ಡೈನಾಮಿಕ್ ಲೀಡರ್ ನ್ಯೂಸ್, Dynamic Leader - Kannada Online News Portal 24x7 | Latest News in Kannada online | ಕನ್ನಡ ಸುದ್ದಿ
ಧಾರ್ಮಿಕ ಸ್ವಾತಂತ್ರ್ಯ ಕಾಯ್ದೆ 2021 Archives » Dynamic Leader
July 14, 2024
Home Posts tagged ಧಾರ್ಮಿಕ ಸ್ವಾತಂತ್ರ್ಯ ಕಾಯ್ದೆ 2021
ದೇಶ

ಇಂದೋರ್: ಮಧ್ಯಪ್ರದೇಶದಲ್ಲಿ 14 ಮಹಿಳೆಯರು ಸೇರಿದಂತೆ 30 ಜನರು ಇಸ್ಲಾಂ ಧರ್ಮದಿಂದ ಹಿಂದೂ ಧರ್ಮಕ್ಕೆ ಕಾನೂನುಬದ್ಧವಾಗಿ ಮತಾಂತರಗೊಂಡಿದ್ದಾರೆ. ಮಧ್ಯಪ್ರದೇಶದಲ್ಲಿ ಮುಖ್ಯಮಂತ್ರಿ ಮೋಹನ್ ಯಾದವ್ ನೇತೃತ್ವದ ಬಿಜೆಪಿ ಅಧಿಕಾರದಲ್ಲಿದೆ.

ಇಲ್ಲಿ ‘ಸಜಾ ಸಂಸ್ಕೃತಿ ಮಂಚ್’ (Sajha Sanskriti Manch)ಎಂಬ ಹಿಂದೂ ಸಂಘಟನೆ ಕಾರ್ಯನಿರ್ವಹಿಸುತ್ತಿದೆ. ಈ ಸಂಸ್ಥೆಯ ವತಿಯಿಂದ ನಿನ್ನೆ ಅಲ್ಲಿನ ವಿನಾಯಕ ದೇವಸ್ಥಾನದಲ್ಲಿ ಕಾರ್ಯಕ್ರಮ ನಡೆಯಿತು. ಇದರಲ್ಲಿ 14 ಮುಸ್ಲಿಂ ಮಹಿಳೆಯರು ಸೇರಿದಂತೆ 30 ಜನರು ವೇದ ಮಂತ್ರಗಳನ್ನು ಪಠಿಸುವ ಮೂಲಕ ಕಾನೂನುಬದ್ಧವಾಗಿ ಹಿಂದೂ ಧರ್ಮಕ್ಕೆ ಮತಾಂತರಗೊಂಡರು.

ಈ ಬಗ್ಗೆ ಪ್ರತಿಕ್ರಿಯಿಸಿರುವ ಸಂಘಟನೆಯ ಅಧ್ಯಕ್ಷ ಸ್ಯಾಮ್ ಪಾವ್ರಿ (Sam Pawri), “ಮಧ್ಯಪ್ರದೇಶದಲ್ಲಿ ಧಾರ್ಮಿಕ ಸ್ವಾತಂತ್ರ್ಯ ಕಾಯ್ದೆ 2021ರ ಪ್ರಕಾರ, 30 ಮುಸ್ಲಿಮರು ಹಿಂದೂ ಧರ್ಮಕ್ಕೆ ಮತಾಂತರಗೊಂಡಿದ್ದಾರೆ. ಅವರೆಲ್ಲರೂ, ಜಿಲ್ಲಾಡಳಿತಕ್ಕೆ ಔಪಚಾರಿಕವಾಗಿ ಇದಕ್ಕಾದ ಎಲ್ಲಾ ದಾಖಲೆಗಳನ್ನು ಸಲ್ಲಿಸಿದ್ದಾರೆ.

ಇದರಲ್ಲಿ ಯಾವುದೇ ನಿಯಮ ಉಲ್ಲಂಘನೆಯಾಗಲೀ, ಬಲವಂತದ ಮತಾಂತರವಾಗಲೀ ನಡೆದಿಲ್ಲ” ಎಂದು ಹೇಳಿದ್ದಾರೆ.