ಡೈನಾಮಿಕ್ ಲೀಡರ್ ನ್ಯೂಸ್, Dynamic Leader - Kannada Online News Portal 24x7 | Latest News in Kannada online | ಕನ್ನಡ ಸುದ್ದಿ
ಬಿಜೆಪಿ Archives » Dynamic Leader
December 13, 2024
Home Posts tagged ಬಿಜೆಪಿ
ರಾಜಕೀಯ

ನವದೆಹಲಿ: ಪ್ರಧಾನಿ ನರೇಂದ್ರ ಮೋದಿ ಅವರ ಅಧ್ಯಕ್ಷತೆಯಲ್ಲಿ ನಡೆದ ಕೇಂದ್ರ ಸಚಿವ ಸಂಪುಟವು ದೇಶಾದ್ಯಂತ ಏಕಕಾಲದಲ್ಲಿ ಚುನಾವಣೆ ನಡೆಸಲು ಅನುಕೂಲವಾಗುವಂತೆ ಒಂದು ದೇಶ, ಒಂದು ಚುನಾವಣಾ ಮಸೂದೆಗೆ ಅನುಮೋದನೆ ನೀಡಿದೆ.

ಲೋಕಸಭೆ ಚುನಾವಣೆಯ ಜೊತೆಗೆ ಎಲ್ಲಾ ರಾಜ್ಯಗಳ ವಿಧಾನಸಭೆ ಚುನಾವಣೆಗಳನ್ನು ಏಕಕಾಲದಲ್ಲಿ ನಡೆಸುವ ಒಂದು ರಾಷ್ಟ್ರ, ಒಂದು ಚುನಾವಣಾ ಯೋಜನೆಯನ್ನು ಕಾನೂನು ಮಾಡಲು ಕೇಂದ್ರ ಸರ್ಕಾರ ಪ್ರಯತ್ನಿಸುತ್ತಿದೆ.

ಯೋಜನೆಯ ಅನುಷ್ಠಾನದ ಕಾರ್ಯಸಾಧ್ಯತೆಯನ್ನು ಪರಿಶೀಲಿಸಲು ಮಾಜಿ ರಾಷ್ಟ್ರಪತಿ ಮತ್ತು ಯೋಜನೆಯ ಬೆಂಬಲಿಗ ರಾಮ್ ನಾಥ್ ಕೋವಿಂದ್ ನೇತೃತ್ವದಲ್ಲಿ ಸಮಿತಿಯನ್ನು ರಚಿಸಲಾಯಿತು. ಸಮಿತಿಯು ತನ್ನ ವರದಿಯನ್ನು ಕೇಂದ್ರ ಸರ್ಕಾರಕ್ಕೆ ಸಲ್ಲಿಸಿದ್ದು, ಕೇಂದ್ರ ಸಚಿವ ಸಂಪುಟವೂ ಯೋಜನೆಗೆ ತನ್ನ ಅನುಮೋದನೆಯನ್ನು ನೀಡಿದೆ.

ಈ ಹಿನ್ನೆಲೆಯಲ್ಲಿ ಪ್ರಸಕ್ತ ಚಳಿಗಾಲದ ಅಧಿವೇಶನದಲ್ಲಿಯೇ ಮಸೂದೆ ಮಂಡನೆಯಾಗುವ ನಿರೀಕ್ಷೆಯಿದೆ. ಒಂದು ದೇಶ, ಒಂದು ಚುನಾವಣೆ ಯೋಜನೆಗೆ ಸಂಬಂಧಿಸಿದಂತೆ ಎಲ್ಲಾ ಪಕ್ಷಗಳ ನಡುವೆ ಅಭಿಪ್ರಾಯದ ಏಕತೆಯನ್ನು ರಚಿಸಲು ಕೇಂದ್ರ ಸರ್ಕಾರ ಬಯಸುತ್ತಿರುವ ಕಾರಣ ಮಸೂದೆಯನ್ನು ವಿಸ್ತೃತ ಚರ್ಚೆಗಾಗಿ ಸಂಸತ್ತಿನ ಜಂಟಿ ಸಮಿತಿಗೆ ಕಳುಹಿಸಬಹುದು ಎಂದು ತೋರುತ್ತದೆ.

ಈ ಪ್ರಮುಖ ಮಸೂದೆಯು ಕನಿಷ್ಟ 6 ಸಾಂವಿಧಾನಿಕ ತಿದ್ದುಪಡಿ ಮಸೂದೆಗಳನ್ನು ಒಳಗೊಂಡಿದ್ದು ಮತ್ತು ಅವುಗಳನ್ನು ಅಂಗೀಕರಿಸಲು ಉಭಯ ಸದನಗಳಲ್ಲಿ ಮೂರನೇ 2-ರಷ್ಟು ಬಹುಮತದ ಅಗತ್ಯವಿದೆ ಎಂಬುದನ್ನು ಗಮನಿಸಬೇಕು. ಡಿಎಂಕೆ ಸೇರಿದಂತೆ ವಿವಿಧ ವಿರೋಧ ಪಕ್ಷಗಳು ಈ ಯೋಜನೆಗೆ ತೀವ್ರ ವಿರೋಧ ವ್ಯಕ್ತಪಡಿಸಿವೆ. ಆದರೆ 2029ರ ಲೋಕಸಭೆ ಚುನಾವಣೆಗೂ ಮುನ್ನ ಈ ವ್ಯವಸ್ಥೆ ಜಾರಿಯಾಗಲಿದೆ ಎಂದು ಕೇಂದ್ರ ಗೃಹ ಸಚಿವ ಅಮಿತ್ ಶಾ ಹೇಳಿದ್ದು ಗಮನಾರ್ಹ.

ರಾಜಕೀಯ

ಮುಂಬೈ: ಮಹಾರಾಷ್ಟ್ರದಲ್ಲಿ ಬಿಜೆಪಿ ಸಮ್ಮಿಶ್ರ ಸರ್ಕಾರ ನಾಳೆ (ನವೆಂಬರ್ 25) ಮತ್ತೆ ಅಧಿಕಾರಕ್ಕೆ ಬರುವ ಸಾಧ್ಯತೆ ಇದೆ ಎಂಬ ಮಾಹಿತಿ ಬಹಿರಂಗವಾಗಿದೆ.

ಮಹಾರಾಷ್ಟ್ರ ವಿಧಾನಸಭೆ ಚುನಾವಣೆಯಲ್ಲಿ ಮಹಾಯುತಿ ಮೈತ್ರಿಕೂಟ ಭರ್ಜರಿ ಗೆಲುವು ಸಾಧಿಸಿದೆ. ಮೈತ್ರಿಕೂಟ 235 ಸ್ಥಾನಗಳನ್ನು ಗೆದ್ದಿದೆ. ಬಿಜೆಪಿ ಏಕೈಕ ದೊಡ್ಡ ಪಕ್ಷವಾಗಿದೆ. ಹಾಗಾಗಿ ಮುಂದಿನ ಮುಖ್ಯಮಂತ್ರಿ ಯಾರು ಎಂಬ ಪ್ರಶ್ನೆ ಎದ್ದಿದೆ.

ಬಿಜೆಪಿಯ ಫಡ್ನವೀಸ್ ಮತ್ತು ಹಾಲಿ ಮುಖ್ಯಮಂತ್ರಿ ಏಕನಾಥ್ ಶಿಂಧೆ ನಡುವೆ ತೀವ್ರ ಪೈಪೋಟಿ ಏರ್ಪಟ್ಟಿದೆ. ಆದರೂ, ಮುಂದಿನ ಮುಖ್ಯಮಂತ್ರಿ ಯಾರೆಂಬುದು ಇನ್ನೂ ನಿರ್ಧಾರವಾಗಿಲ್ಲ ಎನ್ನಲಾಗಿದೆ. ಮೈತ್ರಿ ಪಕ್ಷಗಳೊಂದಿಗೆ ಮಾತುಕತೆ ನಡೆಸಿ ನೂತನ ಮುಖ್ಯಮಂತ್ರಿಯನ್ನು ನಿರ್ಧರಿಸಲಾಗುವುದು ಎಂದು ಫಡ್ನವೀಸ್ ಹೇಳಿದ್ದಾರೆ.

ಈ ಹಿನ್ನೆಲೆಯಲ್ಲಿ, ಏಕನಾಥ್ ಶಿಂಧೆ ಬೆಂಬಲಿಗ ಹಾಗೂ ಹಿರಿಯ ಸಚಿವ ದೀಪಕ್ ಕೇಸರ್ಕರ್ ಅವರು ಮಹಾರಾಷ್ಟ್ರ ರಾಜ್ಯ ಸರ್ಕಾರದ ಪ್ರಮಾಣ ವಚನ ಸ್ವೀಕಾರ ಸಮಾರಂಭ ನಾಳೆ ನಡೆಯಲಿದೆ ಎಂದು ಹೇಳಿದ್ದಾರೆ.

ಅದೇ ಸಮಯದಲ್ಲಿ, ನಾಳೆ ಮುಖ್ಯಮಂತ್ರಿ ಹಾಗೂ ಉಪಮುಖ್ಯಮಂತ್ರಿಗಳು ಮಾತ್ರ ಪ್ರಮಾಣ ವಚನ ಸ್ವೀಕರಿಸಲಿದ್ದಾರೆ ಎನ್ನಲಾಗುತ್ತಿದೆ. ಯಾರನ್ನು ಸಂಪುಟಕ್ಕೆ ಸೇರಿಸಿಕೊಳ್ಳಬೇಕು ಎಂಬ ಬಗ್ಗೆ ಇನ್ನಷ್ಟೇ ನಿರ್ಧಾರ ಆಗಬೇಕಿದೆ.

ಶಿಕ್ಷಣ

ಜೈಪುರ: ರಾಜಸ್ಥಾನದ ಉನ್ನತ ಶಿಕ್ಷಣ ಇಲಾಖೆ ಹೊರಡಿಸಿರುವ ಹೇಳಿಕೆಯಲ್ಲಿ, ರಾಜ್ಯ ಸರ್ಕಾರದ ‘ಕಾಯಕಲ್ಪ್’ ಯೋಜನೆಯಡಿ, ಸರ್ಕಾರಿ ಕಾಲೇಜುಗಳ ಪ್ರವೇಶದ್ವಾರದ ಬಾಗಿಲುಗಳಿಗೆ ‘ಕಿತ್ತಳೆ’ ಬಣ್ಣ ಬಳಿಯಬೇಕು ಎಂದು ಆದೇಶಿಸಲಾಗಿದೆ. ಇದರ ಪ್ರಕಾರ ಮೊದಲ ಹಂತದಲ್ಲಿ 10 ಮಂಡಲಗಳ 20 ಸರ್ಕಾರಿ ಕಾಲೇಜುಗಳ ಪ್ರವೇಶ ದ್ವಾರಗಳಿಗೆ ಮುಂದಿನ 7 ದಿನಗಳೊಳಗೆ ಕಿತ್ತಳೆ ಬಣ್ಣ ಬಳಿದು ಫೋಟೋ ತೆಗೆದು ಶಿಕ್ಷಣ ಇಲಾಖೆಗೆ ಕಳುಹಿಸಬೇಕು ಎಂದು ಹೇಳಿದೆ.

ಇದಕ್ಕೆ ಕಾರಣದ ಬಗ್ಗೆ ರಾಜಸ್ಥಾನ ಶಿಕ್ಷಣ ಇಲಾಖೆ ನೀಡಿರುವ ವಿವರಣೆಯಲ್ಲಿ, ಕಾಲೇಜು ಪ್ರವೇಶಿಸುವಾಗಲೇ ವಿದ್ಯಾರ್ಥಿಗಳು ಸಕಾರಾತ್ಮಕ ಭಾವನೆ ಹೊಂದುವ ರೀತಿಯಲ್ಲಿ, ಕಾಲೇಜುಗಳ ಶೈಕ್ಷಣಿಕ ವಾತಾವರಣ ಮತ್ತು ಸನ್ನಿವೇಶ ಇರಬೇಕು. ಉನ್ನತ ಶಿಕ್ಷಣದ ಬಗ್ಗೆ ಒಳ್ಳೆಯ ಸಂದೇಶವನ್ನು ಸಮಾಜಕ್ಕೆ ತಿಳಿಸಬೇಕು. ಹಾಗಾಗಿ ಕಾಲೇಜುಗಳಲ್ಲಿ ಸಕಾರಾತ್ಮಕ, ಸ್ವಚ್ಛ ಹಾಗೂ ಆರೋಗ್ಯಕರ ಶೈಕ್ಷಣಿಕ ವಾತಾವರಣ ನಿರ್ಮಿಸಲು ಈ ಕ್ರಮ ಕೈಗೊಳ್ಳಲಾಗಿದೆ ಎನ್ನಲಾಗಿದೆ.

ಅದೇ ಸಮಯದಲ್ಲಿ, ಇದು ಶಿಕ್ಷಣ ಕ್ಷೇತ್ರವನ್ನು ಕೇಸರಿಕರಣಗೊಳಿಸುವ ಪ್ರಯತ್ನ ಎಂದು ಕಾಂಗ್ರೆಸ್ ಟೀಕಿಸಿದೆ. ಈ ಕುರಿತು ಕಾಂಗ್ರೆಸ್ ವಿದ್ಯಾರ್ಥಿ ತಂಡದ ರಾಜ್ಯಾಧ್ಯಕ್ಷ ವಿನೋದ್ ಜಾಖರ್ (Vinod Jakhar) ಮಾತನಾಡಿ, “ರಾಜ್ಯದಲ್ಲಿ ಸಾವಿರಾರು ಉಪನ್ಯಾಸಕರ ಹುದ್ದೆಗಳು ಖಾಲಿ ಇವೆ. ಕಾಲೇಜುಗಳಿಗೆ ಅಗತ್ಯ ಕಟ್ಟಡ ಸೌಕರ್ಯವಿಲ್ಲ; ಮೇಜುಗಳು ಇಲ್ಲ. ಈ ಹಿನ್ನೆಲೆಯಲ್ಲಿ, ರಾಜ್ಯ ಸರ್ಕಾರ ಸಾರ್ವಜನಿಕರ ಹಣವನ್ನು ರಾಜಕೀಯಕ್ಕಾಗಿ ಬಳಸುತ್ತಿದ್ದಾರೆ” ಎಂದು ಟೀಕಿಸಿದ್ದಾರೆ.

ದೇಶ

ನವದೆಹಲಿ: ಉತ್ತರ ರಾಜ್ಯಗಳಲ್ಲಿ ಇಂದಿನಿಂದ ಪ್ರಾರಂಭವಾಗುವ ನವರಾತ್ರಿಯ ದಿನಗಳ ನಡುವೆ ಸಾಮಾನ್ಯವಾಗಿ ಗರ್ಬಾ ಎಂಬ ಕೋಲಾಟ ನೃತ್ಯಗಳನ್ನು ನಡೆಸಲಾಗುತ್ತದೆ. ಕಾರ್ಯಕ್ರಮವು ಮಧ್ಯರಾತ್ರಿ ಮತ್ತು ಹಗಲಿನಲ್ಲಿ ಕೆಲವು ಗಂಟೆಗಳ ಕಾಲ ನಡೆಯುತ್ತವೆ.

ಹಿಂದೂಗಳಿಗೆ ಮಾತ್ರ ಅವಕಾಶವಿರುವ ಈ ಕಾರ್ಯಕ್ರಮಕ್ಕೆ ಮುಸ್ಲಿಂ ಯುವಕರೂ ಪ್ರವೇಶ ಮಾಡುತ್ತಿದ್ದಾರೆ ಎಂಬ ದೂರುಗಳಿವೆ. ಇದನ್ನು ತಡೆಯಲು ಸಂಘಟಕರು ಪ್ರತಿ ವರ್ಷವೂ ಹೊಸ ಹೊಸ ತಂತ್ರಗಳನ್ನು ಅನುಸರಿಸುತ್ತಾರೆ. ಈ ವರ್ಷ ಅದಕ್ಕೊಂದು ವಿವಾದಾತ್ಮಕ ಅಲೋಚನೆಯನ್ನು ಇಂದೋರ್ ಗ್ರಾಮಾಂತರ ಜಿಲ್ಲಾ ಬಿಜೆಪಿ ಅಧ್ಯಕ್ಷ ಚಿಂಟು ವರ್ಮಾ ನೀಡಿದ್ದಾರೆ.

ಈ ಬಗ್ಗೆ ಮಾತನಾಡಿರುವ ಚಿಂಟು ವರ್ಮಾ, ‘ಈ ವರ್ಷ ಗರ್ಬಾ ಪಂದಳಕ್ಕೆ ಪ್ರವೇಶಿಸುವ ಮುನ್ನ ನೀಡುವ ಪ್ರಸಾದದಲ್ಲಿ ಬದಲಾವಣೆ ಅವಶ್ಯ. ಇದರಲ್ಲಿ ನಾವು ನಮ್ಮ ಗೋಮಾತೆಯ ಗೋಮಿಯವನ್ನು ಕುಡಿಯಲು ಪ್ರವೇಶಿಸುವ ಎಲ್ಲರಿಗೂ ಅರ್ಪಿಸಬೇಕು. ಇದರೊಂದಿಗೆ ಶ್ರೀಗಂಧದಿಂದ ಹಣೆಯ ಮೇಲೆ ತಿಲಕವನ್ನು ಹಚ್ಚಬೇಕು.

ಪ್ರಸ್ತುತ, ಆಧಾರ್ ಕಾರ್ಡ್ ಮೂಲಕ ಗರ್ಬಾ ಪಂದಳಕ್ಕೆ ಪ್ರವೇಶ ನೀಡಲಾಗುತ್ತದೆ. ಈ ಕಾರ್ಡ್ ಅನ್ನು ಮಾರ್ಫಿಂಗ್ ಮಾಡುವ ಮೂಲಕವೂ ಹೆಸರುಗಳನ್ನು ಬದಲಾಯಿಸಬಹುದು. ಹಾಗಾಗಿ ಗೋವಿನ ಗೋಮಿಯಂ ಕುಡಿಯುವುದರಿಂದ ಗರ್ಬಾ ಪಂದಳದಲ್ಲಿ ರಕ್ಷಣೆ ಸಿಗುತ್ತದೆ. ಇದನ್ನು ಕುಡಿಯದವರನ್ನು ಒಳಗೆ ಬಿಡಬಾರದು’ ಎಂದರು.

ಬಿಜೆಪಿ ನಾಯಕರ ಈ ಘೋಷಣೆಯನ್ನು ಕಾಂಗ್ರೆಸ್ ನ ಮಾಜಿ ಸಚಿವೆ ಹಾಗೂ ಹಾಲಿ ಶಾಸಕಿ ಉಷಾ ಠಾಕೂರ್ (Usha Thakur) ಸ್ವಾಗತಿಸಿದ್ದಾರೆ. ಈ ಕುರಿತು ಮಾತನಾಡಿರುವ ಅವರು ‘ಸನಾತನದಲ್ಲಿ ನಂಬಿಕೆ ಇರುವವರಿಗೆ ಇದೊಂದು ಒಳ್ಳೆಯ ಉಪಾಯ. ಗೋಮಿಯವನ್ನು ಕುಡಿಯುವುದರಿಂದ ನಮ್ಮ ರೋಗಗಳು ದೂರವಾಗುತ್ತವೆ ಮತ್ತು ನಮ್ಮ ದೇಹ ಮತ್ತು ವಾಸಸ್ಥಳವು ಶುದ್ಧವಾಗುತ್ತದೆ. ಪದ್ಧತಿಯ ಪ್ರಕಾರ, ಗೋಮಿಯಂ ಅನ್ನು 21 ಬಟ್ಟೆಗಳ ಮೂಲಕ ಫಿಲ್ಟರ್ ಮಾಡುವುದು ಉತ್ತಮ’ ಎಂದರು.

ಈ ಗರ್ಬಾ ನೃತ್ಯವನ್ನು ಗುಜರಾತ್‌ನಲ್ಲಿ ಮಾತ್ರ ಪ್ರದರ್ಶಿಸಲಾಯಿತು. ಇದು ಬಾಲಿವುಡ್ ಚಿತ್ರಗಳಲ್ಲಿ ಕಾಣಿಸಿಕೊಂಡ ಪರಿಣಾಮವಾಗಿ ಇತರ ರಾಜ್ಯಗಳಿಗೂ ಹರಡಿತು. ಗರ್ಬಾ ನೃತ್ಯಕ್ಕೆ ಹೋಗುವ ಹುಡುಗಿಯರನ್ನು ಓಲೈಸಲು ಯುವಕರು ಪ್ರಯತ್ನಿಸುತ್ತಾರೆ. ಇದನ್ನು ತಡೆಯಲು ಬಾಲಕಿಯರ ಪೋಷಕರು ಖಾಸಗಿ ಗುಪ್ತಚರ ಸಂಸ್ಥೆಗಳ ಮೊರೆ ಹೋಗುವುದೂ ಉಂಟು.

ದೇಶ

ಗುರ್ಗಾನ್: ಮುಂಬರುವ ಸಂಸತ್ತಿನ ಅಧಿವೇಶನದಲ್ಲಿ ವಕ್ಫ್ ಮಸೂದೆಯನ್ನು ಮಂಡಿಸಲಾಗುವುದು ಎಂದು ಕೇಂದ್ರ ಗೃಹ ಸಚಿವ ಅಮಿತ್ ಶಾ ಭರವಸೆ ನೀಡಿದ್ದಾರೆ.

ಹರಿಯಾಣದ ಗುರ್ಗಾನ್ನ (Gurgaon) ಬಾದಶಾಪುರದಲ್ಲಿ ಚುನಾವಣಾ ಪ್ರಚಾರ ಸಭೆಯಲ್ಲಿ ಭಾಗವಹಿಸಿ ಮಾತನಾಡಿದ ಕೇಂದ್ರ ಗೃಹ ಸಚಿವ ಅಮಿತ್ ಶಾ, “ವಕ್ಫ್ ತಿದ್ದುಪಡಿ ಮಸೂದೆ (Waqf Amendment Bill 2024) ಮುಂಬರುವ ಸಂಸತ್ತಿನ ಚಳಿಗಾಲದ ಅಧಿವೇಶನದಲ್ಲಿ ಮಸೂದೆಯನ್ನು ಮಂಡಿಸಲಿದ್ದೇವೆ. ಇದರೊಂದಿಗೆ ಮಂಡಳಿಯ ಕೋರಿಕೆಯಂತೆ ಹಣ ವಿತರಣೆಗೂ ಅನುಮತಿ ನೀಡಲಾಗಿದೆ.

ಈ ಮಸೂದೆಗೆ ಸಂಬಂಧಿಸಿದಂತೆ ವಕ್ಫ್ ಮಂಡಳಿಯ ಪ್ರತಿನಿಧಿಗಳು ಮಾಡಿರುವ ಆರೋಪಗಳನ್ನು ಒಪ್ಪಲು ಸಾಧ್ಯವಿಲ್ಲ. ಪರಿಶೀಲನಾ ಸಮಿತಿಯ ಅಧ್ಯಕ್ಷರಾಗಿರುವ ಬಿಜೆಪಿಯ ಜಗದಾಂಬಿಕಾ ಪಾಲ್ ಅವರು ಮಸೂದೆಯ ಸಂಪೂರ್ಣ ವಿವರಗಳನ್ನು ಅಧ್ಯಯನ ಮಾಡುತ್ತಿದ್ದಾರೆ” ಎಂದು ಹೇಳಿದ್ದಾರೆ.

ರಾಜಕೀಯ

ವಿರುದುನಗರ: ತಮಿಳುನಾಡು ವಿರುದುನಗರ ಜಿಲ್ಲಾ ಹಿಂದುಳಿದ ಮತ್ತು ಅಲ್ಪಸಂಖ್ಯಾತರ ಕಲ್ಯಾಣ ಕಛೇರಿ ವತಿಯಿಂದ ಜಿಲ್ಲಾಧಿಕಾರಿಗಳ ಸಭೆಯಲ್ಲಿ, ಮುಸ್ಲಿಂ ಮಹಿಳಾ ಸಹಾಯ ಸಂಘದಿಂದ ಆಯೋಜಿಸಿದ್ದ ಕ್ಷೇಮಾಭಿವೃದ್ಧಿ ಕಾರ್ಯಕ್ರಮದ ಅಧ್ಯಕ್ಷತೆಯನ್ನು ಜಿಲ್ಲಾಧಿಕಾರಿ ಜಯಶೀಲನ್ ವಹಿಸಿದ್ದರು. ಈ ಕಾರ್ಯಕ್ರಮದಲ್ಲಿ ಭಾಗವಹಿಸಿದ್ದ ವಿರುದುನಗರ ಸಂಸದ ಮಾಣಿಕಂ ಟ್ಯಾಗೋರ್ (Manickam Tagore) ಅವರು 108 ಫಲಾನುಭವಿಗಳಿಗೆ 10.24 ಲಕ್ಷ ರೂ.ಗಳ ಕಲ್ಯಾಣ ನೆರವನ್ನು ನೀಡಿದರು.

ಬಳಿಕ ಸುದ್ದಿಗಾರರೊಂದಿಗೆ ಮಾತನಾಡಿದ ಸಂಸದ ಮಾಣಿಕಂ ಟ್ಯಾಗೋರ್, “ನೈತಿಕ ಹಕ್ಕು ಬಗ್ಗೆ ಮಾತನಾಡುವ ಬಿಜೆಪಿಯವರಿಗೆ ಅದೇ ನೈತಿಕ ಹಕ್ಕು ನಿರ್ಮಲಾ ಸೀತಾರಾಮನ್ (Nirmala Sitharaman) ಅವರಿಗಿಲ್ಲವೇ ಎಂದು ಪ್ರಶ್ನಿಸಿದ್ದಾರೆ. ನೈತಿಕ ಹಕ್ಕಿನೊಂದಿಗೆ ನಿರ್ಮಲಾ ಸೀತಾರಾಮನ್ ಕೂಡಲೆ ರಾಜೀನಾಮೆ ನೀಡಬೇಕೆಂದು ಒತ್ತಾಯಿಸಿದ್ದಾರೆ.

ಹಾಗೆಯೇ ನಿರ್ಮಲಾ ಸೀತಾರಾಮನ್ ಕೆಳಗಿಳಿದು ಎಲ್ಲರಿಗೂ ಮಾದರಿಯಾಗಲಿದ್ದಾರೆಯೇ? ಅಥವಾ, ನೈತಿಕ ಹಕ್ಕು ಎಂಬುದಲ್ಲೆವೂ ಇತರರಿಗೆ ಮಾತ್ರ. ಇತರರಿಗೆ ಬಂದರೆ ರಕ್ತ.. ತನಗೆ ಬಂದರೆ ಅದು ಟೊಮೆಟೊ ಚಟ್ನಿ ಎಂದು ಹೇಳುತ್ತಾರೆಯೇ? ಎಂದು ಖಾರವಾಗಿ ಪ್ರಶ್ನಿಸಿದ್ದಾರೆ.

ಮುಂದುವರಿದು ಮಾತನಾಡಿದ ಸಂಸದ ಮಾಣಿಕಂ ಟ್ಯಾಗೋರ್, ನಿರ್ಮಲಾ ಸೀತಾರಾಮನ್ ವಿರುದ್ಧ ಪ್ರಕರಣ ದಾಖಲಾಗಿದ್ದು, ಈ ಹಿನ್ನೆಲೆಯಲ್ಲಿ ಅವರು ಕೂಡಲೇ ರಾಜೀನಾಮೆ ನೀಡಬೇಕು ಎಂದು ಒತ್ತಾಯಿಸಿದ್ದಾರೆ.

ದೇಶ ರಾಜಕೀಯ

ಚಂಡೀಗಢ: ಹರಿಯಾಣದ ಮಹಿಳೆಯರಿಗೆ ತಿಂಗಳಿಗೆ 2,100 ರೂ., ಅಗ್ನಿ ಯೋಧರಿಗೆ ಸರ್ಕಾರಿ ಉದ್ಯೋಗ ನೀಡುವುದಾಗಿ ಬಿಜೆಪಿ ಭರವಸೆ ನೀಡಿದೆ.

ಅಕ್ಟೋಬರ್ 5 ರಂದು ಹರಿಯಾಣ ವಿಧಾನಸಭಾ ಚುನಾವಣೆ ನಡೆಯಲಿದೆ. ಈ ರಾಜ್ಯದಲ್ಲಿ ಮತ್ತೆ ಅಧಿಕಾರ ಹಿಡಿಯಲು ಬಿಜೆಪಿ ಗಂಭೀರತೆ ತೋರಿಸುತ್ತಿದೆ. ಕೇಂದ್ರ ಆರೋಗ್ಯ ಸಚಿವ ಹಾಗೂ ಬಿಜೆಪಿ ನಾಯಕ ಜೆ.ಪಿ.ನಡ್ಡಾ ವಿಧಾನಸಭೆ ಚುನಾವಣೆಗೆ ಪ್ರಣಾಳಿಕ ಬಿಡುಗಡೆ ಮಾಡಿದರು.

ಭರವಸೆಗಳೇನು?
ಹರಿಯಾಣದ ಎಲ್ಲ ಮಹಿಳೆಯರಿಗೆ ಮಾಸಿಕ ರೂ.2100 ಸಹಾಯಧನ ನೀಡಲಾಗುವುದು.

ಅಂತ್ಯೋದಯ ಯೋಜನೆಯಡಿ ಪ್ರತಿ ಸಿಲಿಂಡರ್‌ಗೆ ರೂ.500 ಸಬ್ಸಿಡಿ ನೀಡಲಾಗುವುದು.

ದಕ್ಷಿಣ ಹರಿಯಾಣದಲ್ಲಿ ಅಂತಾರಾಷ್ಟ್ರೀಯ ಮಟ್ಟದ ಅರಾವಳಿ ಫಾರೆಸ್ಟ್ ಸಫಾರಿ ಪಾರ್ಕ್ ಅನ್ನು ಸ್ಥಾಪಿಸಲಾಗುವುದು.

ವೃತ್ತಿಪರ ಶಿಕ್ಷಣವನ್ನು ಕಲಿಯುತ್ತಿರುವ ಪರಿಶಿಷ್ಟ ವಿದ್ಯಾರ್ಥಿಗಳಿಗೆ ವಿದ್ಯಾರ್ಥಿವೇತನವನ್ನು ನೀಡಲಾಗುವುದು.

ಹರಿಯಾಣದಲ್ಲಿ ವಾಸಿಸುವ ಅಗ್ನಿ ಯೋಧರಿಗೆ ಕಡ್ಡಾಯವಾಗಿ ಸರ್ಕಾರಿ ಉದ್ಯೋಗ ನೀಡಲಾಗುವುದು ಎಂಬಿತ್ಯಾದಿ ಭರವಸೆಗಳನ್ನು ಬಿಜೆಪಿ ನೀಡಿದೆ.

ಕಾಂಗ್ರೆಸ್ ಪಕ್ಷವು ಮಹಿಳೆಯರಿಗೆ ಮಾಸಿಕ 2 ಸಾವಿರ ರೂ.ಗಳನ್ನು ಘೋಷಿಸಿದ ಬೆನ್ನಲ್ಲೇ, ಬಿಜೆಪಿ 2,100 ರೂ.ಗಳನ್ನು ಘೋಷಿಸಿರುವುದು ಗಮನಾರ್ಹ.

ಪ್ರಣಾಳಿಕೆ ಬಿಡುಗಡೆಗೊಳಿಸಿ ಮಾತನಾಡಿದ ನಡ್ಡಾ, “ಕಾಂಗ್ರೆಸ್ ಚುನಾವಣಾ ಭರವಸೆಗಳು ಖಾಲಿ ಕಾಗದ. ಅವರು ಕರ್ತವ್ಯಕ್ಕಾಗಿ ಭರವಸೆ ನೀಡುತ್ತಿದ್ದಾರೆ. ಚುನಾವಣೆ ಭರವಸೆ ನೀಡಿ ಜನರನ್ನು ವಂಚಿಸುತ್ತಾರೆ. 10 ವರ್ಷಗಳ ಹಿಂದೆ ಹರಿಯಾಣದಲ್ಲಿ ಕಾಂಗ್ರೆಸ್ ಆಡಳಿತ ಹೇಗಿತ್ತು? ಅವರ ಆಡಳಿತವು ಭೂ ಹಗರಣಗಳಿಗೆ ಹೆಸರುವಾಸಿಯಾಗಿದೆ. ನಾವು ಹರಿಯಾಣ ಜನತೆಗೆ ಅವಿರತ ಸೇವೆ ಸಲ್ಲಿಸುತ್ತಿದ್ದೇವೆ” ಎಂದು ಹೇಳಿದರು.

ದೇಶ ರಾಜಕೀಯ

ನವದೆಹಲಿ: ಕಚ್ಚಾ ತೈಲ ಬೆಲೆ ಇಳಿಕೆಯಾಗಿದ್ದರೂ ಪೆಟ್ರೋಲ್ ಬೆಲೆ ಏಕೆ ಕಡಿಮೆಯಾಗಿಲ್ಲ? ಎಂಬ ಪ್ರಶ್ನೆಯನ್ನು ಕಾಂಗ್ರೆಸ್ ಮತ್ತು ತೃಣಮೂಲ ಕಾಂಗ್ರೆಸ್ ಪಕ್ಷ ಎತ್ತಿದೆ.

ಸಾರ್ವಜನಿಕ ವಲಯದ ತೈಲ ಕಂಪನಿಗಳು ಅಂತಾರಾಷ್ಟ್ರೀಯ ಮಾರುಕಟ್ಟೆಯ ಸ್ಥಿತಿಗತಿಗಳಿಗೆ ಅನುಗುಣವಾಗಿ ಪೆಟ್ರೋಲ್ ಮತ್ತು ಡೀಸೆಲ್‌ನ ದೇಶೀಯ ಬೆಲೆಗಳನ್ನು ಪ್ರತಿದಿನ ನಿಗದಿಪಡಿಸುತ್ತವೆ. ಕಳೆದ ಕೆಲವು ದಿನಗಳಿಂದ ಕಚ್ಚಾ ತೈಲ ಬೆಲೆಯಲ್ಲಿ ಏರಿಳಿತ ಕಂಡು ಬರುತ್ತಿದ್ದರೂ ಪೆಟ್ರೋಲ್ ಡೀಸೆಲ್ ಬೆಲೆ ಯಾವುದೇ ಬದಲಾವಣೆಯಿಲ್ಲದೆ ಹೆಚ್ಚುತ್ತಲೇ ಇದೆ.

ಈ ಹಿನ್ನೆಲೆಯಲ್ಲಿ, ಕಾಂಗ್ರೆಸ್ ನಾಯಕ ಮಲ್ಲಿಕಾರ್ಜುನ ಖರ್ಗೆ, ಸಾಮಾಜಿಕ ಜಾಲತಾಣದಲ್ಲಿ ಪ್ರಕಟಿಸಿರುವ ಹೇಳಿಕೆಯಲ್ಲಿ, “ಕಚ್ಚಾ ತೈಲ ಬೆಲೆ ಇಳಿಕೆಯಾಗಿದ್ದರೂ ಪೆಟ್ರೋಲ್ ಬೆಲೆ ಕಡಿಮೆ ಮಾಡದಿರುವುದು ಏಕೆ? ಬಿಜೆಪಿ ಅಧಿಕಾರಕ್ಕೆ ಬಂದ ನಂತರ ಕಚ್ಚಾ ತೈಲ ಶೇ.32ರಷ್ಟು ಕುಸಿದಿದೆ. ಕಚ್ಚಾ ತೈಲ ಬೆಲೆಯಲ್ಲಿ 32.5% ಇಳಿಕೆಯಾಗಿದ್ದರೂ, ಬಿಜೆಪಿ ಸರ್ಕಾರವು ಪೆಟ್ರೋಲ್ ಮತ್ತು ಡೀಸೆಲ್ ಬೆಲೆಯನ್ನು ಕಡಿಮೆ ಮಾಡಲು ನಿರಾಕರಿಸುತ್ತಿದೆ.

ಪ್ರಸ್ತುತ ಮಾರುಕಟ್ಟೆಯ ಸ್ಥಿತಿಗತಿಗಳ ಪ್ರಕಾರ, ಪೆಟ್ರೋಲ್ ಅನ್ನು ಲೀಟರ್‌ಗೆ ರೂ.48.27 ಮತ್ತು ಡೀಸೆಲ್‌ಗೆ ರೂ.69.00 ರಂತೆ ಮಾರಾಟ ಮಾಡಬೇಕು. 10 ವರ್ಷ 100 ದಿನಗಳಲ್ಲಿ ಬಿಜೆಪಿ ಸರ್ಕಾರ ಇಂಧನದ ಮೇಲೆ ತೆರಿಗೆ ವಿಧಿಸಿ ಜನರ 35 ಲಕ್ಷ ಕೋಟಿ ರೂಪಾಯಿ ಲೂಟಿ ಮಾಡಿದೆ. ಪೆಟ್ರೋಲ್, ಡೀಸೆಲ್ ಬೆಲೆ ಇಳಿಕೆ ಮಾಡದ ಬಿಜೆಪಿ ಸರ್ಕಾರವನ್ನು ಚುನಾವಣೆಯಲ್ಲಿ ಜನ ತಿರಸ್ಕರಿಸುತ್ತಾರೆ” ಎಂದು ಹೇಳಿದ್ದಾರೆ.

ತೃಣಮೂಲ ಕಾಂಗ್ರೆಸ್ ಪ್ರಶ್ನೆ:
ಈ ಬಗ್ಗೆ ಮಾತನಾಡಿರುವ ತೃಣಮೂಲ ಕಾಂಗ್ರೆಸ್ ಸಂಸದ ಡೆರೆಕ್ ಒ’ಬ್ರಿಯಾನ್ (Derek O’Brien), “ಕಳೆದ 10 ವರ್ಷಗಳಲ್ಲಿ, ಕಚ್ಚಾ ತೈಲದ ಬೆಲೆ ತೀವ್ರವಾಗಿ ಕುಸಿದಿದ್ದರೂ, ಪೆಟ್ರೋಲ್ ಬೆಲೆ ಶೇ.30ರಷ್ಟು ಹೆಚ್ಚಾಗಿದೆ. ಇದರಿಂದ ತೈಲ ಕಂಪನಿಗಳು ಹೆಚ್ಚಿನ ಲಾಭ ಪಡೆಯುತ್ತವೆ. ಆದರೆ ಇದರ ಪ್ರಯೋಜನ ಜನಸಾಮಾನ್ಯರಿಗೆ ಸಿಗುತ್ತಿಲ್ಲ. ಅಂತರಾಷ್ಟ್ರೀಯ ಮಾರುಕಟ್ಟೆಯಲ್ಲಿ ಕಚ್ಚಾ ತೈಲ ಬೆಲೆ ಕಡಿಮೆಯಾದರೂ ಪೆಟ್ರೋಲ್ ಬೆಲೆ ಕಡಿಮೆ ಮಾಡದಿರುವುದು ಏಕೆ?” ಎಂದು ಪ್ರಶ್ನಿಸಿದ್ದಾರೆ.

ರಾಜಕೀಯ

ಕಾಶ್ಮೀರಿ ಪಂಡಿತರು ವಿಧಾನಸಭೆ ಚುನಾವಣೆಯನ್ನು ಬಹಿಷ್ಕರಿಸುವುದಾಗಿ ಘೋಷಿಸಿದ್ದಾರೆ.

ಜಮ್ಮು ಮತ್ತು ಕಾಶ್ಮೀರ ವಿಧಾನಸಭಾ ಚುನಾವಣೆಗೆ ಮೊದಲ ಹಂತದ ಮತದಾನ ಸೆಪ್ಟೆಂಬರ್ 18 ರಂದು ನಡೆಯಲಿದೆ. “ಇಂಡಿಯಾ ಮೈತ್ರಿಕೂಟ”ದಲ್ಲಿ ನ್ಯಾಷನಲ್ ಕಾನ್ಫರೆನ್ಸ್, ಕಾಂಗ್ರೆಸ್, ಮಾರ್ಕ್ಸಿಸ್ಟ್ ಕಮ್ಯುನಿಸ್ಟ್ ಪಕ್ಷ, ಪ್ಯಾಂಥರ್ ಪಕ್ಷಗಳು ಸ್ಪರ್ಧಿಸುತ್ತಿವೆ.

ಅಂತೆಯೇ ಈ ಚುನಾವಣೆಯನ್ನು ಬಿಜೆಪಿ ಮತ್ತು ಡೆಮಾಕ್ರಟಿಕ್ ಪಾರ್ಟಿ ಪ್ರತ್ಯೇಕವಾಗಿ ಎದುರಿಸುತ್ತಿವೆ. ಇದರಿಂದ ತ್ರಿಕೋನ ಸ್ಪರ್ಧೆ ಏರ್ಪಟ್ಟಿದೆ. ಈ ಹಿನ್ನೆಲೆಯಲ್ಲಿ, ಚುನಾವಣಾ ಸಮಯದಲ್ಲಿ ಮಾತ್ರ ನಮ್ಮ ಬಗ್ಗೆ ಮಾತನಾಡುವುದೇಕೆ? ಎಂದು ಪ್ರಶ್ನಿಸಿರುವ ಕಾಶ್ಮೀರ ಪಂಡಿತರ ಸಮನ್ವಯ ಸಮಿತಿಯು ವಿಧಾನಸಭಾ ಚುನಾವಣೆಯನ್ನು ಬಹಿಷ್ಕರಿಸುವುದಾಗಿ ಘೋಷಿಸಿದೆ.

ಈ ಕುರಿತು, ಮಾತನಾಡಿರುವ ಕಾಶ್ಮೀರ ಪಂಡಿತರ ಸಂಯೋಜಕರೊಬ್ಬರು, ‘ನಾವು ಹಲವಾರು ದಶಕಗಳಿಂದ ಜಮ್ಮು ಮತ್ತು ಕಾಶ್ಮೀರದಲ್ಲಿ ವಲಸಿಗ ಸಮುದಾಯವಾಗಿದ್ದೇವೆ. ನಂತರ ಬಂದ ಸರ್ಕಾರಗಳು ಮತ್ತು ರಾಜಕೀಯ ಪಕ್ಷಗಳು ಕೂಡ ಚುನಾವಣೆ ಸಮಯದಲ್ಲಿ ಮಾತ್ರ ನಮ್ಮ ಮತ್ತು ನಮ್ಮ ಸಮಸ್ಯೆಗಳ ಬಗ್ಗೆ ಮಾತನಾಡುತ್ತವೆ.

ನಿರ್ದಿಷ್ಟವಾಗಿ ಕೆಲವು ಪಕ್ಷಗಳು ಚುನಾವಣಾ ಸಮಯದಲ್ಲಿ ಕಾಶ್ಮೀರಿ ಪಂಡಿತರಿಂದ ಲಾಭ ಪಡೆದುಕೊಳ್ಳುತ್ತವೆ. ಆದರೆ ನಮಗೆ ಯಾವುದೇ ಪ್ರಾತಿನಿಧ್ಯವನ್ನು ಕೊಡುವುದಿಲ್ಲ. ಇದರಿಂದಾಗಿ ವಿಧಾನಸಭಾ ಚುನಾವಣೆಯನ್ನು ಬಹಿಷ್ಕರಿಸುತ್ತಿದ್ದೇವೆ” ಎಂದು ಹೇಳಿದ್ದಾರೆ.

ರಾಜಕೀಯ

ನವದೆಹಲಿ: “ಬಿಜೆಪಿಯ ಕ್ಷಣಗಣನೆ ಆರಂಭವಾಗಿದೆ. ಎಲ್ಲ ರಾಜ್ಯಗಳ ಚುನಾವಣೆಯಲ್ಲೂ ಸೋಲು ಕಾಣಲಿದೆ” ಎಂದು ಮನೀಶ್ ಸಿಸೋಡಿಯಾ ಹೇಳಿದ್ದಾರೆ.

ಮುಖ್ಯ ಚುನಾವಣಾ ಆಯೋಗವು ಹರಿಯಾಣ ವಿಧಾನಸಭೆ ಚುನಾವಣೆ ದಿನಾಂಕವನ್ನು ಮರು ನಿಗದಿಪಡಿಸಿದೆ. ಅದರಂತೆ ಅಕ್ಟೋಬರ್ 1ರ ಬದಲಾಗಿ ಅಕ್ಟೋಬರ್ 5 ರಂದು ಅಲ್ಲಿ ಮತದಾನ ನಡೆಯಲಿದೆ. ಅಕ್ಟೋಬರ್ 8 ರಂದು ಮತ ಎಣಿಕೆ ನಡೆಯಲಿದೆ. ಆಮ್ ಆದ್ಮಿ ಪಕ್ಷವು ಹರಿಯಾಣದ ಎಲ್ಲಾ ಕ್ಷೇತ್ರಗಳಲ್ಲಿ ಸ್ವತಂತ್ರವಾಗಿ ಸ್ಪರ್ಧಿಸುತ್ತಿದೆ.

ಈ ಹಿನ್ನೆಲೆಯಲ್ಲಿ, ಪಕ್ಷದ ಹಿರಿಯ ನಾಯಕ ಹಾಗೂ ದೆಹಲಿಯ ಮಾಜಿ ಉಪಮುಖ್ಯಮಂತ್ರಿ ಮನೀಶ್ ಸಿಸೋಡಿಯಾ ಮಾತನಾಡಿದ್ದಾರೆ. “ಬಿಜೆಪಿಯ ಕ್ಷಣಗಣನೆ ಶುರುವಾಗಿದೆ. ಘೋಷಿಸಿದ ಎಲ್ಲಾ ಚುನಾವಣೆಗಳಲ್ಲೂ ಸೋಲುತ್ತದೆ. ಜನರು ತಮ್ಮನ್ನು ತಿರಸ್ಕರಿಸುತ್ತಿದ್ದಾರೆ ಎಂಬುದನ್ನು ಲೋಕಸಭೆ ಚುನಾವಣೆ ಫಲಿತಾಂಶದಿಂದ ಬಿಜೆಪಿಗೆ ಗೊತ್ತಾಗಿದೆ.

ಮುಂದಿನ ದಿನಗಳಲ್ಲಿ ಹರಿಯಾಣ, ಮಹಾರಾಷ್ಟ್ರ, ಜಾರ್ಖಂಡ್ ಮತ್ತು ನವದೆಹಲಿ ಚುನಾವಣೆಗಳಲ್ಲಿ ಬಿಜೆಪಿ ಸೋಲುವುದು ಖಚಿತ. ಚುನಾವಣಾ ದಿನಾಂಕಗಳನ್ನು ಬದಲಾಯಿಸುವ ಮೂಲಕ ಗೆಲ್ಲಲು ಸಾಧ್ಯವಿಲ್ಲ. ದೇಶದಾದ್ಯಂತ ಪಕ್ಷದ ಕಾರ್ಯಕರ್ತರು ಮತ್ತು ಮುಖಂಡರು ಹರಿಯಾಣದಲ್ಲಿ ಪ್ರಚಾರ ನಡೆಸಲಿದ್ದಾರೆ” ಎಂದು ಅವರು ಹೇಳಿದ್ದಾರೆ.