣದ ಎ1 ಆಗಿರುವ ನಟಿ ಪವಿತ್ರಾ ಗೌಡ ಅವರು ಪರಪ್ಷನ ಅಗ್ರಹಾರ ಜೈಲಿನಲ್ಲೇ ಇರಲಿದ್ದಾರೆ. ಅನುಕುಮಾರ್ ಹಾಗೂ ದೀಪಕ್ ಕೂಡ ಪರಪ್ಪನ ಅಗ್ರಹಾರ ಜೈಲಿನಲ್ಲೇ ಇರಲಿದ್ದಾರೆ. ದರ್ಶನ್ ಅವರನ್ನು ಇಂದು ರಾತ್ರಿ ಅಥವಾ ನಾಳೆ ಬೆಳಗ್ಗೆ ಬಳ್ಳಾರಿ ಜೈಲಿಗೆ ಶಿಫ್ಟ್ ಮಾಡುವ ಸಾಧ್ಯತೆ ಇದ್ದು, ಸದ್ಯ ದರ್ಶನ್ ಕರೆದೊಯ್ಯುವ ಸಮಯದ ಬಗ್ಗೆ ಅಧಿಕಾರಿಗಳು ಚರ್ಚೆ ನಡೆಸುತ್ತಿದ್ದಾರೆ ಎನ್ನಲಾಗ್ತಿದೆ.

ರೌಡಿಶೀಟರ್ ಗಳ ಜೊತೆ ದರ್ಶನ್ ಸಂಪರ್ಕ ಬೆಳೆಸಿದ್ದು ಹೇಗೆ? ಲಾನ್ ನಲ್ಲಿ ಎಲ್ಲರೂ ಒಟ್ಟಿಗೆ ಕೂರಲು ಚೇರ್ ವ್ಯವಸ್ಥೆ ಮಾಡಿದವರು ಯಾರು? ಕಾಫಿ ಮಗ್ ಹೇಗೆ ಬಂತು. ಜೈಲಿನಲ್ಲಿ ಸಿಗರೇಟ್, ಮದ್ಯ, ಮಾದಕವಸ್ತು ನಿಷೇಧವಿದ್ದರೂ ನಿಷೇಧಿತ ಸ್ಥಳದಲ್ಲಿ ಸಿಗರೇಟ್ ಸೇದಲು ಸೇರಿದ್ದರ ಬಗ್ಗೆ ತನಿಖೆ ನಡೆಸಲಿದ್ದಾರೆ.

ಹುಳಿಮಾವು ಇನ್ಸ್​ಪೆಕ್ಟರ್​ ಕುಮಾರಸ್ವಾಮಿ ನೇತೃತ್ವದಲ್ಲಿ ಎರಡನೇ ಪ್ರಕರಣದ ತನಿಖೆ ನಡೆಯಲಿದೆ. ಮೊಬೈಲ್ ಫೋನ್ ನಲ್ಲಿ ಪೋಟೊ ತೆಗೆದಿದ್ದು ಯಾರು? ಹೇಗೆ ಇದೆಲ್ಲಾ ಸಾಧ್ಯವಾಯ್ತು. ಮೊಬೈಲ್ ಕೊಟ್ಟವರು ಯಾರು? ವಿಡಿಯೊ ಕರೆ ಮಾಡಿದ್ದು ಹೇಗೆ ಎನ್ನುವ ಬಗ್ಗೆ ಈ ಟೀಮ್ ತನಿಖೆ ನಡೆಸಲಿದೆ. ಜೈಲಿನಲ್ಲಿ ಮೊಬೈಲ್ ಬಳಕೆಗೆ ನಿಷೇಧವಿದೆ. ಜಾಮರ್ ಅಳವಡಿಸಿರುತ್ತಾರೆ. ನೆಟ್ ವರ್ಕ್ ಕನೆಕ್ಷನ್ ಹೇಗಿದೆ ಸಿಕ್ಕಿದೆ. ಫೋಟೋ ಸೆಂಡ್ ಮಾಡಿದ್ದು ಹೇಗೆ? ವಿಡಿಯೋ ಕಾಲ್ ಬಂದಿದ್ದು ಹೇಗೆ? ಎನ್ನುವ ಬಗ್ಗೆ ತನಿಖೆ ನಡೆಯಲಿದೆ.